ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ತನಿಖೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಆಗಸ್ಟ್ 31ಕ್ಕೆ ಮುಂದೂಡಿದೆ. ಮಧ್ಯಂತರ ಆದೇಶವನ್ನು ಮುಂದುವರೆಸಿದ್ದು, ವಿಚಾರಣೆ ಮುಂದೂಡುವಂತೆ ಜನಪ್ರತಿನಿಧಿಗಳ ಕೋರ್ಟ್‌ಗೂ ಆದೇಶಿಸಿದೆ.
ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನೀಡಿರುವ ಅನುಮತಿಯನ್ನು ರದ್ದುಪಡಿಸಬೇಕು ಎಂದು ಮನವಿ ಮಾಡಿ ಸಿಎಂ ಪರ ವಕೀಲ ಸಿಂಘ್ವಿ ವಾದ ಮಂಡಿಸಿದ್ದಾರೆ. ರಾಜ್ಯಪಾಲರು ಅನುಮತಿ ನೀಡಿರುವ ಕ್ರಮ ಸರಿಯಾಗಿಲ್ಲ ಎಂದು ವಾದಿಸಿರುವ ಸಿಂಘ್ವಿ ಇದು ಮುಡಾ ಹಗರಣವೇ ಅಲ್ಲ. ಸಾಮಾನ್ಯವಾಗಿ ನಡೆದಿರುವ ಪ್ರಕ್ರಿಯೆ ಎಂದು ಹೇಳಿದ್ದಾರೆ.
ಇದನ್ನು ಓದಿದ್ದೀರಾ? ರಾಯಚೂರು | ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕೂಷನ್ ಅನುಮತಿ ಹಿಂಪಡೆಗೆ ಆಗ್ರಹ
ಸಿದ್ದರಾಮಯ್ಯ ಅವರ ರಿಟ್ ಅರ್ಜಿಗೆ ರಾಜ್ಯಪಾಲರು ಮತ್ತು ದೂರುದಾರ ಪ್ರದೀಪ್ ಇಬ್ಬರು ಪ್ರತಿವಾದಿಗಳು ಆಕ್ಷೇಪಣೆಯನ್ನು ಸಲ್ಲಿಸಿಲ್ಲ.
ಇನ್ನು ಪೊಲೀಸ್ ಅಧಿಕಾರಿ ಅನುಮತಿಯಿಲ್ಲದೆ ತನಿಖೆ ಮಾಡುವಂತಿಲ್ಲ. ಪಿಸಿ ಕಾಯ್ದೆ 17ಎ ಅಡಿ ಪೂರ್ವಾನುಮತಿ ಬೇಕು. 17ಎ ಪಾಲನೆಯಾಗದಿದ್ದರೂ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಈ ಎರಡೂ ಅಂಶಗಳನ್ನು ರಾಜ್ಯಪಾಲರು ಪಾಲಿಸಿಲ್ಲ ಎಂದು ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಹೇಳಿದ್ದಾರೆ.
Matter to be further heard on Saturday Aug 31.
— Live Law (@LiveLawIndia) August 29, 2024
Hearing over. #mudacase
