ರಾಯಚೂರು | ಕಟ್ಟಡ ಕಾರ್ಮಿಕರಿಗೆ ಮೆಡಿಕಲ್‌ ಕಿಟ್‌ ವಿತರಣೆ

Date:

Advertisements

ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಕೆಲಸದ ಸಮಯದಲ್ಲಿ ದೈಹಿಕ ಸಮಸ್ಯೆ ಉಂಟಾದರೆ ಪೂರ್ವ ಚಿಕಿತ್ಸೆಗಾಗಿ ಸಿಡಬ್ಲ್ಯೂಎಫ್ಐ ಸಂಘಟನೆಯ ವತಿಯಿಂದ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನಲ್ಲಿ ಮೆಡಿಕಲ್ ಕಿಟ್ ವಿತರಣೆ ಮಾಡಲಾಯಿತು.

ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದ ಸಿದ್ದರಾಮೇಶ್ವರ ಮಠದಲ್ಲಿ ಕಾರ್ಮಿಕರಿಗೆ ಕೆಲಸದ ಸಮಯದಲ್ಲಿ ಸಣ್ಣ ಪುಟ್ಟ ಗಾಯಗಳು , ಪೆಟ್ಟಾಗುವುದು ಸಹಜ ಅದನ್ನು ಹೇಗೆ ನಿರ್ವಹಣೆ ಮಾಡುವುದು ಎಂದು ಜಾಗೃತಿ ಮೂಡಿಸಿದರು.

ಈ ವೇಳೆ ಮಾತನಾಡಿದ ಕಾರ್ಮಿಕ ಮುಖಂಡ, ಸಿಡಬ್ಲ್ಯೂಎಫ್ಐ ತಾಲೂಕು ಪ್ರಧಾನ ಕಾರ್ಯದರ್ಶಿ ನಿಂಗಪ್ಪ, ಕಟ್ಟಡ ಕಾರ್ಮಿಕರು ಬೆವರ ಸುರಿಸಿ ಶ್ರಮಪಟ್ಟು , ಕೆಲಸ ಕಾರ್ಯಗಳು ನಿರ್ವಹಿಸುತ್ತಾರೆ. ಕೆಲಸದ ಸಮಯದಲ್ಲಿ ಏಕಾಏಕಿ ಆರೋಗ್ಯ ಸಮಸ್ಯೆ ಬಂದರೆ ಗಾಬರಿಯಾಗಬಾರದು. ಅದಕ್ಕೆ ಪೂರಕವಾಗಿ ಮೆಡಿಕಲ್ ಕಟ್‌ಗಳನ್ನು ನೀಡಲಾಗಿದೆ. ಹೆಚ್ಚಿನ ಕಾರ್ಮಿಕರು ಅವಿದ್ಯಾವಂತರಾಗಿರುತ್ತಾರೆ. ಮನೆಗಳು ಕಟ್ಟುವಾಗ, ಭಾರವಾದ ಕಲ್ಲುಗಳನ್ನು ಎತ್ತುವಾಗ ಗಾಯಗಳು ಆಗುತ್ತವೆ. ಅದನ್ನು ನಿವಾರಿಸುವುದು ಹೇಗೆ ಅನ್ನುವುದಕ್ಕೆ ಜಾಗೃತಿ ಮೂಡಿಸಲಾಗುತ್ತಿದ ಎಂದರು.

Advertisements

ಕಾರ್ಮಿಕ ಕಲ್ಯಾಣ ಮಂಡಳಿಯ ನಿರೀಕ್ಷಕರಾದ ಆದಾ ಶಾಂತಮೂರ್ತಿ, ಮೌನೇಶ್, ನರಸಿಂಹಲು ಈ ಮೆಡಿಕಲ್ ಕಿಟ್‌ಗಳನ್ನು ಕಟ್ಟಡ ಕಾರ್ಮಿಕರಿಗೆ ವಿತರಿಸಿದರು.

ಇದನ್ನು ಓದಿದ್ದೀರಾ? ರಾಯಚೂರು | ರೈತ ವಿರೋಧಿ ಕಾಯ್ದೆ ರಾಜ್ಯದಲ್ಲಿ ರದ್ದುಗೊಳಿಸಲು ಆಗ್ರಹಿಸಿ ಸೆ.4ರಂದು ಪ್ರತಿಭಟನೆ

ಈ ಸಂದರ್ಭದಲ್ಲಿ ಎಂ ವೀರಾಪೂರು, ದಾವೂದ್ ಹಟ್ಟಿ, ಗ್ರಾಮ ಘಟಕದ ಅಧ್ಯಕ್ಷ ಅಯ್ಯಪ್ಪ ಅಂಕೂಸದೂಡ್ಡಿ, ನಾಗರಾಜ್, ರಮೇಶ್, ಆದಪ್ಪ ಅಂಕೂಸದೂಡ್ಡಿ, ಗ್ರಾಮ ಘಟಕ ಕಾರ್ಮಿಕರು ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X