ದೇವಸ್ಥಾನಕ್ಕೆ ಲೈಟಿಂಗ್ ಅಳವಡಿಸುವ ವೇಳೆ ಶಾರ್ಟ್ ಸರ್ಕ್ಯೂಟ್ ಆಗಿ ಯುವಕ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ನಡೆದಿದೆ.
ಕನಕ (28) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಸಂಗಾಪುರ ಗ್ರಾಮದ ತಾಯಮ್ಮ ದೇವಸ್ಥಾನದ ಕಾರ್ಯಕ್ರಮದ ನಿಮಿತ್ತ ಲೈಟಿಂಗ್ ಅಳವಡಿಸಲು ಮುಂದಾದಾಗ ಶಾರ್ಟ್ ಸರ್ಕ್ಯೂಟ್ ಆಗಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಇದನ್ನು ಓದಿದ್ದೀರಾ? ರಾಯಚೂರು | ವಿಶೇಷ ಚೇತನರಿಗೆ ನಿವೇಶನ ನೀಡಲು ಆಗ್ರಹಿಸಿ ಪ್ರತಿಭಟನೆ
“ಶ್ರಾವಣ ಮಾಸದ ಅಂಗವಾಗಿ ವಿಶೇಷ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಲೈಟಿಂಗ್ ಅಳವಡಿಕೆ ನಡೆದಿತ್ತು. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕ ಸಾವನ್ನಪ್ಪಿದ್ದಾನೆ” ಎಂದು ಗ್ರಾಮದ ಮುಖಂಡರೋರ್ವರು ಮಾಹಿತಿ ನೀಡಿದ್ದಾರೆ. ಮಾನ್ವಿ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.
