ಸಿಎ ಸೈಟ್ ಪ್ರಕರಣ | ದೇಶಕ್ಕೆ ಉಪದೇಶ ಕೊಡುವ ಪ್ರಿಯಾಂಕ್ ಖರ್ಗೆ ಈಗ ಉತ್ತರಿಸಲಿ: ಕುಮಾರಸ್ವಾಮಿ ಆಗ್ರಹ

Date:

Advertisements

‌ಸಚಿವ ಪ್ರಿಯಾಂಕ್ ಖರ್ಗೆ ಮಾತಿಗೆ ಮುಂಚೆ ಊರಿಗೆಲ್ಲ ಬುದ್ಧಿ ಹೇಳುತ್ತಿದ್ದರು. ಈಗ ಅವರೇ ಬುದ್ಧಿ ಹೇಳಿಸಿಕೊಳ್ಳುವ ಸ್ಥಿತಿಗೆ ಬಂದು ತಲುಪಿದ್ದಾರೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದರು.

ಮಂಡ್ಯ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಸಚಿವರು ಮಾಧ್ಯಮಗಳ ಜತೆ ಮಾತನಾಡಿ, “ಖರ್ಗೆ ಅವರು ದೇಶಕ್ಕೆ, ನಾಡಿಗೆಲ್ಲ ಬುದ್ದಿ ಹೇಳುವವರು, ಉಪದೇಶ ಮಾಡುವವರು. ಯಾವ ಆಧಾರದ ಮೇಲೆ ಕೆಐಎಡಿಬಿ ಜಾಗವನ್ನು ತೆಗೆದುಕೊಂಡಿದ್ದಾರೆ” ಎಂದು ಕೇಂದ್ರ ಪ್ರಶ್ನಿಸಿದರು.

“ದುಡ್ಡು ಕೊಟ್ಟು ಖರೀದಿಸಲು ಆಗುತ್ತಿರಲಿಲ್ಲವಾ? ಖಾಸಗಿ ಜಮೀನು ಖರೀದಿ ಮಾಡಬಹುದಿತ್ತು. ಕೆಐಎಡಿಬಿ ಜಾಗವೇ ಬೇಕಿತ್ತಾ? ಇದು ಅಧಿಕಾರ ದುರಪಯೋಗ. ದೇಶಕ್ಕೆ ಬುದ್ದಿ ಹೇಳುವವರು ಇದಕ್ಕೆ ಉತ್ತರ ಹೇಳಬೇಕು ಎಂದು” ಆಗ್ರಹಿಸಿದರು.

Advertisements

ರಾಜಭವನ ಚಲೋಗೆ ಸಚಿವರ ವ್ಯಂಗ್ಯ

“ಕಾಂಗ್ರೆಸ್ ನಾಯಕರು 30ನೇ ತಾರೀಖು ರಾಜಭವನ ಚಲೋ ಮಾಡುತ್ತಿರುವುದಕ್ಕೆ ಬಹಳ ಸಂತೋಷ. ಅವರು ರಾಜಭವನದ ಜೊತೆಗೆ ರಾಷ್ಟ್ರಪತಿ ಭವನ ಚಲೋ ಕೂಡ ಮಾಡಲಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮನೆಗೆ ಕೂಡ ಹೋಗಲಿ. ಸತ್ತಿರುವ ವಿಚಾರ ಇಟ್ಟುಕೊಂಡು ನನ್ನ ಬಗ್ಗೆ ಮಾತನಾಡುತ್ತಿದ್ದಾರೆ. ಮಹಾನ್ ಅಪರಾಧ ಮಾಡಿದ್ದಾರೆ ಎನ್ನುತ್ತಿದ್ದಾರೆ. ನಾನೇ ಕೈ ಜೋಡಿಸಿ ಮನವಿ ಮಾಡುತ್ತೇನೆ . ರಾಜ್ಯಪಾಲರ ಅನುಮತಿ ಪಡೆದು ತನಿಖೆ ಮಾಡಲಿ” ಎಂದರು.

“ಮಂತ್ರಿಗಳ ಲೇಟರ್ ಪ್ಯಾಡ್ ನಲ್ಲಿ ಈ ಜನ ಏನೆಲ್ಲಾ ದುರುಪಯೋಗ ಪಡಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಎಲ್ಲರಿಗೂ ಇದೆ. ಮುಡಾ ದಾಖಲೆಗಳಲ್ಲಿ ಸಹಿ ವ್ಯತ್ಯಾಸ ಜನ ಮಾತನಾಡುತ್ತಿದ್ದಾರೆ. ಈ ಹಗರಣದಲ್ಲಿ ಆಗಿರುವ ಬೆಳವಣಿಗೆ ಬಗ್ಗೆ ಟಾರ್ಚ್ ಹಾಕಿ ನೋಡಿದರೂ ಅಷ್ಟೇ, ಹಾಕದೇ ನೋಡಿದರೂ ಅಷ್ಟೇ. ಅದು ಸರ್ಕಾರಿ ಭೂಮಿ. ಸರ್ಕಾರಿ ಭೂಮಿ ಲಪಟಾಯಿಸಿ ಮುಡಾ ಸೈಟ್ ಪಡೆದಿದ್ದಾರೆ. ಇದಕ್ಕೆ ಉತ್ತರ ಕೊಡಲಿ” ಎಂದು ಒತ್ತಾಯ ಮಾಡಿದರು.

ಮಂಡ್ಯ ನಗರಸಭೆ ಚುನಾವಣೆ ಮತದಾನದ ವೇಳೆಯಲ್ಲೇ ಚುನಾವಣಾಧಿಕಾರಿ ಸಮಕ್ಷಮದಲ್ಲಿಯೇ ಸ್ಥಳೀಯ ಶಾಸಕರು ನಮ್ಮ ಪಕ್ಷದ ಸದಸ್ಯರಿಗೆ ಅಡ್ಡ ಮತದಾನಕ್ಕೆ ಕುಮ್ಮಕ್ಕು ನೀಡಿ ಕಣ್ಸನ್ನೇ, ಕೈಸನ್ನೇ ಮೂಲಕ ಹಣದ ಆಮೀಷ ಒಡ್ಡಿದರು ಎಂದು ಶಾಸಕ ಗಣಿಗ ರವಿ ವಿರುದ್ಧ ಕುಮಾರಸ್ವಾಮಿ ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಮಾಜಿ ಜಾತ್ಯತೀತ ಕುಮಾರಣ್ಣ,, ಸೈಟ್, ಜಮೀನು, ರಿಯಲ್ ಎಸ್ಟೇಟ್ ರಾಜಕೀಯ ಎಲ್ಲವೂ ನಿಮ್ಮೊಬ್ಬರ ಗುತ್ತಿಗೆಯಾ,,

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X