ಬಳ್ಳಾರಿ | ಜಿಂದಾಲ್ ಕಂಪನಿ ರೈತರ ಜೀವನಾಡಿ ಅಲ್ಲ, ಜನವಿರೋಧಿ : ಬಡಗಲಪುರ ನಾಗೇಂದ್ರ

Date:

Advertisements

ಜಿಂದಾಲ್ ಕಂಪನಿಗೆ ಸರ್ಕಾರದ ಭೂಮಿ ಮಾರಾಟ ಮಾಡುತ್ತಿರುವುದು ಜೀವವಿರೋಧಿ ನಿರ್ಧಾರ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಕಿಡಿಕಾರಿದರು.

ಕಾಂಗ್ರೆಸ್ ಮುಖಂಡ ಕೊಂಡಯ್ಯ ಅವರು ಜಿಂದಾಲ್ ಉಕ್ಕು ಕಂಪನಿಗೆ ಭೂಮಿ ಮಾರಾಟ ಮಾಡುತ್ತಿರುವುದು ನ್ಯಾಯಕ್ಕೆ ಸಿಕ್ಕ ಜಯ ಎಂದು ಹೇಳಿಕೆ ಖಂಡಿಸಿ ಈದಿನ.ಕಾಮ್ ಜೊತೆ ಮಾತನಾಡಿ ಪ್ರತಿಕ್ರಿಯಿಸಿದ ಅವರು ʼಕೊಂಡಯ್ಯ ಹೇಳಿಕೆ ಜನವಿರೋಧಿಯಾಗಿದೆ. ರೈತರನ್ನು ಒಕ್ಕಲೆಬ್ಬಿಸಿ ಅರಣ್ಯ ನಾಶಗೊಳಿಸಿ ಪರಿಸರದ ಮೇಲೆ ಸಂಹಾರ ನಡೆಸುವ ಹುನ್ನಾರದ ಪರ ನಿಲ್ಲುವುದು ಖಂಡನೀಯʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ʼಗಣಿಗಾರಿಕೆಯಿಂದ ಪರಿಸರ ನಾಶವಾಗಲಿದೆ. ಇದರಿಂದ ಜನಜೀವನಕ್ಕೆ ಅಪಾಯಕಾರಿಯಾಗಿದೆ. ಅರಣ್ಯ ಉಳಿಸಿಕೊಳ್ಳಲು ರೈತರು ಪಟ್ಟು ಹಿಡಿದಿದ್ದಾರೆ. ಆದರೆ ಸರ್ಕಾರ ಸಂಡೂರಿನ ಅರಣ್ಯ ಪ್ರದೇಶದ ಮೇಲೆ ವಕ್ರದೃಷ್ಟಿ ಬಿದ್ದಿರುವುದು ಭವಿಷ್ಯಕ್ಕೆ ಮಾರಕ ಎನ್ನುವಂತಿದೆʼ ಎಂದರು.

Advertisements

ʼಸಂಡೂರು ಜನರ ಭೂಮಿ ಕಸಿದು ರಿಯಲ್ ಎಸ್ಟೇಟ್ ದಂಧೆ ಮೂಲಕ ಲೂಟಿ ಹೊಡೆಯುವ ಹುನ್ನಾರವಿದೆ. ಜಿಂದಾಲ್ ಕಂಪನಿ ವಿರುದ್ಧ ಪರಿಸರವಾದಿಗಳು, ರೈತರು, ಕಾರ್ಮಿಕರು ಬೇಸತ್ತು ಹೋಗಿದ್ದಾರೆ. ಕಂಪನಿಯಿಂದ ರಸ್ತೆಗಳು ಸಂಪೂರ್ಣ ಹದಗೆಟ್ಟು ಜನರು ಧೂಳಿನಲ್ಲಿ ಓಡಾಡುವಂತಾಗಿ ಸಾಂಕ್ರಾಮಿಕ ರೋಗಗಳಿಗೆ ತುತ್ತಾಗಿದ್ದಾರೆ. ಸರ್ಕಾರ ಜಿಂದಾಲ್‌ಗೆ ಭೂಮಿ ಮಾರಾಟ ಮಾಡುವ ನಿರ್ಧಾರ ಕೂಡಲೇ ಹಿಂಪಡೆಯಬೇಕುʼ ಎಂದು ಆಗ್ರಹಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

Download Eedina App Android / iOS

X