ಧಾರವಾಡ | ಕೇಂದ್ರ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡನೆ; ರೈತ ಸಂಘದಿಂದ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿ

Date:

Advertisements

ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಧಾರವಾಡ ರೈತ ಸಂಘಗಳ ಒಕ್ಕೂಟದಿಂದ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿ ನಡೆಸಿದರು.

ಸಂಯುಕ್ತ ಕಿಸಾನ್ ಮೋರ್ಚಾ, ರೈತ ಸಂಘ ಒಕ್ಕೂಟ, ಕಬ್ಬು ಬೆಳೆಗಾರರ ಸಂಘದ ಸಂಯುಕ್ತಾಶ್ರಯದಲ್ಲಿ ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದ ಎಪಿಎಂಸಿಯಿಂದ ಆರಂಭಗೊಂಡ ರ‍್ಯಾಲಿ ಬಮ್ಮಿಗಟ್ಟಿ ಕ್ರಾಸ್, ಬಸ್‌ ನಿಲ್ದಾಣ, ಅಂಜನೇಯ ವೃತ್ತದ ಮೂಲಕ ಸಾಗಿ ತಹಶೀಲ್ದಾರ್ ಕಚೇರಿ ತಲುಪಿತು. ಬಳಿಕ ಕೇಂದ್ರ ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿದರು.

“ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ, ಖಾತ್ರಿ ಕಾನೂನು ಜಾರಿ, ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು. ವಿಶ್ವ ವ್ಯಾಪಾರ ಒಪ್ಪಂದದಿಂದ ಹೊರಬರಲು ಕೃಷಿ ಉಪಕರಣಗಳ ಮೇಲಿನ ಜಿಎಸ್‌ಟಿ ರದ್ದು ಮಾಡಬೇಕು. ಸೇವೆ ಸಲ್ಲಿಸಿದ ರೈತರಿಗೆ ಪಿಂಚಣಿ ಯೋಜನೆ ಜಾರಿ ಮಾಡಬೇಕು” ಎಂದು ಆಗ್ರಹಿಸಿದರು.

Advertisements

“ರಾಜ್ಯಾದ್ಯಂತ ಕೆರೆ-ಕಟ್ಟೆಗಳನ್ನು ಪುನಶ್ಚೇತನಗೊಳಿಸಲು ಸಂಸದರ ನಿಧಿಯನ್ನು ಬಳಸಬೇಕು. ದೇಶದ ರೈತರನ್ನು ಸಂರಕ್ಷಿಸಲು ಭಾರತ ಸರ್ಕಾರ ವಿಶ್ವ ವ್ಯಾಪಾರ ಒಪ್ಪಂದದಿಂದ ಹೊರಗೆ ಬರಬೇಕು. ನಕಲಿ ಬಿತ್ತನೆ ಬೀಜ, ನಕಲಿ ಗೊಬ್ಬರ, ನಕಲಿ ಕೀಟನಾಶಕ, ಮಾರಾಟಕ್ಕೆ ತಡೆಹಾಕಲು ಕಠಿಣ ಕಾನೂನು ಜಾರಿಗೆ ತರಬೇಕು. ರಸಗೊಬ್ಬರ. ಕೀಟನಾಶಕ, ಟ್ರಾಕ್ಟ‌ರ್ ಸೇರಿದಂತೆ ಇತರೆ ಕೃಷಿ ಉಪಕರಣಗಳ ಮೇಲಿನ ಜಿಎಸ್‌ಟಿ ತೆರಿಗೆ ರದ್ದು ಮಾಡಬೇಕು. ರಾಜ್ಯ ಸರ್ಕಾರ ರೈತರಿಗೆ ನೀಡುತ್ತಿದ್ದ ಕೃಷಿ ಸಮ್ಮಾನ್ ಯೋಜನೆಯನ್ನು ಮರು ಜಾರಿ ಮಾಡಬೇಕು” ಎಂದು ಒತ್ತಾಯಿಸಿದರು.

“ಬೆಳೆವಿಮೆ ನೀತಿ ಬದಲಾಯಿಸಿ ಪ್ರತಿ ರೈತನ ಹೊಲದ ಬೆಳೆವಿಮೆ ಜಾರಿಗೆ ತರಬೇಕು. ಬರಗಾಲ, ಅತೀವೃಷ್ಠಿ, ಮಳೆಹಾನಿ, ಪ್ರವಾಹ ಹಾನಿ, ಪ್ರಕೃತಿ ವಿಕೋಪದ ಹಾನಿ, ಬೆಳೆನಷ್ಟ ಪರಿಹಾರದ ಎನ್‌ಡಿಆರ್‌ಎಫ್‌ ಮಾನದಂಡ ಬದಲಾಯಿಸಬೇಕು. ಕಲಘಟಗಿ ಪಟ್ಟಣದ ಕಾಡಂಚಿನ ಭಾಗದಲ್ಲಿ ವನ್ಯಜೀವಿಗಳಿಂದ ಆಗುವ ಬೆಳೆಹಾನಿ, ಮಾನವಹಾನಿ, ಸಂಘರ್ಷ ತಪ್ಪಿಸಲು ವೈಜ್ಞಾನಿಕ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು. ಮಹದಾಯಿ ಯೋಜನೆ ಜಾರಿಗೆ ಮುಂದಾಗಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಗುಬ್ಬಿ | ಕಾಲೇಜು ಹುಡುಗರ ಹೊಡೆದಾಟ : ಪುಂಡಾಟಿಕೆಗೆ ಬೀಳಲಿದೆಯೇ ಬ್ರೇಕ್

ಸೊಬರದಮಠ, ನಿಜಗುಣಿ ಕೆಲಗೇರಿ, ಉಳವಪ್ಪ ಬಳಿಗೇರ, ಪರಶುರಾಮ ಎತ್ತಿನಗುಡ್ಡ, ವಸಂತ ಡಾಕಪ್ಪನವರ, ಬಸವಣ್ಣೆಪ್ಪ ಅದರಗುಂಚಿ, ಮಹೇಶ ಬೆಳಗನಕರ, ಜ್ಯೋತಿಬಾ ಹುಲಕೊಪ್ಪ, ಶಂಕ್ರಪ್ಪ ತಾವರಗೇರಿ, ಬಸವರಾಜ, ಶಿವು ತಡಸ, ಶಂಭು ಬಳಿಗೇರ, ಮಂಜುನಾಥ ಹೊಸಮನಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X