ಮಂಗಳೂರು ವಿಶ್ವವಿದ್ಯಾನಿಲಯ: ‘ಮಾಮ್ ಇನ್‌ಸ್ಪೈರ್’ ಪ್ರಶಸ್ತಿಗೆ ಅರ್ಜಿ ಆಹ್ವಾನ

Date:

Advertisements

ಮಂಗಳೂರು ವಿಶ್ವವಿದ್ಯಾನಿಲಯ ಪತ್ರಿಕೋದ್ಯಮ ವಿಭಾಗದ ಹಳೆ ವಿದ್ಯಾರ್ಥಿಗಳ ಸಂಘಟನೆ ಮೀಡಿಯಾ ಅಲೂಮ್ನಿ ಅಸೋಸಿಯೇಷನ್‌ ಆಫ್‌ ಮಂಗಳಗಂಗೋತ್ರಿ (ಮಾಮ್) ವತಿಯಿಂದ ನೀಡಲಾಗುವ 2023-24ನೇ ಸಾಲಿನ ‘ಮಾಮ್ ಇನ್‌ಸ್ಪೈರ್’ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಮಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳ ಯಾವುದೇ ಪದವಿ ವಿಭಾಗ ಹಾಗೂ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿಯ ಸಾಧಕ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪ್ರಶಸ್ತಿ ನೀಡಲಾಗುತ್ತದೆ. ವಿಜೇತರಿಗೆ 5 ಸಾವಿರ ನಗದು ಮತ್ತು ಪ್ರಶಸ್ತಿ ಫಲಕ ನೀಡಲಾಗುವುದು.

2023-24ರಲ್ಲಿ ಯಾವುದೇ ಪದವಿಯ ಅಧ್ಯಯನ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳು ಹಾಗೂ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಅಧ್ಯಯನ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

Advertisements

ಪದವಿ ವಿದ್ಯಾರ್ಥಿಗಳಿಗೆ:

2023ರ ಜೂನ್‌ನಿಂದ 2024ರ ಮೇ ಅಂತ್ಯದ ಒಳಗೆ ಕನಿಷ್ಠ 8 ಲೇಖನಗಳು ರಾಜ್ಯಮಟ್ಟದ ಪತ್ರಿಕೆಗಳಲ್ಲಿ ಪ್ರಕಟವಾಗಿರಬೇಕು.
ರೇಡಿಯೋ, ಟಿವಿ ಕಾರ್ಯಕ್ರಮಗಳು ಪ್ರಸಾರವಾಗಿರಬೇಕು. ಮಾಧ್ಯಮ ಕ್ಷೇತ್ರದ ಬಗ್ಗೆ ಆಸಕ್ತರಾಗಿರಬೇಕು.
ಶೈಕ್ಷ ಣಿಕ ವಿಷಯಗಳಲ್ಲಿ ಶೇ.60ರಷ್ಟು ಅಂಕ ಗಳಿಸಿರಬೇಕು. ಬ್ಲಾಗ್‌ಬರಹ, ಮಾಧ್ಯಮ ಚರ್ಚೆಗಳಲ್ಲಿ ಭಾಗವಹಿಸಿರಬೇಕು. ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಕ್ರಿಯರಾಗಿರಬೇಕು.

ಪತ್ರಿಕೋದ್ಯಮ ಸ್ನಾತಕೋತ್ತರ ವಿಭಾಗ:

ಸ್ನಾತಕೋತ್ತರ ವಿಭಾಗದ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಪದವಿ ವಿದ್ಯಾರ್ಥಿಗಳಿಗಿರುವ ಮಾನದಂಡಗಳು ಇಲ್ಲಿಯೂ ಅನ್ವಯಿಸುತ್ತವೆ. ಕನಿಷ್ಠ 12 ಲೇಖನ/ ನುಡಿಚಿತ್ರಗಳು ರಾಜ್ಯಮಟ್ಟದ ಪತ್ರಿಕೆಗಳಲ್ಲಿ ಪ್ರಕಟವಾಗಿರಬೇಕು. ಶೇ.55ರಷ್ಟು ಅಂಕ ಗಳಿಸಿರಬೇಕು. ಛಾಯಾಗ್ರಹಣ, ಸಾಕ್ಷ್ಯಚಿತ್ರ ನಿರ್ಮಾಣ, ಡಿಜಿಟಲ್/ ನವ ಮಾಧ್ಯಮ/ ಸಿನಿಮಾ/ ಒಟಿಟಿ ಕಂಟೆಂಟ್, ಸಾರ್ವಜನಿಕ ಸಂಪರ್ಕ ಕ್ಷೇತ್ರದಲ್ಲಿ ಸಕ್ರಿಯರಾಗಿರುವುದು. ಸಾರ್ವಜನಿಕ ಸಂಪರ್ಕ ಮತ್ತು ಪರಿಣಾಮಕಾರಿ ಕಾರ್ಯತಂತ್ರ, ಅತ್ಯುತ್ತಮ ಜಾಹೀರಾತು ವಿನ್ಯಾಸ, ಹೊಸ ಪರಿಕಲ್ಪನೆಗಳು ಮುಖ್ಯವಾಹಿನಿ ಮಾಧ್ಯಮಗಳಲ್ಲಿ ಪ್ರಕಟವಾಗಿರುವುದು, ಸಂಶೋಧನಾ ಲೇಖನಗಳನ್ನು ಪ್ರಕಟಿಸಿರುವುದು, ಅಧ್ಯಯನ ವರದಿಗಳು (ಶೈಕ್ಷಣಿಕ ವರ್ಷದ ಪ್ರೌಢ ಪ್ರಬಂಧ ಹೊರತುಪಡಿಸಿ) ಪ್ರಕಟವಾಗಿರಬೇಕು.

ಇದನ್ನು ಓದಿದ್ದೀರಾ? ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ | ಸಿಬಿಐ, ಯತ್ನಾಳ್ ಅರ್ಜಿ ವಜಾ; ಡಿಕೆಶಿಗೆ ರಿಲೀಫ್

ಎಲ್ಲ ಸಾಧನೆಗಳ ದಾಖಲೆಗಳನ್ನು ತಮ್ಮ ಸಂಸ್ಥೆಯ ಮುಖ್ಯಸ್ಥರಿಂದ ದೃಢೀಕರಿಸಿ, ಸ್ವವಿರವುಳ್ಳ ಪತ್ರದ ಸಹಿತ 2024ರ ಅಕ್ಟೋಬರ್ 12ರ ಒಳಗೆ ಕಳುಹಿಸಬೇಕು. ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ, ಡಿಜಿಟಲ್‌ ರೂಪದಲ್ಲಿ ಒಂದೇ ಪಿಡಿಎಫ್ ಫೈಲ್‌ನಲ್ಲಿ ಹಾಕಿ ಇ-ಮೇಲ್‌ವಿಳಾಸ :reachtomaam@gmail.comಗೆ ಮೂಲಕ ಕಳುಹಿಸಬೇಕು.

ಮಾಹಿತಿಗೆ ಸಂಘಟನೆಯ ಅಧ್ಯಕ್ಷ ನವೀನ್ ಅಮ್ಮೆಂಬಳ-9449588440, ಸಂಚಾಲಕ ಕೃಷ್ಣಮೋಹನ ತಲೆಂಗಳ- 9481976969, ಅಥವಾ ಶರತ್ ಹೆಗ್ಡೆ ಕಡ್ತಲ- 9964677010 ಇವರನ್ನು ಸಂಪರ್ಕಿಸಬಹುದು ಎಂದು ಮಾಮ್ ಪ್ರಕಟಣೆ ತಿಳಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X