ಈಶಾನ್ಯ ದೆಹಲಿಯ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ಫುಟ್‌ಪಾತ್‌ನಲ್ಲಿ ಮಲಗಿದ್ದ ಐವರ ಮೇಲೆ ಟ್ರಕ್ ಹರಿದಿದ್ದು ಈ ಪೈಕಿ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ಮುಂಜಾನೆ ಸುಮಾರು 5:30ರ ಸುಮಾರಿಗೆ ಈ ಘಟನೆಯು ನಡೆದಿದೆ. ಮೃತರು ನಿರಾಶ್ರಿತರಾಗಿದ್ದು, ಫುಟ್‌ಪಾತ್‌ನಲ್ಲೇ ಜೀವನ ಸಾಗಿಸುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಅಪಘಾತದಿಂದ ಗಂಭೀರ ಗಾಯಗೊಂಡವರನ್ನು ಜಗ ಪ್ರವೇಶ್ ಚಂದ್ರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಅಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಉಳಿದ ಇಬ್ಬರನ್ನು ಜಿಟಿಬಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಕೊಪ್ಪಳ | ಅಪಘಾತ ; ಒಂದೇ ಕುಟುಂಬದ ಮೂವರು ದುರ್ಮರಣ
ಸದ್ಯ ಪರಾರಿಯಾಗಿರುವ ಟ್ರಕ್ ಚಾಲಕನ ಶೋಧಕ್ಕಾಗಿ ತಂಡಗಳನ್ನು ರಚಿಸಲಾಗಿದೆ. ಮೃತರನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ವರದಿಯಾಗಿದೆ.
VIDEO | Three persons died after a truck allegedly ran over five people sleeping on a footpath in the Shastri Park area of northeast Delhi in the early hours of Monday. pic.twitter.com/60xlX1pu9I
— Press Trust of India (@PTI_News) August 26, 2024