ಚಿಕ್ಕಬಳ್ಳಾಪುರ | 5 ಲಕ್ಷ ಮೌಲ್ಯದ ಕರ್ಕಶ ಧ್ವನಿಯ ಸೈಲೆನ್ಸರ್‌ಗಳ ನಾಶ

Date:

Advertisements

ಪೊಲೀಸ್‌ ಇಲಾಖೆ ವಶಪಡಿಸಿಕೊಂಡಿದ್ದ ಸುಮಾರು 5 ಲಕ್ಷ ಮೌಲ್ಯದ ಕರ್ಕಶ ಧ್ವನಿಯ ದ್ವಿಚಕ್ರ ವಾಹನಗಳ ಸೈಲೆನ್ಸರ್‌ಗಳನ್ನು ನಗರದ ಶಿಡ್ಲಘಟ್ಟ ವೃತ್ತದಲ್ಲಿ ಬುಧವಾರ ಎಸ್ಪಿ ಕುಶಾಲ್‌ ಚೌಕ್ಸೆ ನೇತೃತ್ವದಲ್ಲಿ ಬುಲ್ಡೋಜರ್‌ ಮೂಲಕ ನಾಶಗೊಳಿಸಲಾಯಿತು.

ಈ ವೇಳೆ ಮಾತನಾಡಿದ ಎಸ್ಪಿ ಕುಶಾಲ್‌ ಚೌಕ್ಸೆ, ನಗರದಾದ್ಯಂತ ಕರ್ಕಶ ಧ್ವನಿಯ ಮೂಲಕ ಸಾರ್ಚಜನಿಕರಿಗೆ, ಸವಾರರಿಗೆ ಕಿರಿಕಿರಿ ಉಂಟುಮಾಡುತ್ತಿದ್ದ ಸುಮಾರು 150 ದ್ವಿಚಕ್ರ ವಾಹನಗಳ ಸೈಲೆನ್ಸರ್‌ಗಳನ್ನು ಕಳೆದ 15 ದಿನಗಳಿಂದ ವಶಪಡಿಸಿಕೊಂಡಿದ್ದು, ಇಂದು ಬುಲ್ಡೋಜರ್‌ ಮೂಲಕ ಧ್ವಂಸಗೊಳಿಸಲಾಗಿದೆ ಎಂದು ಹೇಳಿದರು.

ನಗರದಲ್ಲಿ ಬುಧವಾರ ಎಸ್ಪಿ ಕುಶಾಲ್‌ ಚೌಕ್ಸೆ ಸುದ್ದಿಗಾರರೊಂದಿಗೆ ಮಾತನಾಡಿದರು.

ಮೋಜು, ಮಸ್ತಿ, ರೀಲ್ಸ್‌ಗಳ ಹುಚ್ಚಿನಿಂದ ಯುವಜನತೆ ಈ ರೀತಿಯ ಸೈಲೆನ್ಸರ್‌ಗಳನ್ನು ಬಳಸುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ಕಿರಿಕಿರಿಯುಂಟಾಗುತ್ತಿದ್ದ ಹಿನ್ನೆಲೆ ಇಲಾಖೆ ವತಿಯಿಂದ ಕ್ರಮ ವಹಿಸಲಾಗಿದೆ. ಒಂದೊಂದು ಸೈಲೆನ್ಸರ್‌ಗಳು ದುಬಾರಿ ಬೆಲೆಯದ್ದಾಗಿದ್ದು, 10 ಸಾವಿರದಿಂದ 50 ಸಾವಿರದವರೆಗೆ ಬೆಲೆ ಬಾಳುತ್ತವೆ. ಒಟ್ಟಾರೆಯಾಗಿ ಇಂದು 5 ಲಕ್ಷ ಮೌಲ್ಯದ 150 ಸೈಲೆನ್ಸರ್‌ಗಳನ್ನು ನಾಶಪಡಿಸಲಾಗಿದೆ ಎಂದರು.

Advertisements

ಇದಿಷ್ಟೇ ಅಲ್ಲದೆ ಸೈಲೆನ್ಸರ್‌ ತಯಾರಿಸುವ ಗ್ಯಾರೇಜ್‌ ಹಾಗೂ ಅಂಗಡಿ ಮಾಲೀಕರಿಗೂ ಸಹ ಇಲಾಖೆ ವತಿಯಿಂದ ಎಚ್ಚರಿಕೆ ನೀಡಲಾಗಿದೆ. ಜತೆಗೆ ತೀಕ್ಷ್ಣ ಸ್ವರೂಪದ ಎಲ್.ಇ.ಡಿ ಬಲ್ಬ್‌ ಅಳವಡಿಸುವ ಸವಾರರಿಗೂ ಈಗಾಗಲೇ ಎಚ್ಚರಿಕೆ ನೀಡಲಾಗಿದ್ದು, ಬಳಕೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಎಲ್.ಇ.ಡಿ ಬಲ್ಬ್‌ಗಳನ್ನೂ ವಶಪಡಿಸಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದೇ ವೇಳೆ ಗಸ್ತು ವಾಹನಗಳನ್ನು ಚಲಾಯಿಸುವ ಮೂಲಕ ಎಸ್ಪಿ ಕುಶಾಲ್‌ ಚೌಕ್ಸೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಈದಿನ ಸಹಾಯವಾಣಿ ಬಿಡುಗಡೆಗೊಳಿಸಿದ ಸಚಿವ ಎಂ.ಸಿ.ಸುಧಾಕರ್

ಈ ವೇಳೆ ಎಎಸ್ಪಿ ರಾಜಾ ಖಾಸೀಂ, ಸಂಚಾರಿ ಪೊಲೀಸ್‌ ಠಾಣೆ ಅಧಿಕಾರಿ ಮಂಜುಳ, ನಗರ ಪೊಲೀಸ್‌ ಇನ್ಸ್ಪೆಕ್ಟರ್‌ ನಂಜುಡಯ್ಯ ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X