ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಮತ್ತು ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ. ಅರ್ಜಿದಾರರ ಪರ ವಕೀಲ ಕೋರಿಕೆಯಂತೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ವಿಚಾರಣೆಯನ್ನು ಮುಂದೂಡಿದ್ದಾರೆ.
ಎಸ್‌ಐಟಿ ಪರವಾಗಿ ಹಾಜರಾದ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್ ಅವರು ಸಂತ್ರಸ್ತರ ಖಾಸಗಿತನ ರಕ್ಷಿಸುವ ಉದ್ದೇಶದಿಂದ ಪ್ರಜ್ವಲ್ ಜಾಮೀನು ಅರ್ಜಿಗಳ ವಿಚಾರಣೆಯನ್ನು ಗೌಪ್ಯ ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದಾರೆ.
ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಮೂರು ಪ್ರಕರಣಗಳನ್ನು ಎಸ್‌ಐಟಿ ತನಿಖೆ ನಡೆಸುತ್ತಿದೆ.
ಇದನ್ನು ಓದಿದ್ದೀರಾ? ಪ್ರಜ್ವಲ್ ರೇವಣ್ಣ ‘ಸಾಮೂಹಿಕ ಅತ್ಯಾಚಾರಿ’ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧ ಪಿಐಎಲ್
ಮೇ 30ರಂದು ಬೆಳ್ಳಂಬೆಳಗ್ಗೆ ಜರ್ಮನಿಯಿಂದ ಆಗಮಿಸಿದ ಪ್ರಜ್ವಲ್‌ನನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎಸ್‌ಐಟಿ ಬಂಧಿಸಿತ್ತು.
ಏಪ್ರಿಲ್ 26ರಂದು ಲೋಕಸಭೆ ಚುನಾವಣೆಗೆ ಮುನ್ನ, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವನ್ನು ಮಾಡುವ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ವಿಡಿಯೋ ವೈರಲ್ ಆಗಿದ್ದವು. ಮತ ಚಲಾಯಿಸಿದ ಬಳಿಕ ಪ್ರಜ್ವಲ್ ರೇವಣ್ಣ ಭಾರತದಿಂದ ಪರಾರಿಯಾಗಿದ್ದರು.
Special Public Prosecutor Ravivarma Kumar prays that matters be heard in-camera to avoid disclosing name of prosecutrix.
— Live Law (@LiveLawIndia) August 29, 2024
HC: Orders have to be passed by the Chief Justice.
Hearing over.
