ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನ ಆಗಿರುವ ನಟ ದರ್ಶನ ಅವರನ್ನು ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರಿಸಲು ನ್ಯಾಯಾಲಯ ಒಪ್ಪಿಗೆ ನೀಡಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ದರ್ಶನ್ ಮತ್ತು ವಿಲನ್ಸ್ ಗಾರ್ಡನ್ ನಾಗ, ಕುಳ್ಳ ಸೀನ ಪೋಟೋ ವೈರಲ್ ಆಗಿತ್ತು.
ಜೈಲಿನಲ್ಲಿ ದರ್ಶನ್ ಮತ್ತು ಗ್ಯಾಂಗ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗಿತ್ತು. ಹೀಗಾಗಿ ಇದನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಸರ್ಕಾರ, ಅವರನ್ನು ಸ್ಥಳಾಂತರಿಸಲು ಸಿಎಂ ಖುದ್ದು ಸೂಚನೆ ನೀಡಿದ್ದರು. ಹೀಗಾಗಿ ಪೊಲೀಸ್ ಅಧಿಕಾರಿಗಳು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ 24 ನೇ ಎಸಿಎಂಎಂ ನ್ಯಾಯಾಲಯ ದರ್ಶನ್ ರನ್ನು ಸ್ಥಳಾಂತರಿಸಲು ಆದೇಶ ನೀಡಿದೆ. ಅಲ್ಲದೆ ಉಳಿದ ಆರೋಪಿಗಳನ್ನೂ ಸ್ಥಳಾಂತರಿಸಲು ನ್ಯಾಯಾಲಯ ಒಪ್ಪಿಗೆ ನೀಡಿದೆ. ಆರೋಪಿಗಳನ್ನೂ ಸ್ಥಳಾಂತರಿಸಲು ನ್ಯಾಯಾಲಯ ಒಪ್ಪಿಗೆ ನೀಡಿದೆ. ಆರೋಪಿಗಳನ್ನು ಮೈಸೂರು, ಧಾರವಾಡ, ಶಿವಮೊಗ್ಗ, ಬಳ್ಳಾರಿಗೆ ವರ್ಗಾವಣೆ ಮಾಡಲಿದ್ದಾರೆ.
