ಗುಬ್ಬಿ ತಾಲ್ಲೂಕಿನ ದಲಿತರ ಕುಂದು ಕೊರತೆ ಆಲಿಸಲು ಇದೇ ತಿಂಗಳ 28 ರ ಬುಧವಾರದಂದು ಶಾಸಕರಾದ ಎಸ್.ಆರ್.ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಿತರಕ್ಷಣಾ ಸಮಿತಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಗುಬ್ಬಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ಎಸ್. ವೀಣಾ ತಿಳಿಸಿದ್ದಾರೆ.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಬೆಳಿಗ್ಗೆ 11 ಕ್ಕೆ ನಡೆಯುವ ಈ ಸಭೆಯಲ್ಲಿ ದಲಿತರ ಅಭಿವೃದ್ಧಿಗೆ ಜಾರಿಯಾದ ಸರ್ಕಾರದ ಯೋಜನೆಗಳ ಅನುಷ್ಠಾನ ಹಾಗೂ ತಾಲ್ಲೂಕು ವ್ಯಾಪ್ತಿಯ ಎಲ್ಲಾ ಇಲಾಖೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಕ್ಕೆ ಸೇರಿದ ಕಾರ್ಯಕ್ರಮಗಳ ಚರ್ಚೆ ಹಾಗೂ ಗ್ರಾಮೀಣ ಭಾಗದ ದಲಿತರ ಸಮಸ್ಯೆ ಆಲಿಸಿ ಸೂಕ್ತ ಪರಿಹಾರವನ್ನು ಸಭೆಯಲ್ಲಿ ನೀಡಲಾಗುವುದು ಎಂದು ತಿಳಿಸಿದರು.
ಎಲ್ಲಾ ಇಲಾಖೆಯ ಅಧಿಕಾರಿಗಳು ಸಭೆಗೆ ಖುದ್ದು ಹಾಜರಿರುವಂತೆ ಮತ್ತು ತಾಲ್ಲೂಕಿನ ಎಲ್ಲಾ ದಲಿತ ಸಮುದಾಯದ ಮುಖಂಡರು ಸೇರಿದಂತೆ ಎಲ್ಲಾ ದಲಿತಪರ ಸಂಘಟನೆಯ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಸಭೆಗೆ ಹಾಜರಾಗುವ ಮೂಲಕ ತಮ್ಮ ಅಭಿಪ್ರಾಯ ಮತ್ತು ತಮ್ಮ ಸಮಸ್ಯೆಗೆ ಉತ್ತರ ಪಡೆಯಬಹುದು ಎಂದು ತಾಲ್ಲೂಕು ಪರಿಶಿಷ್ಟ ಜಾತಿ ಮತ್ತು ಪಂಗಡದ ಹಿತರಕ್ಷಣಾ ಸಮಿತಿ ಅಧ್ಯಕ್ಷರಾದ ತಹಶೀಲ್ದಾರ್ ಬಿ.ಆರತಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
