ಕನ್ನಡ ಭಾಷಾಂತರ ಎಡವಿಟ್ಟಿನ ಬೆನ್ನಲ್ಲೇ ಕೆಪಿಎಸ್‌ಸಿ ಮರುಪರೀಕ್ಷೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
384 ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗಾಗಿ ಇತ್ತೀಚೆಗೆ ಕರ್ನಾಟಕ ಲೋಕಸೇವಾ ಆಯೋಗ ಪೂರ್ವಭಾವಿ ಪರೀಕ್ಷೆಯನ್ನು ನಡೆಸಿತ್ತು. ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆಯ ಕನ್ನಡ ಭಾಷಾಂತರವು ವ್ಯಾಪಕ ಟೀಕೆಗೆ ಕಾರಣವಾಗಿತ್ತು. ಈ ಬೆನ್ನಲ್ಲೇ ಸಿಎಂ ಮರು ಪರೀಕ್ಷೆ ನಡೆಸಲು ಸಿಎಂ ಆದೇಶಿಸಿದ್ದಾರೆ.
“ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ” ಎಂದು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಕೆಪಿಎಸ್‌ಸಿ | ಮರುಪರೀಕ್ಷೆಗೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ
“ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದ್ದಾರೆ.
“ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ” ಎಂದು ಹೇಳಿದ್ದಾರೆ.
ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡ ಅನುವಾದ ವಿಚಾರವು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಪರೀಕ್ಷೆ ಬರೆದ ಅಭ್ಯರ್ಥಿಗಳು ಪ್ರಶ್ನೆ ಪತ್ರಿಕೆಯಲ್ಲಿ ಇದ್ದ ತಪ್ಪುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಗೂಗಲ್ ಅನುವಾದ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಮರು ಪರೀಕ್ಷೆಗೆ ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಹಲವು ಸಂಘಟನೆಗಳು ಆಗ್ರಹಿಸಿದ್ದವು.
ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ.
— Siddaramaiah (@siddaramaiah) September 2, 2024
ಕರ್ತವ್ಯ…
