ರಾಯಚೂರು | ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕೂಷನ್‌ ಅನುಮತಿ ಹಿಂಪಡೆಗೆ ಆಗ್ರಹ

Date:

Advertisements

ರಾಜ್ಯಪಾಲರು ಪ್ರಜಾಪ್ರಭುತ್ವದ ಆಶಯವನ್ನು ಭಗ್ನಗೊಳಿಸಿ ಸಂವಿಧಾನ ವಿರೋಧಿಗಳಂತೆ ನಡೆದುಕೊಂಡಿರುವುದು ಖಂಡನೀಯ. ಕೂಡಲೇ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ ಹಿಂಪಡೆಯಬೇಕು ಎಂದು ಎದ್ದೇಳು ಕರ್ನಾಟಕ ಜಿಲ್ಲಾ ಸಂಚಾಲಕ ಮಾರೆಪ್ಪ ಹರವಿ ಒತ್ತಾಯಿಸಿದರು.

ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ʼತಳಸಮುದಾಯ ಓರ್ವ ನಾಯಕ ಸಿದ್ದರಾಮಯ್ಯನವರು ಎರಡು ಅವಧಿಗೆ ಮುಖ್ಯಮಂತ್ರಿಯಾಗಿ ಜನಪರ ಸರ್ಕಾರ ನೀಡುವುದನ್ನು ಸಹಿಸದ ಬಿಜೆಪಿ-ಜೆಡಿಎಸ್‌ ಪಕ್ಷಗಳು ರಾಜ್ಯಪಾಲರನ್ನು ಬಳಸಿಕೊಂಡು ಸರ್ಕಾರ ಅಸ್ಥಿರಗೊಳಿಸಲು ಹುನ್ನಾರ ನಡೆಸುತ್ತಿವೆʼ ಎಂದು ಆರೋಪಿಸಿದರು .

ʼಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಳೆದ 15 ತಿಂಗಳಲ್ಲಿ ಜನರ ಬದುಕಿನ ಒಮ್ಮೆಯೂ ಧ್ವನಿ ಎತ್ತಲಿಲ್ಲ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಬಳಿಕ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಇನ್ನಿಲ್ಲದ ಷಡ್ಯಂತ್ರ ಹೂಡುವುದೇ ಬಿಜೆಪಿಯ ನಿತ್ಯದ ಕಾಯಕವಾಗಿದೆʼ ಎಂದರು .

Advertisements

ʼಸಿಬಿಐ, ಇಡಿ, ಐಟಿಗಳಂತಹ ಸಾಂವಿಧಾನಿಕ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ತಳ್ಳುವುದು, ಅಪರೇಷನ್ ಕಮಲ ಮೂಲಕ ಸರ್ಕಾರಗಳು ಕೆಡವು ಪ್ರಯತ್ನ ಇನ್ನು ಮುಂದುವರೆದಿದೆ. ರಾಜ್ಯದ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಅವರ ಅನುಮತಿ ತಿರಸ್ಕರಿಸಿ ನ್ಯಾಯಾಲಯ ರಾಜಕೀಯ ಶಕ್ತಿಗಳಿಗೆ ಹೊಸ ಸಂದೇಶ ರವಾನಿಸಿ ಸಂವಿಧಾನಿಕ ಘನತೆ ಎತ್ತಿ ಹಿಡಿಯಬೇಕುʼ ಎಂದು ಹೇಳಿದರು.

ಪ್ರಗತಿಪರ ಹೋರಾಟಗಾರ ಖಾಜಾ ಅಸ್ಲಾಂ ಪಾಶಾ, ಎಂ.ಆರ್. ಭೇರಿ, ಸಮದ್, ರಂಗಾರೆಡ್ಡಿ ಹಾಗೂ ಕರ್ನಾಟಕ ಜನಶಕ್ತಿ ಮುಖಂಡ ಆಂಜನೇಯ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X