ಗದಗ | ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Date:

Advertisements

ರಾಷ್ಟ್ರ ವಿರೋಧಿ ಹೇಳಿಕೆ ನೀಡಿರುವ ಶಾಸಕ ಜಿ ಎಸ್ ಪಾಟೀಲ ಅವರ ವಿರುದ್ದ ಪ್ರಕರಣ ದಾಖಲಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿ ಗದಗ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಕುರಡಗಿ ಅವರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

“ಸಾಂವಿಧಾನಿಕ ಸಂಸ್ಥೆ ಮತ್ತು ವ್ಯಕ್ತಿಗಳ ವಿರುದ್ಧ ಅಪಪ್ರಚಾರ ಹಾಗೂ ಕಾನೂನು ಸುವ್ಯವಸ್ಥೆ ವಿಫಲಗೊಳಿಸುವ ಮೂಲಕ ರಾಜ್ಯದಲ್ಲಿ ಆಡಳಿತ ನಡೆಸುವಲ್ಲಿ ಕಾಂಗ್ರೆಸ್‌ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿರುವ ಮುಡಾ ಹಗರಣದ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ ಬಳಿಕ ರಾಜ್ಯಾದ್ಯಂತ ಕಾಂಗ್ರೆಸ್‌ ನಾಯಕರು ಪ್ರತಿಭಟನೆ ನೆಪದಲ್ಲಿ ಪ್ರಧಾನಿ, ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹಾಗೂ ಪ್ರಚೋದನಾಕಾರಿ ಮಾತುಗಳ ಮೂಲಕ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿದ್ದಾರೆ” ಎಂದು ಹರಿಹಾಯ್ದರು.

“ಅನುಮತಿ ನೀಡಿರುವುದನ್ನು ವಿರೋಧಿಸಿ ಇತ್ತೀಚೆಗೆ ಗಜೇಂದ್ರಗಡದಲ್ಲಿ ಅಹಿಂದ್‌ ಸಮುದಾಯಗಳು ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ರೋಣ ಶಾಸಕ ಜಿ ಎಸ್ ಪಾಟೀಲ ಅವರು, ‘ಸಿದ್ದರಾಮಯ್ಯ ಅವರ ಅಧಿಕಾರ ಮೊಟಕುಗೊಳಿಸಲು ಮುಂದಾದರೆ ಬಾಂಗ್ಲಾ ದೇಶದಲ್ಲಿ ಪ್ರಧಾನಿ ಮನೆಗೆ ನುಗ್ಗಿದಂತೆ ನಮ್ಮಲ್ಲೂ ಜನರು ಪ್ರಧಾನಿ ಮೋದಿ ಅವರ ಮನೆಗೆ ನುಗ್ಗುವ ದಿನಗಳು ದೂರವಿಲ್ಲ’ವೆಂದು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ. ಇದು ಅಕ್ಷಮ್ಯ” ಎಂದು ಹರಿಹಾಯ್ದರು.

Advertisements

“ಜಿ ಎಸ್ ಪಾಟೀಲರು ಪ್ರಚೋದನಾತ್ಮಕ ಹೇಳಿಕೆ ನೀಡಿರುವುದನ್ನು ಗಮನಿಸಿದರೆ ಸರ್ಕಾರವೇ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ ಮಾಡಲು ಬಯಸಿದೆ ಎಂಬುದು ಸಹಜವಾಗಿ ಕಂಡು ಬರುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.

“ರಾಷ್ಟ್ರ ವಿರೋಧಿ ಹೇಳಿಕೆ ನೀಡಿರುವ ಜಿ ಎಸ್ ಪಾಟೀಲ ಅವರ ವಿರುದ್ದ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಬೇಕು. ರಾಜ್ಯ ಸರ್ಕಾರವನ್ನು ವಜಾಗೊಳಿಸಿ ರಾಜ್ಯದಲ್ಲಿ ಕೂಡಲೇ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು” ಎಂದು ಮನವಿ ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ಮನವಿ ಸ್ವೀಕರಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ನಮ್ಮ ಗ್ರಾಮಗಳನ್ನು ಕಸ್ತೂರಿರಂಗನ್ ವರದಿಯಿಂದ ಕೈಬಿಡಬೇಕು: ರೈತ, ಕಾರ್ಮಿಕ ಹಿತರಕ್ಷಣಾ ಸಮಿತಿ

ವಿಧಾನ ಪರಿಷತ್‌ ಸದಸ್ಯ ಎಸ್ ವಿ ಸಂಕನೂರ, ಮುಖಂಡ ಜಗನ್ನಾಥಸಾ ಭಾಂಡಗೆ, ಎಂ ಎಸ್ ಕರಿಗೌಡ್ರು, ರವಿ ದಂಡಿನ, ನಗರಸಭೆ ಸದಸ್ಯರಾದ ಪ್ರಕಾಶ ಅಂಗಡಿ, ಮುತ್ತು ಮುಶಿಗೇರಿ, ಮಹಾಂತೇಶ ನಲವಡಿ, ಮಾಧೂಸಾ ಮೇರವಾಡೆ, ಅನಿಲ ಅಬ್ಬಿಗೇರಿ, ಗದಗ ಶಹರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವಿಜಯಲಕ್ಷ್ಮಿ ಮಾನ್ವಿ ಸೇರಿದಂತೆ ಪಕ್ಷದ ಪ್ರಮುಖರು, ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X