ಭಾರತೀಯ ವಾಯುಪಡೆ ಹಾಗೂ ಜಿಲ್ಲಾಡಳಿತ ಸಹಯೋಗದಲ್ಲಿ ಬೀದರ್ ನಗರದ ಕೋಟೆಯ ಮೇಲೆ ಆಗಸ್ಟ್ 30, 31ರಂದು ಏರ್ ಶೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಆ.30 ಶುಕ್ರವಾರದಂದು ಜಿಲ್ಲೆಯ ಎಲ್ಲಾ ಸಾರ್ವಜನಿಕರಿಗೆ ಕೋಟೆಯಲ್ಲಿ ಏರ್ ಶೋ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದ್ದು, ಅಂದು ಮಧ್ಯಾಹ್ನ 3ಕ್ಕೆ ಸಾರ್ವಜನಿಕರು ಕೋಟೆ ಒಳಗಡೆ ನಿಗದಿತ ಸ್ಥಳದಲ್ಲಿ ಹಾಜರಾಗಿ ಏರ್ ಶೋ ವೀಕ್ಷಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಬುಧವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆ.31 ಶನಿವಾರ ನಗರದ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಹಾಗೂ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರಿಗೆ ಏರ ಶೋ ವೀಕ್ಷಿಸಲು ಅವಕಾವಿದ್ದು, ಸರ್ಕಾರಿ ನೌಕರರು ಕಡ್ಡಾಯವಾಗಿ ತಮ್ಮ ಕಛೇರಿಯ ಗುರುತಿನ ಚೀಟಿ ಧರಿಸಿ ಮಧ್ಯಾಹ್ನ 3 ಗಂಟೆಯೊಳಗೆ ಎಲ್ಲಾ ಶಾಲಾ-ಕಾಲೇಜುಗಳ ಶಿಕ್ಷಕರು, ಪ್ರಾಂಶುಪಾಲರು ತಮ್ಮ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳೊಂದಿಗೆ ನಿಗದಿತ ಸಮಯಕ್ಕೆ ಬರುವಂತೆ ನೋಡಿಕೊಳ್ಳಬೇಕುʼ ಎಂದು ತಿಳಿಸಿದ್ದಾರೆ.