ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದು ವರ್ಷದ ಮಗು ಸಾವನ್ನಪ್ಪಿದ್ದ ಘಟನೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಸಂಪ್ರೀತ ಹಿರೇಮಠ (1) ಮೃತಪಟ್ಟ ವರ್ಷದ ಹಸುಗೂಸು. ಮಗುವಿನ ಪೋಷಕರು ಗಜೇಂದ್ರಗಡ ದೇವಸ್ಥಾನ ದರ್ಶನ ಮುಗಿಸಿಕೊಂಡು ವಾಪಸ್ ಟಣಕನಕಲ್ಲ ಗ್ರಾಮಕ್ಕೆ ಬರುವ ವೇಳೆ ಸಂಗನಾಳ ಗ್ರಾಮದ ಬಳಿ ದುರ್ಘಟನೆ ನಡೆದಿದೆ.
ಕಾರಿನಲ್ಲಿದ್ದ ಶಿವಪ್ಪ, ಗಂಗಮ್ಮ , ಪ್ರೀತಿ ಹಿರೇಮಠ ಹಾಗೂ ಇನ್ನೊಂದು ಕಾರಿನಲ್ಲಿದ್ದ ಪ್ರಯಾಣಿಸುತ್ತಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
