ಮದ್ಯ ದರ ಇಳಿಕೆ, ಮಂಗಳವಾರ ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿ

Date:

Advertisements

ದುಬಾರಿ ಬೆಲೆಯ ಸ್ಕಾಚ್, ವಿಸ್ಕಿ ಸೇರಿದಂತೆ ಎಲ್ಲ ಪ್ರೀಮಿಯಂ ಮದ್ಯ ಮಾರಾಟ ದರವನ್ನು ಭಾರಿ ಪ್ರಮಾಣದಲ್ಲಿ ಕಡಿಮೆ ಮಾಡಲಾಗಿದೆ.

ರಾಜ್ಯಾದ್ಯಂತ ನೂತನ ದರಗಳು ಮಂಗಳವಾರ ಮಧ್ಯರಾತ್ರಿಯಿಂದ ಜಾರಿಗೆ ಬರುತ್ತಿದ್ದು, ಎಲ್ಲ ಪ್ರೀಮಿಯಂ ಮದ್ಯದ ದರ ಶೇ.15ರಿಂದ ಶೇ.20ರಷ್ಟು ದರ ಇಳಿಕೆ ಆಗಲಿದೆ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕಕ್ಕೆ ಹೋಲಿಸಿದರೆ ನೆರೆಯ ರಾಜ್ಯಗಳಲ್ಲಿ ಪ್ರೀಮಿಯಂ ಮದ್ಯ ಮಾರಾಟದರ ಕಡಿಮೆ ಇದೆ ಇದರಿಂದ ಗಡಿ ಪ್ರದೇಶದ ರಾಜ್ಯದ ಅಂಗಡಿಗಳಲ್ಲಿ ಮದ್ಯ ಮಾರಾಟವಾಗುತ್ತಿಲ್ಲ. ಅಲ್ಲದೆ ಭಾರೀ ಪ್ರಮಾಣದಲ್ಲಿ ಕಳ್ಳ ಸಾಗಾಣಿಕೆ ಕೂಡ ನಡೆಯುತ್ತಿದೆ ಎಂಬ ವರದಿಗಳಿದ್ದವು.

Advertisements

ಈ ಹಿನ್ನೆಲೆಯಲ್ಲಿ ದುಬಾರಿ ಬೆಲೆಯ ಮದ್ಯದ ದರಗಳನ್ನು ನೆರೆಯ ರಾಜ್ಯಗಳಿಗೆ ಸರಿಸಮನಾಗಿ ಪರಿಷ್ಕರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ರ ಬಜೆಟ್‌ನಲ್ಲಿ ಪ್ರಕಟಿಸಿದ್ದರು.

ಅದರಂತೆ ದುಬಾರೆ ಬೆಲೆಯ ಮಧ್ಯ ಮಾರಾಟ ದರ ಇಳಿಕೆ ಮಾಡಿ ಜೂನ್‌ನಲ್ಲೇ ಕರಡು ಅಧಿಸೂಚನೆ ಹೊರಡಿಸಿದ್ದ ಅಬಕಾರಿ ಇಲಾಖೆ, ಜುಲೈ 1ರಿಂದ ದರ ಇಳಿಕೆಗೆ ಮುಂದಾಗಿತ್ತು. ಆದರೆ ಆಗ ಗ್ಯಾರಂಟಿ ಯೋಜನೆ ಸೇರಿದಂತೆ ಕಾರಣಗಳಿಂದ ಸಂಪನ್ಮೂಲ ಕೊರತೆ ಎದುರಿಸುತ್ತಿದ್ದ ಆರ್ಥಿಕ ಇಲಾಖೆಯ ಸೂಚನೆಯಂತೆ ದರ ಪರಿಷ್ಕರಣೆ ತಡೆ ಹಿಡಿಯಲಾಗಿತ್ತು.

ಇದೀಗ ಬದಲಾದ ಲೆಕ್ಕಾಚಾರದಂತೆ ಆಕ್ಷೇಪಣೆ ಮತ್ತು ಸಲಹೆಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಿರುವ ಅಬಕಾರಿ ಇಲಾಖೆ, ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಪರಿಷ್ಕರಿಸಿ ಆಗಸ್ಟ್‌ 23ರಂದು ಅಂತಿಮ ಅಧಿಸೂಚನೆ ಹೊರಡಿಸಿದೆ. ಇದರ ಅನ್ವಯ ಪರಿಷ್ಕೃತ ದರಗಳು ಇಂದಿನಿಂದಲೇ ರಾಜ್ಯದಾದ್ಯಂತ ಜಾರಿಗೆ ಬರಲಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X