ಆಟೋ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದ್ದು, ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ನಗರದ ಕಲ್ಲೂರಿನ ಆಶ್ರಯ ಬಡಾವಣೆಯಲ್ಲಿ ವಾಸವಿದ್ದ ಆಟೋ ಚಾಲಕ ವಾಸಿಮ್ ಅಕ್ರಮ್(30) ಎಂಬಾತ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರು ಆರು ತಿಂಗಳ ಹಿಂದಷ್ಟೇ ಪ್ರೀತಿಸಿದ ಹುಡುಗಿಯನ್ನೇ ಮದುವೆಯಾಗಿದ್ದರು.

ಆಟೋ ಚಾಲಕ ಹಾಗೂ ಪತ್ನಿ ಅಲಿಯಾ ಫಾತಿಮಾ(20) ಪರಸ್ಪರ ಪ್ರೀತಿಸಿ ಮದುವೆಯಾಗಿದ್ದು, ನಂತರ ದಂಪತಿ ನಡುವೆ ಮನಸ್ತಾಪ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದು, ತಡವಾಗಿ ಬೆಳಕಿಗೆಬಂದಿದೆ.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಸಿದ್ದರಾಮಯ್ಯರನ್ನು ಬೆಂಬಲಿಸಿ ಆ. 29ರಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ: ದಸಂಸ
ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗ ನಗರದ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಬಳಿಕ ಹೆಚ್ಚಿನ ಮಾಹಿತಿ ಹೊರ ಬರಬೇಕಿದೆ.