ಬೆಂಗಳೂರು | ‘ಬ್ಯಾರಿ ಸೌಹಾರ್ದ ಭವನ’ದಲ್ಲಿ ಅಚ್ಚುಕಟ್ಟಾಗಿ ನಡೆದ ಯಕ್ಷಗಾನ ಪ್ರಸಂಗ

Date:

Advertisements

ಬೆಂಗಳೂರಿನ ಹೆಚ್‌ಬಿಆರ್‌ ಬಡಾವಣೆಯಲ್ಲಿರುವ ಬ್ಯಾರೀಸ್ ಸೌಹಾರ್ದ ಭವನದಲ್ಲಿ ಹೈಕೋರ್ಟ್ ಯಕ್ಷಗಾನಾಭಿಮಾನಿ ವಕೀಲರು ಬೆಂಗಳೂರು, ಬ್ಯಾರೀಸ್ ವೆಲ್ಫೇರ್ ಅಸೋಸಿಯೇಷನ್ ಅವರ ಸಹಕಾರದೊಂದಿಗೆ ಧರ್ಮಸ್ಥಳದ ಮಹಾಗಣಪತಿ ಯಕ್ಷಗಾನ ಮಂಡಳಿ ಇವರಿಂದ “ಶ್ರೀಮತಿ ಪರಿಣಾಯ ಅಗ್ರ ಪೂಜೆ” ಎಂಬ ಯಕ್ಷಗಾನ ಪ್ರಸಂಗ ಆಯೋಜಿಸಲಾಗಿತ್ತು.

ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ನ್ಯಾಯಮೂರ್ತಿ ಪಿ.ಮೊಹಮ್ಮದ್ ನವಾಜ್, ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ, ನ್ಯಾಯಮೂರ್ತಿ ಕೆ.ರಾಜೇಶ್ ರೈ,ಕರ್ನಾಟಕದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಮತ್ತು ಬ್ಯಾರಿ ಅಸೋಸಿಯೇಷನ್ ನ ಪ್ರವರ್ತಕರಾದ ಉಮರ್ ಟೀಕೆ , ಹೈಕೋರ್ಟಿನ ಹಿರಿಯ ನ್ಯಾಯವಾದಿ ಶ್ರೀ.ಕೆ.ಎಸ್.ವ್ಯಾಸ ರಾವ್ ಉಪಸ್ಥಿತರಿದ್ದರು.

WhatsApp Image 2024 08 26 at 5.32.35 PM

ಕರಾವಳಿಯ ಕಲೆಯಾದ ಯಕ್ಷಗಾನವನ್ನು ಉಳಿಸಿ ಬೆಳೆಸಲು ಸಹೋದರ ಸಮುದಾಯದೊಂದಿಗೆ ಬ್ಯಾರಿ ಸಮುದಾಯವು ಕೈ ಜೋಡಿಸಿದೆ. ಇಂತಹ ಕಲಾ ಕಾರ್ಯಕ್ರಮಗಳು ಅವಿಭಜಿತ ದ.ಕನ್ನಡ ಜಿಲ್ಲೆಯ ಮಣ್ಣಿನ ಮಕ್ಕಳಲ್ಲಿ ಶಾಂತಿ ಸೌಹಾರ್ದತೆ ಹೆಚ್ಚಿಸಲು ಪೂರಕವಾಗಿದೆ. ಈ ಕಾರ್ಯಕ್ರಮವು ಸೌಹಾರ್ದ ಭವನದಲ್ಲಿ ಆಯೋಜಿಸಿದ್ದಕ್ಕೆ ವಂದನೆ ಸಲ್ಲಿಸಿ ಮುಂದಿನ ವರ್ಷವೂ ಅಯೋಜಿಸುವಂತೆ ಉಮರ್ ಟೀಕೆ ತಿಳಿಸಿದರು.

Advertisements

ಇದನ್ನು ಓದಿದ್ದೀರಾ? ಬಾಗಲಕೋಟೆ | ಹಲವು ಬೆಳವಣಿಗೆಯ ನಡುವೆ ಮುಧೋಳ ನಗರಸಭೆ ಕಾಂಗ್ರೆಸ್ ತೆಕ್ಕೆಗೆ

ಕಲಾಭಿಮಾನಿಗಳ ಮೆಚ್ಚುಗೆಯೊಂದಿಗೆ, ಅಚ್ಚುಕಟ್ಟಾಗಿ ನಡೆದ ಕಾರ್ಯಕ್ರಮದ ರೂವಾರಿಗಳಾದ ಕರ್ನಾಟಕ ಹೈಕೋರ್ಟಿನ ಹಿರಿಯ ನ್ಯಾಯವಾದಿ ಎಂ.ಸುಧಾಕರ ಪೈ ಸ್ವಾಗತಿಸಿ, ವಂದಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

Download Eedina App Android / iOS

X