ಕೋಲ್ಕತಾದ ಆರ್ ಜಿ ಕರ್ ಆಸ್ಪತ್ರೆಯ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಘಟನೆ ಬಗ್ಗೆ ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲೇ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ 19 ವರ್ಷದ ಟ್ರೈನಿ ನರ್ಸ್ ಮೇಲೆ ಆಟೋ ಚಾಲಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಟ್ರೈನಿ ನರ್ಸ್ ಅವರು ಆಟೋದಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಚಾಲಕ ಚಾಲಕನಿಂದ ನೀರು ಬೇಕೆಂದು ನರ್ಸ್ ಕೇಳಿದ್ದರು. ನರ್ಸ್ ನೀರು ಕುಡಿದ ಮೇಲೆ ಪ್ರಜ್ಞೆ ಕಳೆದುಕೊಂಡಿದ್ದಾರೆ. ಆಟೋ ಚಾಲಕ ನೀರಿಗೆ ಮತ್ತು ಬರಿಸುವ ಪದಾರ್ಥ ಸೇರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ನಂತರ ಆಕೆ ಮನೆಯವರಿಗೆ ಮಾಹಿತಿ ನೀಡಿ, ದೂರು ದಾಖಲಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದು, ಆರೋಪಿ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾನವ ಘನತೆಗಾಗಿ ಹೋರಾಟ – ಕನ್ನಡ ತಮಿಳು ಎಂಬ ಗಡಿಗೆರೆಗಳು ಸಲ್ಲದು
ನರ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಮಾನುಷ ಘಟನೆಗೆ ಕಳೆದ ರಾತ್ರಿ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿ, ಆರೋಪಿಯನ್ನು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.
ಇತ್ತೀಚೆಗಷ್ಟೇ ಮಹಾರಾಷ್ಟ್ರದ ಬದ್ಲಾಪುರ್‌ನಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ ಭಾರೀ ಪ್ರತಿಭಟನೆಗೆ ಎಡೆಮಾಡಿಕೊಟ್ಟಿತ್ತು. ಪ್ರಕರಣದ ಸಂಬಂಧ ಪೊಲೀಸರು ಶಾಲೆಯ ಸಿಬ್ಬಂದಿಯನ್ನು ಬಂಧಿಸಿದ್ದರು.
