ಸೆಪ್ಟೆಂಬರ್ 1ರಿಂದ 30ರವರೆಗೆ ನೈತಿಕತೆಯೇ ಸ್ವಾತಂತ್ರ್ಯ ಎಂಬ ಧ್ಯೇಯವಾಕ್ಯದಡಿ ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ಮಹಿಳಾ ಘಟಕದ ವತಿಯಿಂದ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ಅಭಿಯಾನದ ಸಂಚಾಲಕಿ ತಶ್ಕೀಲಾ ಖಾನಂ ಅವರು ಹೇಳಿದರು.
ರಾಯಚೂರು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪ್ರಸಕ್ತ ಕಾಲದಲ್ಲಿ ನಮ್ಮ ಸಮಾಜವು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸವಾಲುಗಳು ಬಹಳ ಕಳವಳಕಾರಿಯಾಗಿದೆ. ಜೊತೆಗೆ ಹೆಚ್ಚುತ್ತಿರುವ ನಗ್ನತೆ, ಜೂಜು, ಮದ್ಯಪಾನ, ಮಾದಕ ವ್ಯಸನ, ಲಿವಿಂಗ್ ರಿಲೇಶನ್ಶಿಪ್, ಸಲಿಂಗಕಾಮ ಹಾಗೂ ವೇಶ್ಯಾವಾಟಿಕೆಗಳಂತಹ ಕೆಡುಕುಗಳು ಸಮಾಜದ ಹದಗೆಡುತ್ತಿರುವ ನೈತಿಕ ಮಟ್ಟಕ್ಕೆ ಕೈಗನ್ನಡಿಯಾಗಿದೆ. ಇನ್ನೊಂದೆಡೆ ನೈತಿಕ ಸಾಮಾಜಿಕ ಮತ್ತು ಜೈವಿಕಮಟ್ಟದಲ್ಲಿ ಅಸಂಖ್ಯ ಸಮಸ್ಯೆಗಳನ್ನು ಹುಟ್ಟು ಹಾಕಿವೆ ಎಂದು ತಿಳಿಸಿಸಿದರು.
ಇಂತಹ ಪರಿಸ್ಥಿತಿಯನ್ನು ಗಮನದಲ್ಲಿರಿಸಿ ಸಮಾಜದಲ್ಲಿ ಜಾಗೃತಿ ಮೂಡಿಸಲಿಕ್ಕಾಗಿ ಮತ್ತು ಪ್ರಸಕ್ತ ಸ್ಥಿತಿಯಲ್ಲಿ ಸುಧಾರಣೆ ತರಲಿಕ್ಕಾಗಿ ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗವು ‘ನೈತಿಕತೆಯೇ ಸ್ವಾತಂತ್ರ್ಯ’ ಎಂಬ ಧ್ಯೇಯ ವಾಕ್ಯದಡಿ ರಾಜ್ಯಾದ್ಯಂತ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಇದನ್ನು ಓದಿದ್ದೀರಾ? ರಾಯಚೂರು | ನದಾಫ್, ಪಿಂಜಾರ ಸಮುದಾಯದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪಿಸಲು ಒತ್ತಾಯ
ಈ ಸಂದರ್ಭದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿಯಾದ ತಸ್ನೀಮ್ ಫರ್ಝಾನ, ಬೆಂಗಳೂರು ನಗರದ ಸಂಚಾಲಕಿ ಸಾಲಿಹಾ ನೂರೈನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
