ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗಾಗಿ ಸಿಬಿಐಗೆ ಈ ಹಿಂದಿನ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿದೆ.
ಕಾಂಗ್ರೆಸ್ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ವಜಾ ಮಾಡಿದೆ. ಆ ಮೂಲಕ ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಲಭಿಸಿದೆ.
ಇದನ್ನು ಓದಿದ್ದೀರಾ? ಆ.31ರಂದು ರಾಜಭವನ ಚಲೋ : ಡಿಸಿಎಂ ಡಿ ಕೆ ಶಿವಕುಮಾರ್
ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್ ಮತ್ತು ಉಮೇಶ್ ಎಂ. ಅಡಿಗ ಅವರ ನೇತೃತ್ವದ ವಿಭಾಗೀಯ ಪೀಠವು ಈ ಆದೇಶ ನೀಡಿದೆ.
ಬಿ ಎಸ್ ಯಡಿಯೂರಪ್ಪ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರವು ಡಿ ಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಆದೇಶ ನೀಡಿತ್ತು. ಈ ಆದೇಶವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಹಿಂಪಡೆದಿತ್ತು.
ಇದರ ವಿರುದ್ಧ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಅರ್ಜಿಗಳನ್ನು ಪರಿಗಣಿಸದ ಹೈಕೋರ್ಟ್, ವಜಾ ಮಾಡಿದೆ.
ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ಯತ್ನಾಳ್
ಡಿ ಕೆ ಶಿವಕುಮಾರ್ ವಿರುದ್ಧ ತಾನು ಸಲ್ಲಿಸಿದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸುತ್ತಿದ್ದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾಗಿದ್ದಾರೆ. “ಘನ ನ್ಯಾಯಾಲಯದ ತೀರ್ಪನ್ನು ಗೌರವಿಸುತ್ತಾ, ಸರ್ವೋಚ್ಚ ನ್ಯಾಯಾಲಯದಲ್ಲಿ ನಾವು ಇದನ್ನು ಪ್ರಶ್ನಿಸುತ್ತೇವೆ. ಭ್ರಷ್ಟಾಚಾರದ ವಿರುದ್ಧ ನಮ್ಮ ಸಮರ ಇಲ್ಲಿಗೆ ನಿಲ್ಲುವುದಿಲ್ಲ. ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ನಾವು ಕೊಂಡೊಯ್ಯುತ್ತೇವೆ” ಎಂದು ಹೇಳಿದ್ದಾರೆ.
The Honorable High Court of Karnataka has dismissed the petitions filed by me and the CBI challenging the government's withdrawal of the order in the Disproportionate Assets case. I respect the court's decision and will continue to pursue the matter in the Supreme Court. This…
— Basanagouda R Patil (Yatnal) (@BasanagoudaBJP) August 29, 2024
ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಅರ್ಜಿಗಳನ್ನು ವಜಾ ಮಾಡಿದ ಕರ್ನಾಟಕ ಹೈಕೋರ್ಟ್. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಿರಾಳ. @DKShivakumar #KarnatakaHighCourt
— ಬಾರ್ & ಬೆಂಚ್ – Kannada Bar & Bench (@Kbarandbench) August 29, 2024
