ಘಟಪ್ರಭಾ ನದಿ ಪ್ರವಾಹ ಪರಿಹಾರ ಕುರಿತು ಶೀಘ್ರ ಕ್ರಮ: ರೈತರಿಗೆ ಸಿಎಂ ಸಿದ್ದರಾಮಯ್ಯ ಭರವಸೆ

Date:

Advertisements

ಘಟಪ್ರಭಾ ನದಿಯ ಪ್ರವಾಹದಿಂದಾಗಿ ಪ್ರತಿವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಅವರು ಬುಧವಾರ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ಮುಧೋಳ ತಾಲೂಕಿನ ರೈತರ ನಿಯೋಗದೊಂದಿಗೆ ಚರ್ಚೆ ನಡೆಸಿದರು.

“ನೀರಾವರಿ ಸಚಿವರು, ಕಂದಾಯ ಸಚಿವರು ಹಾಗೂ ಲೋಕೋಪಯೋಗಿ ಇಲಾಖೆ ಸಚಿವರೊಂದಿಗೆ ಆದಷ್ಟು ಬೇಗನೆ ಸಭೆ ನಡೆಸಿ ಈ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಹೇಳಿದರು.

Advertisements

“ಘಟಪ್ರಭಾ ನದಿಯ ಪ್ರವಾಹದಿಂದಾಗಿ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಒಟ್ಟು 34,639 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. 2019 ರಲ್ಲಿ 15,088 ಹೆಕ್ಟೇರ್‌, 2021ರಲ್ಲಿ 7,051 ಹೆಕ್ಟೇರ್ ಮತ್ತು 2024‌ ರಲ್ಲಿ 12,500 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ ಉಂಟಾಗಿದೆ. ಇದಕ್ಕೆ ಸೂಕ್ತ ಬೆಳೆ ಪರಿಹಾರ ಹಾಗೂ ಶಾಶ್ವತ ಪರಿಹಾರ ಒದಗಿಸಬೇಕು” ಎಂದು ರೈತರ ನಿಯೋಗ ಮನವಿ ಮಾಡಿತು.

“ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ನೀರಾವರಿ ಕ್ಷೇತ್ರದ ಕಬ್ಬಿನ ಬೆಳೆಗೆ ಪ್ರತಿ ಹೆಕ್ಟೇರಿಗೆ ರೂ. 22,500 ರಂತೆ ಪರಿಹಾರ ಧನ ನಿಗದಿಪಡಿಸಲಾಗಿದ್ದು, ಇತರ ಬೆಳೆಗಳಿಗೆ ರೂ. 17000 ನಿಗದಿಪಡಿಸಲಾಗಿದೆ. ಇದರಿಂದ ರೈತರಿಗೆ ಯಾವುದೇ ರೀತಿಯ ಪ್ರಯೋಜನವಾಗುವುದಿಲ್ಲ” ಎಂದು ರೈತರು ಸಿಎಂಗೆ ತಿಳಿಸಿದರು.

“ಈಗಾಗಲೇ ಕೃಷಿ ವಿಶ್ವವಿದ್ಯಾಲಯ ಕರ್ನಾಟಕದ ಕಬ್ಬು ಬೆಳೆಯಲು ತಗಲುವ ವೆಚ್ಚ ಪ್ರತಿ ಹೆಕ್ಟೇರ್‌ಗೆ 1.50 ಲಕ್ಷ ರೂ. ನಿಗದಿಪಡಿಸಿದ್ದು, ಇದು ಸಹ ಅವೈಜ್ಞಾನಿಕವಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಇದು ಕನಿಷ್ಟವಾಗಿದ್ದು, ಪ್ರತಿ ಎಕರೆ ಕಬ್ಬು ಬೆಳೆಗೆ ರೂ. 1 ಲಕ್ಷ ಹಾಗೂ ಇತರ ಬೆಳೆಗಳಿಗೆ ರೂ.50 ಸಾವಿರ ಪರಿಹಾರವನ್ನು ನೀಡಬೇಕು. ಎನ್‌.ಡಿ.ಆರ್.ಎಫ್‌ ಮತ್ತು ಎಸ್.ಡಿ.ಆರ್.ಎಫ್‌ ಮಾನದಂಡಗಳನ್ನು ಪರಿಗಣಿಸದೆ ಹಾನಿಗೊಳಗಾದ ಎಲ್ಲ ಕ್ಷೇತ್ರಕ್ಕೂ ಪರಿಹಾರ ಧನವನ್ನು ನೀಡಬೇಕು” ಎಂದು ರೈತರು ಮನವಿ ಸಲ್ಲಿಸಿದರು.

ಅಬಕಾರಿ ಸಚಿವ ಆರ್.‌ ಬಿ.ತಿಮ್ಮಾಪುರ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X