ರಾಯಚೂರು | ಸಕಾಲಕ್ಕೆ ಕಚೇರಿಗೆ ಬಾರದ ಅಧಿಕಾರಿಗಳು : ರೈತರು ಪರದಾಟ

Date:

Advertisements

ಮಸ್ಕಿ ತಾಲೂಕಿನ ಹಾಲಾಪುರ ಗ್ರಾಮದಲ್ಲಿರುವ ರೈತ ಸಂಪರ್ಕ ಕೇಂದ್ರದಲ್ಲಿ ಅಧಿಕಾರಿಗಳು ಸಕಾಲಕ್ಕೆ ಬಾರದಕ್ಕೆ ರೈತರು ಸರ್ಕಾರದ ವಿವಿಧ ಯೋಜನೆಗಳು ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ಸರ್ಕಾರ ವಿವಿಧ ಯೋಜನೆಗಳನ್ನು ರೈತರಿಗೆ ಸಮಪರ್ಕವಾಗಿ ಒದಗಿಸುವ ಉದ್ದೇಶಕ್ಕಾಗಿ ಇರುವ ರೈತ ಸಂಪರ್ಕ ಕೇಂದ್ರ ಅಧಿಕಾರಿ, ಸಿಬ್ಬಂದಿಗಳ ಹೆಚ್ಚಿನ ಗೈರಾದ ಕಾರಣಕ್ಕೆ ಸೊರಗುತ್ತಿದ್ದು, ಇದರಿಂದ ಬಿತ್ತನೆ ಬೀಜ, ತಾಡಪತ್ರಿ, ರಾಸಾಯನಿಕ ಔಷಧಿ ಸೇರಿ ಇತರ ಕೃಷಿ ಸಲಕರಣೆಗಳು ಸಕಾಲಕ್ಕೆ ಸಿಗದೇ ರೈತರು ಕಂಗಾಲಾಗಿ ಕೃಷಿ ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.

ಈ ಬಗ್ಗೆ ಹಾಲಾಪುರ ಗ್ರಾಮದ ರೈತ ಗಂಗಪ್ಪ ತೋಳದಿನ್ನಿ ಈದಿನ.ಕಾಮ್ ಜೊತೆ ಮಾತನಾಡಿ, ʼರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ಕಚೇರಿ ಬರುವುದೇ ಅಪರೂಪ, ಒಮ್ಮೊಮ್ಮೆ ಬೆಳಿಗ್ಗೆ 11 ಗಂಟೆಯಾದರೂ ಕಚೇರಿ ತೆರೆಯುವುದಿಲ್ಲ. ಹೀಗಾಗಿ ವಿವಿಧ ಕೆಲಸ ಕಾರ್ಯಗಳಿಗೆ ದೂರದ ಗ್ರಾಮಗಳಿಂದ ಆಗಮಿಸುವ ರೈತರು ಗಂಟೆಗಟ್ಟಲೇ ಕಾಯಬೇಕಾದ ಪರಿಸ್ಥಿತಿ ಇದೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

ʼಸರ್ಕಾರದ ಸೌಲಭ್ಯದ ನಿರೀಕ್ಷೆಯಲ್ಲಿರುವ ರೈತರು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ವಂಚಿತರಾಗುತ್ತಿದ್ದಾರೆ. ಕೇಂದ್ರ ತೆರೆಯದ ಕಾರಣ ಸಾರ್ವಜನಿಕರು ಬೇಸತ್ತು ಹೋಗಿದ್ದಾರೆ. ಈ ಬಗ್ಗೆ ಪ್ರಶ್ನಿಸಿದರೆ ಅಧಿಕಾರಿಗಳು ಉಡಾಫೆ ಉತ್ತರ ಕೊಟ್ಟು ಬೇಜವ್ದಾರಿ ತೋರುತ್ತಾರೆʼ ಎಂದರು.

ಈ ಸುದ್ದಿ ಓದಿದ್ದೀರಾ? ‘ಅಮ್ಮ’ ಅಧ್ಯಕ್ಷ ಸ್ಥಾನಕ್ಕೆ ಮೋಹನ್ ಲಾಲ್ ರಾಜೀನಾಮೆ, ಸಂಪೂರ್ಣ ಸಮಿತಿ ವಿಸರ್ಜನೆ

ಈ ಸಂಬಂಧ ಈದಿನ.ಕಾಮ್ ಮಾನ್ವಿ ತಾಲೂಕು ಕೃಷಿ ಅಧಿಕಾರಿ ಎಡಿಎ ಹುಸೇನ್ ಸಾಹೇಬ್ ಅವರನ್ನು ವಿಚಾರಿಸಿದರೆ, ʼಹಾಲಾಪುರ ರೈತ ಸಂಪರ್ಕ ಕೇಂದ್ರ ಬಂದ್‌ ಆಗಿರುವುದು, ಅಧಿಕಾರಿಗಳು ಗೈರಾಗುವ ಬಗ್ಗೆ ನನ್ನ ಗಮನಕ್ಕೆ ಇಲ್ಲ. ಈ ಕುರಿತು ವಿಚಾರಿಸಿ ಮುಂದಿನ ಕ್ರಮಕೈಗೊಳ್ಳುವೆʼ ಎಂದು ಹೇಳಿದರು .

mdrafi
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X