ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿಗಳಾದ ಬಿ. ಆರ್. ಗವಾಯಿ ಮತ್ತು ಕೆ. ವಿ. ವಿಶ್ವನಾಥನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಕವಿತಾ ಜಾಮೀನು ಅರ್ಜಿ ವಿಚಾರಣೆಯ ಸಂದರ್ಭದಲ್ಲಿ ಸಿಬಿಐ ಮತ್ತು ಇಡಿಯ ನ್ಯಾಯಸಮ್ಮತತೆಯನ್ನು ಪ್ರಶ್ನಿಸಿದೆ. ಸಾಕ್ಷಿಯನ್ನು ಕೇಳಿದೆ.
ಅಬಕಾರಿ ನೀತಿ ಪ್ರಕರಣದಲ್ಲಿ ಜಾಮೀನು ಪಡೆದ ಎರಡನೇ ಪ್ರಮುಖ ವಿಪಕ್ಷ ನಾಯಕಿ ಕವಿತಾ ಆಗಿದ್ದಾರೆ. ಈ ಹಿಂದೆ ಇದೇ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರಿಗೆ ಜಾಮೀನು ಲಭ್ಯವಾಗಿದೆ.
ಇದನ್ನು ಓದಿದ್ದೀರಾ? ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್, ಕವಿತಾ ನ್ಯಾಯಾಂಗ ಬಂಧನ ಸೆ.2ರವರೆಗೆ ವಿಸ್ತರಣೆ
ಇಬ್ಬರ ಪ್ರಕರಣದಲ್ಲಿಯೂ ಕೂಡಾ ಸುಪ್ರೀಂ ಕೋರ್ಟ್ ವಿಚಾರಣೆಯ ವಿಳಂಬವನ್ನು ಗಮನಿಸಿದೆ. “ಅನಿಯಮಿತ ಅವಧಿ ಜೈಲಿನಲ್ಲಿರಿಸಲು ಸಾಧ್ಯವಿಲ್ಲ. ಹಾಗೆ ಜೈಲಿನಲ್ಲಿಟ್ಟರೆ ಮೂಲಭೂತ ಹಕ್ಕಿನ ಉಲ್ಲಂಘನೆಯಾಗುತ್ತದೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.
[BREAKING] Supreme Court grants bail to K Kavitha in Delhi excise policy case#SupremeCourtOfIndia #kkavitha @RaoKavitha
— Bar and Bench (@barandbench) August 27, 2024
Read full story: https://t.co/KuuxRhLFCP pic.twitter.com/Zs6nlw1c0H
