ಸಿದ್ದಾರ್ಥ ಟ್ರಸ್ಟ್​​ಗೆ ಸಿಎ ನಿವೇಶನ | ವಿವರಣೆ ಕೇಳಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲ ಪತ್ರ

Date:

Advertisements

ಪ್ರಭಾವ ಬಳಸಿ ಕೆಐಎಡಿಬಿಯಿಂದ ಸಿದ್ದಾರ್ಥ ಟ್ರಸ್ಟ್​​ಗೆ ಸಿಎ ನಿವೇಶನ ಮಂಜೂರು ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್​ ಖರ್ಗೆ ವಿರುದ್ಧ ಕೇಳಿ ಬಂದಿರುವ ಆರೋಪದ ಬಗ್ಗೆ ಬಗ್ಗೆ ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್​ ಚಂದ್​​​ ಗೆಹಲೋತ್‌ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

“ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು ಟ್ರಸ್ಟಿಗಳಾಗಿರವ ಸಿದ್ಧಾರ್ಥ ವಿಹಾರ ಟ್ರಸ್ಟ್​​ಗೆ ನಿಯಮ ಉಲ್ಲಂಘನೆಯ ಜೊತೆಗೆ ತರಾತುರಿಯಲ್ಲಿ ಕೆಐಎಡಿಬಿಯಿಂದ ಐದು ಎಕರೆ ಸಿಎ ನಿವೇಶನ ಮಂಜೂರು ಮಾಡಲಾಗಿದೆ. ಪ್ರಿಯಾಂಕ್​ ಖರ್ಗೆ ಸಚಿವರಾಗಿದ್ದುಕೊಂಡು ಹೀಗೆ ಸರ್ಕಾರಿ ಸೌಲಭ್ಯ ಪಡೆದಿದ್ದು ಸರಿಯೇ” ಎಂದು ವಿಧಾನ ಪರಿಷತ್​ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯಪಾಲರಿಗೆ ದೂರು ನೀಡಿದ್ದರು.

ರಾಜ್ಯಪಾಲರ ನಡೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕ್‌ ಖರ್ಗೆ, “ರಾಜ್ಯಪಾಲರಿಗೆ ಎರಡು ಸಂವಿಧಾನ ಇದೆ. ಬಿಜೆಪಿ, ಜೆಡಿಎಸ್​ದು ಒಂದು ಸಂವಿಧಾನ, ಕಾಂಗ್ರೆಸ್​​ಗೊಂದು ಸಂವಿಧಾನ. ನಮ್ಮ ವಿಚಾರದಲ್ಲಿ ಬಿಜೆಪಿ ಮೊದಲು 10 ಆರೋಪ ಮಾಡುತ್ತಿತ್ತು. ಎರಡನೇ ದಿನ ಐದು ಆರೋಪಗಳನ್ನು ಮಾಡಿದ್ದರು, ಈಗ ಸುಮ್ಮನಿದ್ದಾರೆ. ಛಲವಾದಿ ನಾರಾಯಣಸ್ವಾಮಿ ಬಿಟ್ಟು ಬೇರೆ ಯಾರೂ ಏಕೆ ಮಾತನಾಡುತ್ತಿಲ್ಲ” ಎಂದರು.

Advertisements

“ಬಿ ವೈ ವಿಜಯೇಂದ್ರ, ಆರ್​.ಅಶೋಕ್ ಅವರು ನನ್ನ ವಿಚಾರದಲ್ಲಿ ಮಾತನಾಡುತ್ತಿಲ್ಲ. ನಾನು ಕೆಳಮನೆ ಸದಸ್ಯ ಅಲ್ವಾ, ಹಾಗಾದರೆ ಏಕೆ ಮಾತನಾಡುತ್ತಿಲ್ಲ. ದಲಿತರ ಜೊತೆ ಬಡಿದಾಡಿಸುವುದು ಕೋಮುವಾದ ಸೃಷ್ಟಿಸುವುದು, ಇದೆಲ್ಲ ಆರ್​​ಎಸ್​​ಎಸ್, ಬಿಜೆಪಿ ಸಂಚು” ಎಂದು ಹರಿಹಾಯ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X