ಚಿಕ್ಕಬಳ್ಳಾಪುರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಯ ಈದಿನ ಸಹಾಯವಾಣಿ ಪೋಸ್ಟರ್ ಬಿಡುಗಡೆಗೊಳಿಸಿದರು.
ಈ ವೇಳೆ ಮಾತನಾಡಿದ ಸಚಿವರು, ಜನಸಾಮಾನ್ಯರಿಗೆ ಅತೀ ವೇಗವಾಗಿ ಸುದ್ದಿಗಳನ್ನು ತಲುಪಿಸುವಲ್ಲಿ ಡಿಜಿಟಲ್ ಮಾಧ್ಯಮಗಳು ವೇಗ ಪಡೆದುಕೊಂಡಿವೆ ಎಂದು ಅಭಿಪ್ರಾಯಪಟ್ಟರು.
ಪ್ರಸ್ತುತ ಡಿಜಿಟಲ್ ಮಾಧ್ಯಮಗಳು ಹೆಚ್ಚು ಪ್ರಚಲಿತದಲ್ಲಿದ್ದು, ಯಾವುದೇ ಮಾಹಿತಿಯನ್ನು ಹೆಚ್ಚಿನ ಜನ ಸಮೂಹಕ್ಕೆ ತಲುಪಿಸುವಲ್ಲಿಯೂ ಯೂಟ್ಯೂಬ್ ಹಾಗೂ ಡಿಜಿಟಲ್ ಮಾಧ್ಯಮಗಳು ಮುಂಚೂಣಿಯಲ್ಲಿವೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅತ್ಯಾಚಾರಿಗೆ ಶಿಕ್ಷೆ; ನುಡಿದಂತೆ ನಡೆಯಲಿ ನರೇಂದ್ರ ಮೋದಿ
ಈ ವೇಳೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಪಂ ಸಿಇಒ ಪ್ರಕಾಶ್ ಜಿ. ನಿಟ್ಟಾಲಿ, ಡಿಎಫ್‌ಒ ರಮೇಶ್, ಪತ್ರಕರ್ತರಾದ ನಾರಾಯಣಸ್ವಾಮಿ, ಅಂಬರೀಶ್, ಅರಕೆರೆ ಮುನಿರಾಜು ಹಾಜರಿದ್ದರು.