ರಾಜ್ಯದ ವಿವಿಧೆಡೆ ಶುಕ್ರವಾರ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸದಾ ಜಾತಿಯ ಕುರಿತೇ ಚರ್ಚಿಸುವುದರಲ್ಲಿ ಒಂದು ಅಪಾಯವಿದೆ | thangalaan
ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಕರಾವಳಿ ಉದ್ದಕ್ಕೂ 35ರಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಎಚ್ಚರ ವಹಿಸಬೇಕು ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ನಿರಂತರ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. ಶನಿವಾರವೂ ಕರಾವಳಿ ಸೇರಿ ರಾಜ್ಯ ವಿವಿಧೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ತಲಾ ಐದು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.
