ಮಂಡ್ಯ | ‘ಗಗನಚುಕ್ಕಿ’ ಅಭಿವೃದ್ಧಿಪಡಿಸಿ ಶೀಘ್ರದಲ್ಲಿ ಜಲಪಾತೋತ್ಸವ: ಶಾಸಕ ಪಿ ಎಂ ನರೇಂದ್ರಸ್ವಾಮಿ

Date:

Advertisements

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶಿವನಸಮುದ್ರದ ಬಳಿಯ ಗಗನಚುಕ್ಕಿ ಜಲಪಾತ ಪ್ರವಾಸಿ ತಾಣವನ್ನು ಅಭಿವೃದ್ಧಿ ಮಾಡಿ, ಇದೇ ತಿಂಗಳಲ್ಲಿ ಜಲಪಾತೋತ್ಸವ ನಡೆಸಲಾಗುವುದು ಎಂದು ಶಾಸಕ ಪಿ ಎಂ ನರೇಂದ್ರಸ್ವಾಮಿ ತಿಳಿಸಿದ್ದಾರೆ.

ನಗರದ ಬೆಳಕವಾಡಿ ಸಮೀಪದ ಲಕ್ಷದ್ವೀಪ ಹೋಟೆಲ್‌ನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, “ಗಗನಚುಕ್ಕಿ ಜಲಪಾತೋತ್ಸವವು ಎರಡು ದಿನ ನಡೆಯಲಿದೆ. ಈ ಸಂದರ್ಭದಲ್ಲಿ ವೇದಿಕೆ ಕಾರ್ಯಕ್ರಮಗಳು, ಜಾನಪದ ಕಲೆಗಳು, ರಸಮಂಜರಿ, ಹಾಸ್ಯ ಮತ್ತು ಕಾಮಿಡಿ ಕಿಲಾಡಿಗಳು ಸೇರಿದಂತೆ ವಿವಿಧ ಸಾಂಸ್ಕೃತಿಕ ಮತ್ತು ಮನೋರಂಜನಾ ಕಾರ್ಯಕ್ರಮಗಳು ಸಾರ್ವಜನಿಕರಿಗಾಗಿ ಆಯೋಜಿಸಲಾಗುವುದು. ಜಲಪಾತೋತ್ಸವದ ದಿನಾಂಕವನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು” ಎಂದರು.

“ಮಳೆಯಿಂದ ಹಾನಿಗೊಳಗಾದ ರಸ್ತೆ ಗುಂಡಿಗಳನ್ನು ಮುಚ್ಚಿ, ವಾಹನ ಸಂಚಾರಕ್ಕೆ ಅನುಕೂಲವಾಗುವಂತೆ ಏರ್ಪಾಟು ಮಾಡಲಾಗುವುದು. ಪಾರ್ಕಿಂಗ್ ಏರ್ಪಾಡು ಬೆಳಗ್ಗೆ, ಮಧ್ಯಾಹ್ನ ಹಾಗೂ ರಾತ್ರಿ ಊಟ, ನೀರಿನ ವ್ಯವಸ್ಥೆ, ವಿದ್ಯುತ್ ದೀಪಾಲಂಕಾರ, ಲೇಸರ್ ಶೋ ಸೇರಿದಂತೆ ವಿವಿಧ ಸೌಕರ್ಯಗಳನ್ನು ಒದಗಿಸಲಾಗುವುದು” ಎಂದು ತಿಳಿಸಿದರು.

Advertisements

“ವೇದಿಕೆಯಿಂದ ರೊಟ್ಟಿ ಕಟ್ಟೆಯವರೆಗೆ ರಸ್ತೆ ಬದಿಯಲ್ಲಿ ಜಾನಪದ ಸೊಗಡನ್ನು ತೋರುವ ಚಿತ್ರಗಳನ್ನು ಹಾಕಿ, ಪ್ರವಾಸಿಗರನ್ನು ಸ್ವಾಗತಿಸಲು ವಿಶಿಷ್ಟ ಫಲಕಗಳನ್ನು ನಿರ್ಮಿಸಲಾಗುವುದು” ಎಂದು ಶಾಸಕರು ಹೇಳಿದರು.

ಜಿಲ್ಲಾಧಿಕಾರಿ ಡಾ.ಕುಮಾರ್ ಮಾತನಾಡಿ, “ಈ ವರ್ಷ ಚೆನ್ನಾಗಿ ಮಳೆಯಾಗಿರುವುದರಿಂದ ಕನ್ನಂಬಾಡಿ ಜಲಾಶಯ ತುಂಬಿದೆ. ಇದು ಜಲಪಾತೋತ್ಸವ ನಡೆಸಲು ಸರಿಯಾದ ಹೊತ್ತಾಗಿದೆ. ಮಳೆಯ ಪ್ರಮಾಣವನ್ನು ಗಮನದಲ್ಲಿಟ್ಟುಕೊಂಡು, ಹಬ್ಬದ ದಿನಾಂಕವನ್ನು ಶೀಘ್ರದಲ್ಲೇ ನಿಗದಿ ಮಾಡಲಾಗುವುದು” ಎಂದು ತಿಳಿಸಿದರು.

“ಕೆಆರ್‌ಎಸ್‌ ಜಲಾಶಯ ತುಂಬಿದ್ದರೂ ಕೊನೆಯ ಭಾಗಕ್ಕೆ ಇನ್ನೂ ಸರಿಯಾಗಿ ನೀರು ಬಂದಿಲ್ಲ. ಅದರ ಕಡೆಗೆ ಗಮನಕೊಡದ ಚುನಾಯಿತ ಜನಪ್ರತಿನಿಧಿ ಹಾಗೂ ಅಧಿಕಾರಿಗಳು ಜಲಪಾತೋತ್ಸವ ಮಾಡಲು ಹೊರಟಿದ್ದಾರೆ. ಇದು ಏನನ್ನು ಸೂಚಿಸುತ್ತದೆ ಈ ನಡೆ ಸರಿಯಲ್ಲ. ಬೆಳೆಗೆ ನೀರು ಹರಿಸುವ ಬಗ್ಗೆ ಸ್ಪಷ್ಟ ನಿರ್ದೇಶನವಿಲ್ಲ. ಆದರೆ ಜಲಪಾತೋತ್ಸವಕ್ಕೆ ನೀರು ಹರಿಸಲಾಗುತ್ತಿದೆ” ಎಂದು ರೈತರು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ತುಂಗಭದ್ರಾ ಜಲಾಶಯ ಭರ್ತಿಗೆ 1.94 ಅಡಿ ಬಾಕಿ; ನೀರು ಹೊರಬಿಡುವ ಸೂಚನೆ ಕೊಟ್ಟ ಮಂಡಳಿ

ಈ ಸಭೆಯಲ್ಲಿ, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಸಿಇಒ ಶೇಕ್ ತನ್ವೀರ್ ಆಸೀಫ್, ಎಸಿ ಶಿವಮೂರ್ತಿ, ತಹಶೀಲ್ದಾರ್ ಎನ್ ಕೆ ಲೋಕೇಶ್, ತಾ.ಪಂ.ಇಒ ಶ್ರೀನಿವಾಸ್, ಗ್ರಾ.ಪಂ.ಅಧ್ಯಕ್ಷೆ ಮಹದೇವಮ್ಮ ಸೇರಿದಂತೆ ಹಲವು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X