ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಕೋರಿ ಸೌಜನ್ಯ ತಂದೆ, ಧರ್ಮಸ್ಥಳದ ನಿವಾಸಿ ಚಂದಪ್ಪ ಗೌಡ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ವಜಾ ಮಾಡಿದೆ.
ಜೊತೆಗೆ ಸಿಬಿಐ ವಿಶೇಷ ಮಕ್ಕಳ ನ್ಯಾಯಾಲಯದ ಆದೇಶ ಬದಿಗೆ ಸರಿಸುವಂತೆ ಕೋರಿ ಸಿಬಿಐ ಸಲ್ಲಿಸಿರುವ ಅರ್ಜಿಯನ್ನು ಕೂಡಾ ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ಜೆ ಎಂ ಖಾಜಿ ಅವರ ವಿಭಾಗೀಯ ಪೀಠ ಈ ಆದೇಶವನ್ನು ನೀಡಿದೆ.
ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿ ಕೇಂದ್ರೀಯ ತನಿಖಾ ದಳದ (ಸಿಬಿಐ) ವಿಶೇಷ ಮಕ್ಕಳ ನ್ಯಾಯಾಲಯ ನೀಡಿದ್ದ ತೀರ್ಪು ಪ್ರಶ್ನಿಸಿ ಸಿಬಿಐ ಅರ್ಜಿ ಸಲ್ಲಿಸಿದ್ದು, ಐಪಿಸಿ ಸೆಕ್ಷನ್ 302 (ಕೊಲೆ) ಮತ್ತು 376 (ಅತ್ಯಾಚಾರ) ಆರೋಪದ ಅಡಿ ಸಂತೋಷ್ ರಾವ್ ಅವರನ್ನು ದೋಷಿ ಎಂದು ಆದೇಶಿಸಬೇಕು ಎಂದು ಕೋರಿತ್ತು.
ಇನ್ನು, ವಿಚಾರಣಾಧೀನ ನ್ಯಾಯಾಲಯದಲ್ಲಿ ಖುಲಾಸೆಗೊಂಡಿರುವ ಸಂತೋಷ್ ರಾವ್ ಅವರು ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ನಡೆಸುವ ಮೂಲಕ ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ಚೆನ್ನೈನ ಸಿಬಿಐಗೆ ನಿರ್ದೇಶಿಸಬೇಕು ಎಂದು ಅರ್ಜಿ ಸಲ್ಲಿಸಿದ್ದರು.
ಮತ್ತೊಂದೆಡೆ ಸೌಜನ್ಯ ತಂದೆ ಚಂದಪ್ಪ ಗೌಡ ಅವರು ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ವಿಶೇಷ ತನಿಖಾ ದಳ ರಚಿಸಲು ಚೆನ್ನೈನ ಸಿಬಿಐಗೆ ನಿರ್ದೇಶಿಸಬೇಕು ಎಂದು ಕೋರಿದ್ದರು.
2012ರ ಅಕ್ಟೋಬರ್ 9ರಂದು ಸೌಜನ್ಯಳನ್ನು ಅಪಹರಿಸಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಬೆಳ್ತಂಗಡಿ ಠಾಣಾ ಪೊಲೀಸರು ಸಂತೋಷ್ ರಾವ್ ಎಂಬಾತನ ಬಂಧನ ಮಾಡಿದ್ದರು. ನಂತರ ಈ ಪ್ರಕರಣ ಸಿಬಿಐಗೆ ವರ್ಗಾಯಿಸಲಾಗಿದ್ದು, ಸಿಬಿಐ ತನಿಖೆ ಪೂರ್ಣಗೊಳಿಸಿ ಸಂತೋಷ್ ರಾವ್ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿತ್ತು. ಆದರೆ ವಿಶೇಷ ನ್ಯಾಯಾಲಯವು ಸೂಕ್ತ ಸಾಕ್ಷ್ಯಧಾರಗಳಿಲ್ಲ ಎಂದು ಸಂತೋಷ್ ರಾವ್ ಅವರನ್ನು 2023ರ ಜೂನ್ 16ರಂದು ಖುಲಾಸೆಗೊಳಿಸಿದೆ.
ಇದನ್ನು ಓದಿದ್ದೀರಾ? ಹುಬ್ಬಳ್ಳಿ | ಸೌಜನ್ಯ ಆರೋಪಿಗಳಿಗೆ ಕ್ರೂರ ಶಿಕ್ಷೆಯಾಗಿದ್ದರೆ, ಇಂದು ನೇಹಾಳಂತ ಹೆಣ್ಣುಮಕ್ಕಳು ಉಳಿಯುತ್ತಿದ್ದರು: ಸಾಧನಾ ಸಂಸ್ಥೆಯ ಸಂಸ್ಥಾಪಕಿ
The Court has also dismissed the two writ petitions filed by the victim's father and the accused himself, seeking a re-investigation in the case.
— Bar and Bench (@barandbench) August 30, 2024
