ಮಂಡ್ಯ | 87ನೇ ಅಖಿಲ ಭಾರತ ಕನ್ನಡ ನುಡಿ ಸಮ್ಮೇಳನ; ಮೆರವಣಿಗೆ ಸಮಿತಿ ಸಭೆ

Date:

Advertisements

‘ಸಕ್ಕರೆ ನಗರಿ’ ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ನುಡಿ ಜಾತ್ರೆಯಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರ ಮೆರವಣಿಗೆ ವರ್ಣರಂಜಿತವಾಗಿರಲಿ ಎಂದು ಮೆರವಣಿಗೆ ಸಮಿತಿ ಅಧ್ಯಕ್ಷರು ಹಾಗೂ ಶಾಸಕ ಮಧು ಜಿ ಮಾದೇಗೌಡ

ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಮೆರವಣಿಗೆ ಸಮಿತಿ’ ಸಭೆಯಲ್ಲಿ ಮಾತನಾಡಿ, “ಸಮ್ಮೇಳನಾಧ್ಯಕ್ಷರಿಗೆ ತೋರುವ ಗೌರವ ಕನ್ನಡ ನಾಡು-ನುಡಿ ಸಾಹಿತ್ಯಕ್ಕೆ ಸಲ್ಲಿಸಿದಂತೆ. ಹಾಗಾಗಿ, ಮೆರವಣಿಗೆಯನ್ನು ಸಾಂಗವಾಗಿ, ಅರ್ಥಪೂರ್ಣ, ಆಕರ್ಷಕ ಮತ್ತು ವೈಭವಯುತವಾಗಿ ನಡೆಸಬೇಕು. ಮೆರವಣಿಗೆಯ ಗೆಲುವೇ ಸಮ್ಮೇಳನದ ಗೆಲುವು” ಎಂದು ಹೇಳಿದರು.

“ದಸರಾ ಮಾದರಿಯಲ್ಲಿ ಕನ್ನಡತನ ಸಾರುವ, ನಾಡು, ನುಡಿ ಸಂಸ್ಕೃತಿಯನ್ನು ಬಿಂಬಿಸುವ ಸ್ತಬ್ದಚಿತ್ರಗಳು ಹಾಗೂ ಕಲಾ ತಂಡಗಳು ಭಾಗವಹಿಸಲಿವೆ. ಮಂಡ್ಯ ನಗರದ ಸರ್ ಎಂ ವಿಶ್ವೇಶ್ವರಯ್ಯ ಪ್ರತಿಮೆ ಮುಂದೆಯಿಂದ ಶುರುವಾಗುವ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಕನ್ನಡ ಮಯವಾಗಿರಲಿದೆ. ಮೆರವಣಿಗೆ ಸಾಗುವ ದಾರಿಯುದ್ದಕ್ಕೂ ಇಕ್ಕೆಲಗಳಲ್ಲಿ ಕನ್ನಡ ಬಾವುಟಗಳಿಂದ ಸಿಂಗಾರ ಮಾಡಲಾಗುವುದು. ಮೆರವಣಿಗೆಯಲ್ಲಿ ಜಿಲ್ಲೆ, ಹೊರ ಜಿಲ್ಲೆ, ಗಡಿನಾಡು ಹಾಗೂ ಹೊರ ನಾಡುಗಳ ಕಲಾತಂಡಗಳು, ಸ್ಕೌಟ್ಸ್, ಎನ್‌ಎಸ್‌ಎಸ್, ಶಾಲೆ-ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸುವರು” ಎಂದು ಶಾಸಕ ಮಧು ಜಿ ಮಾದೇಗೌಡ ಹೇಳಿದರು.

Advertisements

“ಸಾಹಿತ್ಯ ಸಮ್ಮೇಳನದ ಮೆರವಣಿಗೆ ದಸರಾ ಮಾದರಿಯಲ್ಲಿ ಇರಬೇಕು. ಇವುಗಳು ಪ್ರತಿ ತಾಲೂಕುಗಳ ನುಡಿ ಸಂಸ್ಕೃತಿ, ಶಿಲ್ಪಕಲೆಯನ್ನು ಬಿಂಬಿಸುವ ಸ್ತಬ್ಧಚಿತ್ರಗಳು ಇರಬೇಕು. ಮೆರವಣಿಗೆ 6 ಕಿಮೀ ಕ್ರಮಿಸಬೇಕಿದೆ. ಹಾಗಾಗಿ, ಮೂರು ತಂಡಗಳನ್ನಾಗಿ ವಿಭಾಗಿಸಬೇಕು. ನಿರ್ದಿಷ್ಟ ದೂರ ಕ್ರಮಿಸದ ನಂತರ ಬೇರೊಂದು ಪೂರ್ಣಕುಂಭ ತಂಡ ಮೆರವಣಿಗೆ ಸೇರುವಂತೆ ಏರ್ಪಾಡು ಮಾಡಬೇಕು. ಪ್ಲಾಸ್ಟಿಕ್ ಮುಕ್ತ ಮೆರವಣಿಗೆ ಮಾಡುವ ಮೂಲಕ ಪರಿಸರ ಸ್ನೇಹಿ ಸಂದೇಶವನ್ನು ತಲುಪಿಸುವಂತಾಗಬೇಕು” ಎಂಬ ಸಲಹೆ ವ್ಯಕ್ತವಾಯಿತು.

ಸಮಿತಿಯ ಉಪಾಧ್ಯಕ್ಷ ಡಿ ಪಿ ಸ್ವಾಮಿ ಮಾತನಾಡಿ, “ಎಲ್ಲ ಜಿಲ್ಲೆಗಳಿಂದ, ಗಡಿನಾಡುಗಳಿಂದ ಪ್ರತಿನಿಧಿಕವಾಗಿ ಒಂದು ಉತ್ತಮ ಕಲಾತಂಡಗಳು ಇರಬೇಕು. 87 ಎತ್ತಿನಗಾಡಿಗಳಲ್ಲಿ 87ನೇ ಸಮ್ಮೇಳನಾಧ್ಯಕ್ಷರ ಭಾವಚಿತ್ರವನ್ನು ಮೆರವಣಿಗೆ ಮಾಡಬೇಕು” ಎಂದರು.

ಸಮಿತಿಯ ಸದಸ್ಯ ವೆಂಕಟಗಿರಿಯಯ್ಯ ಮಾತನಾಡಿ, “ಸಮ್ಮೇಳನದ ದಿನವೇ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಬೇಕು. ಮೆರವಣಿಗೆ ವೈಭವಯುತವಾಗಿ ಇರಬೇಕು. ಮುಖ್ಯ ವೇದಿಕೆಗೆ ಮೆರವಣಿಗೆ ಸುಮಾರು 11 ಗಂಟೆ ವೇಳೆಗೆ ತಲುಪುವಂತೆ ಮೆರವಣಿಗೆ ಆರಂಭದ ಸಮಯವನ್ನು ನಿಗದಿಪಡಿಸುವುದು ಸೂಕ್ತ. ಜಿಲ್ಲೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕೊಡುಗೆ ನೆನಪಿಸುವಂತಹ ಸ್ತಬ್ಧಚಿತ್ರವಿರುವುದು ಸೂಕ್ತ” ಎಂದು ಹೇಳಿದರು.

ಡಿ ದೇವರಾಜ ಅರಸು ಸಂಘಟನೆಯ ಸಂದೇಶ್ ಮಾತನಾಡಿ, “ಮೆರವಣಿಗೆಯು ನಗರದಲ್ಲಿ ಸಾಂಸ್ಕೃತಿಕ ವಾತಾವರಣ, ಕನ್ನಡದ ವಾತಾವರಣವನ್ನು ನಿರ್ಮಿಸುವಂತಿರಬೇಕು. ಮೆರವಣಿಗೆ ವೈಭಯುತವಾಗಿ ಇರಬೇಕು. ಕನ್ನಡ ರಥ ಎಲ್ಲ ತಾಲೂಕು ಕೇಂದ್ರಗಳಲ್ಲಿ ಸಂಚರಿಸುವ ಮೂಲಕ ಪ್ರಚಾರ ನಡೆಸಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಮನಗರ | ದಬ್ಬಾಳಿಕೆಗೆ ಒಳಗಾದ ಮಹಿಳೆಯರು ಸ್ವತಂತ್ರ ಬದುಕು ಕಟ್ಟಿಕೊಳ್ಳಲು ನೆರವು: ಜಿಲ್ಲಾಧಿಕಾರಿ ಯಂಶವತ್ ವಿ ಗುರುಕರ್

ಸಭೆಯಲ್ಲಿ ಕಲಾತಂಡಗಳ ಆಯ್ಕೆ ಸಮಿತಿ, ಸ್ತಬ್ಧಚಿತ್ರ ಆಯ್ಕೆ ಉಪಸಮಿತಿ, ಪೂರ್ಣಕುಂಭ ಉಪಸಮಿತಿ, ದೈಹಿಕ ಶಿಕ್ಷಣ ಶಿಕ್ಷರ ಉಪಸಮಿತಿ, ಶಾಲೆ-ಕಾಲೇಜು ವಿದ್ಯಾರ್ಥಿಗಳನ್ನು ಕರೆತರುವ ಉಪಸಮಿತಿ ಸೇರಿದಂತೆ ಐದು ಉಪಸಮಿತಿಗಳ ರಚನೆಗೆ ತೀರ್ಮಾನಿಸಲಾಯಿತು.

ಸಮ್ಮೇಳನದ ಸಮನ್ವಯ ಸಮಿತಿ ಅಧ್ಯಕ್ಷ ಮೀರಾ ಶಿವಲಿಂಗಯ್ಯ, ಕಾರಸವಾಡಿ ಮಹದೇವು, ಸಮಿತಿಯ ಸದಸ್ಯ ಕಾರ್ಯದರ್ಶಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನಂದೀಶ್, ಜಯ ಕರ್ನಾಟಕ ಸಂಘಟನೆಯ ಪರಿಷತ್ತಿನ ನಾರಾಯಣ್, ಕನ್ನಡ ಸೇನೆ ಮಂಜುನಾಥ್, ಜಿಲ್ಲಾ ಕಸಾಪದ ಹುಸ್ಕೂರು ಕೃಷ್ಣೇಗೌಡ, ಹರ್ಷ, ಅಪ್ಪಾಜಪ್ಪ ಹಾಗೂ ಕೀಲಾರ ಕೃಷ್ಣೇಗೌಡ, ಯೋಗಣ್ಣ, ನಾಗಮ್ಮ, ಕುಬೇರಪ್ಪ ಸೇರಿದಂತೆ ಹಲವರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X