ಕೋಲಾರ | ನಾಲ್ಕು ತಿಂಗಳಲ್ಲಿ ಮೋದಿ ಸರಕಾರ ಪತನ : ಕೆ‌.ಜೆ.ಚಾರ್ಜ್

Date:

Advertisements

ಬಿಜೆಪಿ ಪಕ್ಷವು ನೂರು ಸುಳ್ಳುಗಳನ್ನು ಹೇಳಿ ಒಂದು ಸತ್ಯ ಮಾಡಲು ಹೊರಟಿದ್ದಾರೆ. ಈಗಾಗಲೇ ಮೋದಿಯವರ ವರ್ಚಸ್ಸು ಮುಗಿದಿದೆ ಇನ್ನೂ ನಾಲ್ಕು ತಿಂಗಳಲ್ಲಿ ಕೇಂದ್ರ ಸರಕಾರವು ಪತನವಾಗಿ ಮೋದಿಯವರು ಅಧಿಕಾರ ಕಳೆದುಕೊಳ್ಳಲಿದ್ದು ದೇಶದಲ್ಲಿ ಮುಂದಿನ 15 ವರ್ಷ ರಾಹುಲ್ ಗಾಂಧಿಗೆ ಒಳ್ಳೆಯ ಕಾಲ ಬರಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಭವಿಷ್ಯ ನುಡಿದರು.

ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ದೇಶದ ಜನತೆ ಬಿಜೆಪಿಗೆ ಬುದ್ದಿ ಕಲಿಸಿದ್ದಾರೆ. ಜನರು ಕಾಂಗ್ರೆಸ್ ಪಕ್ಷದ ಪರವಾಗಿದ್ದಾರೆ ಎಂಬುದನ್ನು ತೋರಿಸಿದ್ದಾರೆ. ಒಳ್ಳೆಯ ಕಾರ್ಯಕ್ರಮಗಳನ್ನು ಕೊಟ್ಟಿದ್ದೇವೆ. ಬಿಜೆಪಿಯಂತೆ ಕೋಮುಭಾವನೆ ಹಾಗೂ ಜಾತಿ ಧರ್ಮಗಳ ಗಲಾಟೆಯ ಮೂಲಕ ರಾಜಕಾರಣ ಮಾಡಿಲ್ಲ. ಅಂತಹ ರಾಜಕಾರಣ ಹೆಚ್ಚು ಕಾಲ ಉಳಿಯುವುದಿಲ್ಲ. ಜನರ ಆಶೀರ್ವಾದವು ಕಾಂಗ್ರೆಸ್ ಪಕ್ಷಕ್ಕೆ ಇದ್ದು ಕಾರ್ಯಕರ್ತರಿಗೂ ಒಳ್ಳೆಯ ಅವಕಾಶ ಸಿಗಲಿದೆ ಎಂದು ಹೇಳಿದರು.

ಸಚಿವ ಕೆ.ಜೆ.ಜಾರ್ಜ್

ಕಾಂಗ್ರೆಸ್ ಪಕ್ಷವು ಸ್ವಾತಂತ್ರ್ಯ ಪೂರ್ವದಿಂದಲೂ ಜಾತಿ, ಧರ್ಮ, ಭಾಷೆಯ ಭೇಧವಿಲ್ಲದ ಪಕ್ಷವಾಗಿದೆ. ಎಲ್ಲಾ ವರ್ಗಗಳ ವಿಶ್ವಾಸದಿಂದ ಬಡವರ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ರೂಪಿಸಲಾಗಿದೆ. ಸುಮಾರು 70 ವರ್ಷಗಳ ಅಧಿಕಾರದ ಅವಧಿಯಲ್ಲಿ ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಕಾಣಿಕೆ ಅಪಾರವಾಗಿದೆ. ಬಿಜೆಪಿಯಂತೆ ನೇರವಾಗಿ ಅಧಿಕಾರಕ್ಕೆ ಬಂದಿಲ್ಲ. ಮುಂದೆ ಸಹ ಕಾಂಗ್ರೆಸ್ ಪಕ್ಷದೊಂದಿಗೆ ಜನರ ವಿಶ್ವಾಸ ಇದ್ದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಸರ್ಕಾರ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದಿದೆ ಎಂದು ಹೇಳಿದರು.

Advertisements

ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳವಾಗಿದ್ದು, ಕಾರ್ಯಕರ್ತರಿಂದ ನಾವೆಲ್ಲರೂ ನಾಯಕರಾಗಿದ್ದೇವೆ. ಪಕ್ಷಕ್ಕಾಗಿ ದುಡಿದವರಿಗೆ ಹಂತಹಂತವಾಗಿ ಅವಕಾಶಗಳು ಸಿಗಲಿವೆ. ಅಧಿಕಾರಕ್ಕಾಗಿ ಪಕ್ಷ ಅಲ್ಲ, ಜನರ ಹಿತಕ್ಕಾಗಿ ಪಕ್ಷವಾಗಬೇಕು. ತಾಳ್ಮೆಯಿಂದ ಇದ್ದರೆ ಖಂಡಿತವಾಗಿಯೂ ಅವಕಾಶಗಳು ಸಿಗಲಿದೆ ಎಂದು ಸಚಿವ ಕೆ.ಜೆ.ಜಾರ್ಜ್‌ ಹೇಳಿದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತರಾಗಿದ್ದರೆ ಒಂದಲ್ಲ ಒಂದು ದಿನ ಅವಕಾಶಗಳು ಸಿಗಲಿದೆ ಎಂಬುದಕ್ಕೆ ಸಚಿವ ಕೆ.ಜೆ ಚಾರ್ಜ್ ಅವರು ಉದಾಹರಣೆ. ಯುವ ಕಾಂಗ್ರೆಸ್, ಬ್ಲಾಕ್ ಮಟ್ಟದಿಂದ ರಾಷ್ಟ್ರೀಯ ಮಟ್ಟದಲ್ಲಿ ಕೆಲಸ ಮಾಡಿದ್ದು, ಅವರಿಗೆ ಅವಕಾಶಗಳು ಬಂದಿವೆ. ದೇಶದಲ್ಲಿ ಇಂದಿರಾಗಾಂಧಿ ಹಾಗೂ ರಾಜೀವ್ ಗಾಂಧಿ ಅವರ ಜನಪರ ಕಾರ್ಯಕ್ರಮಗಳನ್ನು ನೋಡಿ ಸಾಕಷ್ಟು ನಾಯಕರು ಕಾಂಗ್ರೆಸ್ ಪಕ್ಷ ಸೇರಲು ಪ್ರಮುಖ ಕಾರಣವಾಗಿದೆ. ಅಧಿಕಾರವಿರಲಿ ಇಲ್ಲದಿರಲಿ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ ಎಂದರು.

ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, ಕೋಲಾರ ಜಿಲ್ಲೆಯ ವಿದ್ಯುತ್‌ ಸಮಸ್ಯೆಗಳ ಪರಿಹಾರಕ್ಕೆ ಗಮನ ಹರಿಸಲು ಸಚಿವರನ್ನು ಕರೆಸಲಾಗಿದೆ. ಜಿಲ್ಲೆಯಲ್ಲಿ ಹೊಸದಾಗಿ ಪವರ್ ಕೇಂದ್ರಗಳ ಸ್ಥಾಪನೆಗೆ ಒತ್ತು ನೀಡಿ ರೈತರ ಕಷ್ಟಗಳಿಗೆ ಪರಿಹಾರ ಕಂಡುಕೊಳ್ಳಲಾಗುತ್ತದೆ ಎಂದರು.

ಮಾಲೂರು ಶಾಸಕ ಕೆ.ವೈ ನಂಜೇಗೌಡ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ವೇಗವಾಗಿ ನಾಯಕ ಅಂತ ಗುರುತಿಸಿಕೊಂಡು ಅವಕಾಶಗಳಿಗಾಗಿ ಬರುತ್ತಾರೆ. ಪಕ್ಷದ ನಾಯಕನು ಎನಿಸಿಕೊಂಡವರಿಗೆ ಪಕ್ಷದ ಬಗ್ಗೆ ನಿಷ್ಠೆ, ತಾಳ್ಮೆ ಇರಬೇಕು. ಎಲ್ಲರಿಗೂ ಒಳ್ಳೆಯ ದಿನಗಳು ಬರಲಿವೆ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಕ್ಷಿಣ ಭಾರತ ಒಗ್ಗಟ್ಟು ಪ್ರದರ್ಶಿಸಲು ಇದು ಸಕಾಲ? Mekedatu Dam Project | Cauvery Dispute

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ.ಶಿವಕುಮಾರ್, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಕೆ.ವಿ ಗೌತಮ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸಾದ್ ಬಾಬು, ಸೀಸಂದ್ರ ಗೋಪಾಲಗೌಡ, ಪದವೀಧರ ಘಟಕದ ಜಿಲ್ಲಾ ಅಧ್ಯಕ್ಷ ಪಿ.ಎಸ್ ಸುಧೀರ್, ಮುಖಂಡರಾದ ಜಯದೇವ್, ರವಿರಾಮಸ್ವಾಮಿ, ಒಬಿಸಿ ಮಂಜುನಾಥ್, ರತ್ನಮ್ಮ, ಮೈಲಾಂಡಹಳ್ಳಿ ಮುರಳಿ, ಅಶ್ವಥ್ ರೆಡ್ಡಿ, ರಾಮಯ್ಯ, ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X