ರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದುಕೊಟ್ಟ ದೇಶದ್ರೋಹಿಗಳು ಈಗಲೂ ಇದ್ದಾರೆ: ಸಿದ್ದರಾಮಯ್ಯ

Date:

Advertisements

ಜನರ ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ ಸ್ಪಷ್ಟ ಎಚ್ಚರಿಕೆ ಕೊಟ್ಟರು.

ಕೌಜಲಗಿಯಲ್ಲಿ ಆಯೋಜಿಸಿದ್ದ ಅದ್ದೂರಿ ಕಾರ್ಯಕ್ರಮದಲ್ಲಿ ಸಂಗೊಳ್ಳಿ ರಾಯಣ್ಣ ಮತ್ತು ರಾಯಣ್ಣ ಕೋಟೆಯನ್ನು ಉದ್ಘಾಟಿಸಿ ಮಾತನಾಡಿದರು.

“ರಾಣಿ ಚನ್ನಮ್ಮನ ಬಲಗೈ ಬಂಟ ರಾಯಣ್ಣ ಅತ್ಯಂತ ಪರಾಕ್ರಮಿ. ಬ್ರಿಟಿಷರು ರಾಣಿ ಚನ್ನಮ್ಮನ ಆಸ್ಥಾನದ ಮೇಲೆ ದಾಳಿ ನಡೆಸಿದಾಗ ರಾಯಣ್ಣನ ಹೋರಾಟದಿಂದ, ಶೌರ್ಯದಿಂದ ಗೆಲುವು ಸಾಧ್ಯವಾಯಿತು. ಎರಡನೇ ಯುದ್ಧದಲ್ಲಿ ಸೋಲಾದರೂ ಬ್ರಿಟೀಷರ ಕೈಗೆ ಸಿಗದೆ ತಪ್ಪಿಸಿಕೊಂಡ ರಾಯಣ್ಣ ಗೆರಿಲ್ಲಾ ಸೈನ್ಯ ಕಟ್ಟಿ, ಗೆರಿಲ್ಲಾ ಯುದ್ಧ ಮಾಡಿ ಬ್ರಿಟಿಷರಿಗೆ ಚಳ್ಳೆಹಣ್ಣು ತಿನ್ನಿಸಿದರು. ಇದರಿಂದ ಬ್ರಿಟೀಷರು ನೆಮ್ಮದಿ ಕೆಡಿಸಿಕೊಂಡಿದ್ದರು. ಆದರೆ ನಮ್ಮವರೇ ರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದುಕೊಟ್ಟರು” ಎಂದು ಹೇಳಿದರು.

Advertisements

“ನಮ್ಮವರ ದೇಶದ್ರೋಹದಿಂದ ರಾಯಣ್ಣ ಬ್ರಿಟಿಷರ ವಶವಾದರು. ರಾಯಣ್ಣ ಈಜಾಡುವಾಗ ಅವರ ಕೈಯಲ್ಲಿ ಆಯುಧ ಇರುವುದಿಲ್ಲ . ಈ ವೇಳೆ ಅವರನ್ನು ಬಂಧಿಸುವುದು ಸುಲಭ ಎಂದು ಬ್ರಿಟಿಷರಿಗೆ ಐಡಿಯಾ ಕೊಟ್ಟು ಬಂಧನಕ್ಕೆ ಕಾರಣರಾದವರು ನಮ್ಮವರೇ. ಇಂತಹ ದೇಶದ್ರೋಹಿಗಳು ನಮ್ಮಲ್ಲೇ ಇದ್ದಾರೆ. ಈ ಬಿಜೆಪಿಯವರು ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಷಡ್ಯಂತ್ರ ಮಾಡುತ್ತಲೇ ಇದ್ದಾರೆ. ಆದರೆ ಎಲ್ಲಿಯವರೆಗೂ ನಿಮ್ಮ ಆಶೀರ್ವಾದ ನನ್ನ ಮೇಲೆ ಇರುತ್ತದೋ ಅಲ್ಲಿಯವರೆಗೂ ನನ್ನನ್ನು ಕೆಳಗಿಳಿಸಲು ಸಾಧ್ಯವಿಲ್ಲ” ಎಂದರು.

“ಹಿಂದುಳಿದ ಸಮುದಾಯದವರು ಸಿಎಂ ಆಗಬಾರದು, ಅಧಿಕಾರದಲ್ಲಿರಬಾರದು ಎನ್ನುವುದು ಬಿಜೆಪಿಯ ಪುರಾತನ ಸಿದ್ಧಾಂತ. ಅದಕ್ಕೇ ಯಾವುದೇ ತಪ್ಪಿಲ್ಲದಿದ್ದರೂ ನನ್ನ ವಿರುದ್ಧ ಬಿಜೆಪಿಯವರು ಭಯಾನಕ ಷಡ್ಯಂತ್ರ ರಚಿಸಿದ್ದಾರೆ. ಜನರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ಷಡ್ಯಂತ್ರ ಗೆಲ್ಲುವುದಿಲ್ಲ” ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.

ಬಾಗೋಜಿಕೊಪ್ಪ ಮಠದ ಶಿವಲಿಂಗ ಮುರುಘರಾಜೇಂದ್ರ ಶ್ರೀಗಳು ಸಾನ್ನಿದ್ಯ ವಹಿಸಿದ್ದರು. ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸತೀಶ್ ಜಾರಕಿಹೊಳಿ, ಶಾಸಕರಾ ಬಾಲಚಂದ್ರ ಜಾರಕಿಹೊಳಿ ಹಾಗೂ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್ ಸೇರಿ ಹಲವು ನಾಯಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X