ಸಾಲದ ಹೊರೆ ತಾಳಲಾರದೆ ನೊಂದು ವಿಷ ಸೇವಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದಲ್ಲಿ ನಡೆದಿದೆ.
ಮಲ್ಲಪ್ಪ ಭೀಮರಾಯ ಕಂಬಳಿ (50) ಆತ್ಮಹತ್ಯೆಗೆ ಶರಣಾದ ರೈತ. ಮಲ್ಲಪ್ಪ ತಮ್ಮ ಕೂಡು ಕುಟುಂಬದ ಎಲ್ಲಾ ಜವಾಬ್ದಾರಿ ನೋಡಿಕೊಳ್ಳುತ್ತಿದ್ದರು. ಕೃಷಿ ಗ್ರಾಮೀಣ ಬ್ಯಾಂಕಿನಲ್ಲಿ ₹2.50 ಲಕ್ಷ, ಕೈಕಡ ₹10 ಲಕ್ಷ ಸಾಲ ಸೇರಿದಂತೆ ಒಟ್ಟು ₹15 ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ.
ಸಾಲಗಾರರ ಕಾಟ ತಾಳಲಾರದೆ ಹೊರವಲಯದ ಜಮೀನಿನಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರಿಗೆ ಇಬ್ಬರು ಹೆಣ್ಣು ಮಕ್ಕಳು, ಓರ್ವ ಗಂಡು ಮಗುವಿದೆ.
ಈ ಕುರಿತು ಯಡ್ರಾಮಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.