ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಛಲವಾದಿ ನಾರಾಯಣಸ್ವಾಮಿ

Date:

Advertisements

ಪ್ರಿಯಾಂಕ್ ಖರ್ಗೆ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ ಜಮೀನು ವಾಪಸ್ ಪಡೆಯಬೇಕು ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, “ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‍ಗೆ ಕೆಐಎಡಿಬಿಯಿಂದ ಐದು ಎಕರೆ ಜಾಗ ಪಡೆದುಕೊಂಡಿದ್ದಾರೆ. ಸಚಿವರಾಗಿ ಪ್ರಿಯಾಂಕ್ ಖರ್ಗೆ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ” ಎಂದು ಆರೋಪಿಸಿದರು.

“ಕೈಗಾರಿಕಾ ನಿವೇಶನ ಪಡೆಯುವ ಹಕ್ಕು ಎಲ್ಲರಿಗೂ ಇದೆ. ಆದರೆ, ಸಿಎ ಸೈಟ್ ಪಡೆಯಲು ಕೆಲವು ಕಾನೂನುಗಳಿವೆ. ಸಾಮಾಜಿಕ ಚಟುವಟಿಕೆ, ರಂಗಮಂದಿರ, ಆಸ್ಪತ್ರೆ- ಹೀಗೆ ನಿಗದಿತ ಉದ್ದೇಶಕ್ಕೆ ನಮೂದಾಗಿರುತ್ತದೆ. ಇದನ್ನು ಇತರ ಅರ್ಜಿಗಳನ್ನು ತಿರಸ್ಕರಿಸಿ ಪ್ರಬಲರಿಗೆ ಕೊಡಲಾಗಿದೆ. ಇದರಿಂದ ಅನುಮಾನಕ್ಕೆ ಎಡೆಯಾಗಿದೆ” ಎಂದು ವಿವರಿಸಿದರು.

Advertisements

“ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯಸಭಾ ವಿಪಕ್ಷ ನಾಯಕ- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಧಾಕೃಷ್ಣ ಅವರ ಖಾಸಗಿ, ಒಂದೇ ಮನೆಗೆ ಸೀಮಿತ ಟ್ರಸ್ಟಿಗೆ ನಿವೇಶನ ಕೊಡಲಾಗಿದೆ. ಬುದ್ಧ ವಿಹಾರ ಕಟ್ಟಲು ಸಿದ್ಧಾರ್ಥ ವಿಹಾರ ಟ್ರಸ್ಟ್ ಕಲಬುರ್ಗಿಯಲ್ಲಿ ನೋಂದಣಿ ಮಾಡಿದ್ದಾರೆ. ಇದೊಂದು ಧಾರ್ಮಿಕ ಉದ್ದೇಶದ ಟ್ರಸ್ಟ್. ಏರೋಸ್ಪೇಸ್ ಸಂಬಂಧಿಸಿ ನಿವೇಶನ ಪಡೆದಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಅದಕ್ಕೂ ಇದಕ್ಕೂ ಯಾವುದೇ ಸಂಬಂಧ ಇಲ್ಲ” ಎಂದರು.

“ಒಂದೈವತ್ತು ಕುಟುಂಬಗಳಷ್ಟೇ ದಲಿತರಲ್ಲ; ಛಲವಾದಿ ನಾರಾಯಣಸ್ವಾಮಿ ದಲಿತ ಎಂದಾಕ್ಷಣ ನಾನೊಬ್ಬನೇ ಅಲ್ಲ; 5 ಎಕರೆಯನ್ನು ಒಂದೇ ಕುಟುಂಬಕ್ಕೆ ಕೊಟ್ಟಿದ್ದೀರಿ ಎಂದು ಆಕ್ಷೇಪಿಸಿದರು. 10 ಎಸ್‍ಸಿ ಸಂಸ್ಥೆಗಳಿಗೆ 50 ಸೆಂಟ್ಸ್ ಕೊಟ್ಟರೆ ಅವು ಬದುಕುತ್ತಿದ್ದವು. ಅಂದರೆ ಏನಿದರ ಅರ್ಥ” ಎಂದು ಪ್ರಶ್ನಿಸಿದರು.

“ಪ್ರಭಾವಿಗಳಿಗೆ ನಿವೇಶನ ಕೊಡಲಾಗಿದೆ. ಸ್ವಜನಪಕ್ಷಪಾತ ಮಾಡುವುದಿಲ್ಲ ಎಂದು ಪ್ರಮಾಣವಚನ ಸ್ವೀಕಾರ ಮಾಡಿರುತ್ತೇವೆ. ಇಲ್ಲಿ ಎಲ್ಲರಿಗೂ ಎಲ್ಲಿ ನ್ಯಾಯ ಕೊಟ್ಟಿದ್ದಾರೆ ಎಂದು ಅವರು ಪ್ರಶ್ನಿಸಿದರು. ಇದು ಪಬ್ಲಿಕ್ ಟ್ರಸ್ಟ್ ಅಲ್ಲ; ಒಂದು ಕುಟುಂಬದ ಟ್ರಸ್ಟ್” ಎಂದರು.

ಸುದ್ದಿಗಾರರ ಭೇಟಿ ಬಳಿಕ ಛಲವಾದಿ ನಾರಾಯಣಸ್ವಾಮಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋತ್‌ ಅವರನ್ನು ಭೇಟಿಯಾಗಿ, “ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌ಗೆ ಕೆಐಎಡಿಬಿಯಿಂದ ಐದು ಎಕರೆ ಜಾಗ ಪಡೆದುಕೊಂಡಿದ್ದಾರೆ. ಸಚಿವರಾಗಿ ಪ್ರಿಯಾಂಕ್‌ ಖರ್ಗೆ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ. ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ ಜಮೀನು ವಾಪಸ್‌ ಪಡೆಯಬೇಕು” ಎಂದು ಆಗ್ರಹಿಸಿ ದೂರು ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X