ತುಮಕೂರು | ವಾಂತಿ, ಭೇದಿ ಪ್ರಕರಣಕ್ಕೆ ಕಲುಷಿತ ನೀರು ಕಾರಣವಲ್ಲ : ಜಿಲ್ಲಾಧಿಕಾರಿ ಸ್ಪಷ್ಟನೆ

Date:

Advertisements

ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕು ದೊಡ್ಡೇರಿ ಹೋಬಳಿ ಬುಳಸಂದ್ರ ಗ್ರಾಮದಲ್ಲಿ ವರದಿಯಾದ ವಾಂತಿ, ಭೇದಿ ಪ್ರಕರಣಗಳಿಗೆ ಕಲುಷಿತ ನೀರು ಕಾರಣವಲ್ಲವೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸ್ಪಷ್ಟನೆ ನೀಡಿದರು.

ಬುಳಸಂದ್ರ ಗ್ರಾಮಕ್ಕೆ ಭೇಟಿ ನೀಡಿ ಘಟನೆಯ ಬಗ್ಗೆ ಅಧಿಕಾರಿಗಳು ಹಾಗೂ ಗ್ರಾಮಸ್ಥರಿಂದ ಮಾಹಿತಿ ಪಡೆದರು.ನಂತರ ಮಾತನಾಡಿದ ಅವರು ನೀರನ್ನು ಕಾಯಿಸಿ-ಆರಿಸಿ ಕುಡಿಯಬೇಕು. ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಶೌಚಕ್ಕಾಗಿ ಶೌಚಾಲಯವನ್ನೇ ಬಳಸಬೇಕು. ಶೌಚದ ನಂತರ ಕೈಗಳನ್ನು ಸಾಬೂನಿನಿಂದ ಶುಚಿಗೊಳಿಸಬೇಕು ಎಂದು ಗ್ರಾಮಸ್ಥರಲ್ಲಿ ಮನವಿ ಮಾಡಿದರು.

ಮುನ್ನೆಚ್ಚರಿಕಾ ಕ್ರಮವಾಗಿ ಆಶಾ ಕಾರ್ಯಕರ್ತೆಯರು ಗ್ರಾಮದ ಮನೆ-ಮನೆ ಭೇಟಿ ನೀಡಿ ಮನೆಯ ಸದಸ್ಯರ ಆರೋಗ್ಯದ ಬಗ್ಗೆ ಸಮೀಕ್ಷೆ ಮಾಡಬೇಕು ಎಂದರಲ್ಲದೆ ಬರುವ ಆಗಸ್ಟ್ 31ರಂದು ಶ್ರಾವಣ ಮಾಸದ ಕಡೆಯ ಶನಿವಾರ ಇರುವುದರಿಂದ ಗ್ರಾಮಗಳ ದೇವಾಲಯಗಳಲ್ಲಿ ವಿಶೇಷ ಪೂಜೆ/ಜಾತ್ರೆಗಳು ನಡೆಯುವುದರಿಂದ ಅಧಿಕಾರಿಗಳು ಸ್ವಚ್ಛತೆ, ಕುಡಿಯುವ ನೀರಿನ ಬಗ್ಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ವಾಂತಿ-ಭೇದಿ ಪ್ರಕರಣಗಳು ಮರುಕಳಿಸದಂತೆ ಹೆಚ್ಚಿನ ಜಾಗ್ರತೆ ವಹಿಸಬೇಕೆಂದು ಸೂಚನೆ ನೀಡಿದರು.

Advertisements
WhatsApp Image 2024 08 27 at 6.39.16 PM

ಜನರ ಆರೋಗ್ಯದ ಹಿತದೃಷ್ಟಿಯಿಂದ ಯಾವುದೇ ಜಾತ್ರಾ ಸಂದರ್ಭಗಳಲ್ಲಿ ಅವಘಡಗಳು ನಡೆಯದಂತೆ ಕಟ್ಟೆಚ್ಚರ ವಹಿಸಲು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ, ತಹಶೀಲ್ದಾರರು, ತಾಲ್ಲೂಕು ಆರೋಗ್ಯಾಧಿಕಾರಿ, ಆಹಾರ ಸುರಕ್ಷತಾಧಿಕಾರಿ, ಉಪ ಪೊಲೀಸ್ ವರಿಷ್ಠಾಧಿಕಾರಿಗಳನ್ನೊಳಗೊಂಡ ತಾಲ್ಲೂಕು ಮಟ್ಟದ ಸಮಿತಿ ರಚಿಸಬೇಕು ಎಂದು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕಾಧಿಕಾರಿ ಲಕ್ಷ್ಮಣ್ ಅವರಿಗೆ ಸೂಚನೆ ನೀಡಿದರಲ್ಲದೆ, ಜಾತ್ರೆಗಳನ್ನು ನಡೆಸುವ ದೇವಸ್ಥಾನದ ಸಮಿತಿಯವರು ಪ್ರಸಾದ ವಿತರಣೆ ಮುನ್ನ ಈ ಸಮಿತಿಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಪ್ರಸಾದ ತಯಾರಿಸುವ ಪಾತ್ರೆಗಳು ಸ್ವಚ್ಛವಾಗಿಡುವ, ಜನ ಸಮೂಹಕ್ಕೆ ಪ್ರಸಾದ ವಿತರಣೆ ಮಾಡುವಾಗ ಹೆಚ್ಚಿನ ಜಾಗ್ರತೆ ವಹಿಸುವ ಬಗ್ಗೆ ಸಮಿತಿ ನಿಗಾವಹಿಸಬೇಕು. ಸಮಿತಿಯ ಸೂಚನೆಗಳನ್ನು ಪಾಲಿಸದೆ ನಿರ್ಲಕ್ಷ್ಯ ತೋರುವ ದೇವಸ್ಥಾನದ ಸಮಿತಿ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.

ನಂತರ ಮಧುಗಿರಿ ತಾಲೂಕು ಸರ್ಕಾರಿ ಅತಿಥಿ ಗೃಹದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಬುಳಸಂದ್ರ ವಾಂತಿ-ಭೇದಿ ಪ್ರಕರಣದ ಬಗ್ಗೆ ಮಾಹಿತಿ ಹಂಚಿಕೊಂಡ ಅವರು ಸುಮಾರು 160 ಮನೆಗಳಿರುವ ಬುಳಸಂದ್ರ ಗ್ರಾಮದಲ್ಲಿ ಶ್ರಾವಣ ಶನಿವಾರ ಪ್ರಯುಕ್ತ ಆಗಸ್ಟ್ 24ರ ಶನಿವಾರದಿಂದ 3 ದಿನಗಳ ಕಾಲ ಹಮ್ಮಿಕೊಂಡಿದ್ದ ಕರಿಯಮ್ಮ, ಮುತ್ರಾಯ, ಭೂತಪ್ಪ ಸ್ವಾಮಿಯ ಜಾತ್ರೆ ಸಂದರ್ಭದಲ್ಲಿ 85 ವರ್ಷದ ತಿಮ್ಮಕ್ಕ, 90 ವರ್ಷದ ಗಿರಿಯಮ್ಮ ಹಾಗೂ 45 ವರ್ಷದ ಕಾಟಮ್ಮ ಸೇರಿ ಮೂರು ಮಂದಿ ಮರಣ ಹೊಂದಿರುವ ಬಗ್ಗೆ ವರದಿಯಾಗಿದೆ. ವೈದ್ಯರ ವರದಿ ಪ್ರಕಾರ ತಿಮ್ಮಕ್ಕ ಮತ್ತು ಗಿರಿಯಮ್ಮ ಅವರ ಸಾವು ವಯೋಸಹಜವಾಗಿದ್ದು, ಸಾವನ್ನಪ್ಪುವ ಮುನ್ನ ಇವರಿಬ್ಬರಲ್ಲೂ ವಾಂತಿ, ಭೇದಿ ಕಾಣಿಸಿಕೊಂಡಿರುವುದಿಲ್ಲ. ಕಾಟಮ್ಮ ಎಂಬ ಮಹಿಳೆ ಆಂಧ್ರಪ್ರದೇಶದ ಮಡಕಶಿರಾ ತಾಲ್ಲೂಕು ಸಿದ್ದಗಿರಿ ಗ್ರಾಮದಿಂದ ಜಾತ್ರೆಗಾಗಿ ತವರಿಗೆ ಬಂದಿದ್ದು, ಗ್ರಾಮಕ್ಕೆ ಬರುವ ಮುನ್ನವೇ ಈಕೆಗೆ ವಾಂತಿ ಭೇದಿ ಕಾಣಿಸಿಕೊಂಡಿತ್ತು. ವಾಂತಿ, ಭೇದಿಯಿಂದ ಅಸ್ವಸ್ಥಗೊಂಡು ಕಾಟಮ್ಮ ಮೃತಪಟ್ಟಿದ್ದಾರೆ. ಕಲುಷಿತ ನೀರಿನಿಂದಾಗಿ ಯಾವುದೇ ಸಾವು ಸಂಭವಿಸಿಲ್ಲವೆಂದು ಸ್ಪಷ್ಟಪಡಿಸಿದರು.

ಜಾತ್ರೆಯ ಸಂದರ್ಭದಲ್ಲಿ ಗ್ರಾಮದವರು ಬಳಸಿದ ನೀರನ್ನು ಪರೀಕ್ಷೆಗೊಳಪಡಿಸಲಾಗಿ ಕುಡಿಯಲು ಯೋಗ್ಯವಿರುವ ಬಗ್ಗೆ ವರದಿ ಬಂದಿದೆ. ಮೃತಪಟ್ಟ ದುರ್ದೈವಿ ತಾವೇ ತಯಾರಿಸಿದ ಟೊಮೊಟೋ ಬಾತ್, ಮಜ್ಜಿಗೆಯನ್ನು ಸೇವಿಸಿದ ನಂತರ ಅಸ್ವಸ್ಥಗೊಂಡಿರುವ ಸಾಧ್ಯತೆ ಇದೆ. ಜಾತ್ರೆಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳದಿರುವುದರಿಂದಲೇ ಇಂತಹ ಪ್ರಕರಣಗಳು ಘಟಿಸುತ್ತಿವೆ. ಮಧುಗಿರಿ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ವಾಂತಿ-ಭೇದಿಯಿಂದ ಸಾವಿನ ಪ್ರಕರಣ ಮಾಸುವ ಮುನ್ನವೇ ಮತ್ತಿದೇ ತಾಲ್ಲೂಕಿನಲ್ಲಿ ವಾಂತಿ-ಭೇದಿ ಪ್ರಕರಣ ವರದಿಯಾಗಿದೆ. ಸ್ವಚ್ಛತೆ ಇಲ್ಲದಿರುವುದು ಇಂಥ ಪ್ರಕರಣಗಳಿಗೆ ಪ್ರಮುಖ ಕಾರಣವಾಗಿದ್ದು, ಸ್ವಚ್ಛತೆ ಕಾಪಾಡಿಕೊಳ್ಳುವ ಬಗ್ಗೆ ಗ್ರಾಮಸ್ಥರಿಗೆ ಅರಿವು ಮೂಡಿಸಬೇಕೆಂದು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಬುಳಸಂದ್ರ ಗ್ರಾಮದಲ್ಲಿ ಒಟ್ಟು 16 ಮಂದಿಗೆ ವಾಂತಿ-ಭೇದಿ ಕಾಣಿಸಿಕೊಂಡಿದ್ದು, ಈ ಪೈಕಿ 9 ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆ ಹಾಗೂ ಶ್ರೀದೇವಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆಯಲ್ಲದೆ ಇದೇ ಗ್ರಾಮದ 18 ವರ್ಷದ ಯುವಕನೊಬ್ಬನಿಗೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತೆರೆದಿರುವ ತಾತ್ಕಾಲಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಸ್ತುತ ಯಾವುದೇ ಹೊಸ ಪ್ರಕರಣಗಳು ವರದಿಯಾಗಿಲ್ಲವೆಂದು ಮಾಹಿತಿ ನೀಡಿದರು.

ನಂತರ ಕೊರಟಗೆರೆ ತಾಲ್ಲೂಕಿನ ಮುಗ್ಗೀರನಕಾಲೋನಿಯ ಶಿವಶಂಕರ್ ಹಾಗೂ ವೀರಭದ್ರಯ್ಯ ಅವರ ಜಮೀನಿಗೆ ಭೇಟಿ ನೀಡಿ ಮಳೆ ಹಾನಿಗೊಳಗಾದ ಮುಸುಕಿನ ಜೋಳ ಬೆಳೆಯನ್ನು ಪರಿವೀಕ್ಷಿಸಿದರು. ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಕೂಡಲೇ ಬೆಳೆ ನಷ್ಟದ ಪ್ರಮಾಣವನ್ನು ಅಂದಾಜಿಸಿ ವಿಮಾ ಮೊತ್ತ ಪಾವತಿಗೆ ಕ್ರಮ ಕೈಗೊಳ್ಳಬೇಕೆಂದು ಓರಿಯಂಟಲ್ ಇನ್ಸೂರೆನ್ಸ್ ವಿಮಾ ಕಂಪನಿಯ ಪ್ರತಿನಿಧಿ ದಯಾನಂದ್ ಹಾಗೂ ಕೃಷಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

WhatsApp Image 2024 08 27 at 6.39.15 PM

ಸ್ಥಳದಲ್ಲಿದ್ದ ಕೃಷಿ ಜಂಟಿ ನಿರ್ದೇಶಕ ಡಾ: ಎನ್. ರಮೇಶ್ ಮಾತನಾಡಿ ಹೆಚ್ಚಿನ ಪ್ರಮಾಣದ ಮಳೆಯಿಂದ ಮುತ್ತುಗದ ಕೆರೆ, ಚಿಕ್ಕೆರೆ, ದೇವರಳ್ಳಿ ಕೆರೆ ಕೋಡಿ ತುಂಬಿ ಹೆಚ್ಚುವರಿ ನೀರು ಹರಿದು ಈ ಭಾಗದ ಸುಮಾರು 43 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ತ್ವರಿತವಾಗಿ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬುಧವಾರದಿಂದ ಕೃಷಿ ಹಾಗೂ ವಿಮಾ ಕಂಪನಿ ಜಂಟಿ ಸಮೀಕ್ಷೆ ಮಾಡಿ ವಿಮಾ ಮೊತ್ತ ನಿರ್ಧರಿಸಿ ಬೆಳೆ ನಷ್ಟ ಹೊಂದಿದ ರೈತರ ಖಾತೆಗೆ ನೇರವಾಗಿ ವಿಮಾ ಪರಿಹಾರ ಮೊತ್ತವನ್ನು ಪಾವತಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ಈ ಸಂದರ್ಭದಲ್ಲಿ ಮಧುಗಿರಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ಕೊರಟಗೆರೆ ತಹಶೀಲ್ದಾರ್ ಕೆ.ಮಂಜುನಾಥ್, ಮಧುಗಿರಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ: ಶ್ರೀನಿವಾಸ್, ಆಹಾರ ಸುರಕ್ಷತಾಧಿಕಾರಿ ಡಾ: ಹರೀಶ್, ಸಹಾಯಕ ಕೃಷಿ ನಿರ್ದೇಶಕ ರುದ್ರಪ್ಪ, ಮತ್ತಿತರರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X