ಜಿಲ್ಲೆಯ ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿನ ದುಬಾರಿ ಶುಲ್ಕ ನಿಯಂತ್ರಿಸಲು ಸೂಕ್ತ ಕ್ರಮ ಜರುಗಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಜಿಲ್ಲಾ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಭಾಲ್ಕಿ ಪಟ್ಟಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ ಸಿಂಗ್ ಅವರನ್ನು ನಮ್ಮ ಕರ್ನಾಟಕ ಸೇನೆಯ ಜಿಲ್ಲಾಧ್ಯಕ್ಷ ಗಣೇಶ ಪಾಟೀಲ್ ನೇತೃತ್ವದಲ್ಲಿ ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.
ʼಖಾಸಗಿ ಶಾಲೆಗಳಲ್ಲಿ ಪ್ರವೇಶ ಶುಲ್ಕದ ಹೆಸರಿನಲ್ಲಿ ಪೋಷಕರಿಂದ ಬೇಕಾಬಿಟ್ಟಿ ಹಣ ವಸೂಲಿ ಮಾಡಲಾಗುತ್ತಿದೆ. ಇದನ್ನು ನಿಯಂತ್ರಿಸಲು ನಿಯಮನುಸಾರ ಶಾಲಾ ಪ್ರವೇಶ ಪ್ರಾರಂಭದಲ್ಲೇ ಶುಲ್ಕ ನಿಗದಿಪಡಿಸಿ ಸೂಚನಾ ಫಲಕದಲ್ಲಿ ಪ್ರದರ್ಶಿಸಲು ಸೂಚಿಸಬೇಕು. ವಿವಿಧೆಡೆ ಟಿನ್‌ಶೆಡ್‌ಗಳಲ್ಲಿ ನಿಯಮ ಬಾಹಿರವಾಗಿ ಶಾಲಾ ತರಗತಿಗಳನ್ನು ನಡೆಯುತ್ತಿದ್ದು ಪರಿಶೀಲಿಸಿ ಅಂತಹ ಶಾಲೆಗಳ ಮಾನ್ಯತೆ ರದ್ದುಪಡಿಸಬೇಕುʼ ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಉದ್ಘಾಟನೆಯಾಗಿ ವರ್ಷ ಕಳೆದರೂ ಉಪಯೋಗಕ್ಕಿಲ್ಲದ ʼಬಸ್ ನಿಲ್ದಾಣʼ
ಈ ಸಂದರ್ಭದಲ್ಲಿ ಪ್ರಮುಖರಾದ ಸುದೀಪ ತೂಗಾವೇ, ಬಸವರಾಜ ಕಾರಬಾರಿ, ಬಾಲಾಜಿ ಮೇಘೆ, ರಾಜರತನ ಗಡಿಪಾಟೀಲ್ ಸೇರಿದಂತೆ ಹಲವರು ಇದ್ದರು.