ಪ್ಯಾರಾಲಿಂಪಿಕ್ಸ್ | ಡಿಸ್ಕಸ್ ಥ್ರೋ; ಬೆಳಿ ಗೆದ್ದ ಭಾರತದ ಯೋಗೇಶ್ ಕಥುನಿಯಾ

Date:

Advertisements

ಪ್ಯಾರಿಸ್ 2024 ಪ್ಯಾರಾಲಿಂಪಿಕ್ಸ್‌ನ ಪ್ಯಾರಾ-ಅಥ್ಲೆಟಿಕ್ಸ್ ಪುರುಷರ ಡಿಸ್ಕಸ್ ಎಫ್ 56 ಫೈನಲ್‌ನಲ್ಲಿ ಭಾರತಕ್ಕೆ ಯೋಗೇಶ್ ಕಥುನಿಯಾ ಬೆಳ್ಳಿ ಪದಕ ಗೆದ್ದಿದ್ದಾರೆ.

27 ವರ್ಷ ವಯಸ್ಸಿನ ಯೋಗೇಶ್ 42.22 ಮೀಟರ್ ಎಸೆತದೊಂದಿಗೆ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ. ಇದು ಈ ಸೀಸನ್‌ನಲ್ಲಿ ಅವರ ಅತ್ಯುತ್ತಮ ಪ್ರದರ್ಶನವಾಗಿದೆ.

ಇದನ್ನು ಓದಿದ್ದೀರಾ? ಪ್ಯಾರಾಲಿಂಪಿಕ್ಸ್ | ಹೈಜಂಪ್; ಭಾರತಕ್ಕೆ ಬೆಳ್ಳಿ ಗೆದ್ದುಕೊಟ್ಟ ನಿಶಾದ್ ಕುಮಾರ್

Advertisements

ಬ್ರೆಜಿಲ್‌ನ ಕ್ಲೌಡಿನಿ ಬಟಿಸ್ಟಾ 46.86 ಮೀ ಎಸೆತದೊಂದಿಗೆ ಚಿನ್ನವನ್ನು ಗೆದಿದ್ದಾರೆ.

ಭಾರತಕ್ಕೆ ಎಂಟು ಪದಕ

2024ರ ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ಒಟ್ಟು ಎಂಟು ಪದಕಗಳನ್ನು ಪಡೆದುಕೊಂಡಿದೆ. ಒಂದು ಚಿನ್ನ, ಮೂರು ಬೆಳ್ಳಿ ಮತ್ತು ಮೂರು ಕಂಚು ಭಾರತದ ಪಾಲಾಗಿದೆ.

ಆಗಸ್ಟ್ 30 ರಂದು (ಶುಕ್ರವಾರ), ಹಾಲಿ ಪ್ಯಾರಾಲಿಂಪಿಕ್ ಚಾಂಪಿಯನ್ ಅವನಿ ಲೆಖರಾ ಮಹಿಳೆಯರ 10 ಮೀಟರ್ ಏರ್ ರೈಫಲ್ ಫೈನಲ್‌ನಲ್ಲಿ ಚಿನ್ನ ಗೆದ್ದರು. ಇದೇ ಸ್ಪರ್ಧೆಯಲ್ಲಿ ಶೂಟರ್ ಮೋನಾ ಅಗರ್ವಾಲ್ ಕಂಚಿನ ಪದಕವನ್ನು ಪಡೆದರು.

ಆಗಸ್ಟ್ 30 ರಂದು ನಡೆದ ಪುರುಷರ ಪಿ1 10 ಮೀ ಏರ್ ಪಿಸ್ತೂಲ್ ಎಸ್‌ಎಚ್ 1 ಸ್ಪರ್ಧೆಯಲ್ಲಿ ಮನೀಷ್ ನರ್ವಾಲ್ ಎರಡನೇ ಸ್ಥಾನ ಪಡೆದು ಭಾರತಕ್ಕೆ ಮೊದಲ ಬೆಳ್ಳಿ ಪದಕ ತಂದುಕೊಟ್ಟರು.

100ಮೀ ಮತ್ತು 200ಮೀ ಟಿ35 ವಿಭಾಗಗಳಲ್ಲಿ ಪ್ರೀತಿ ಪಾಲ್ ಎರಡು ಕಂಚಿನ ಪದಕಗಳನ್ನು ಗೆದಿದ್ದಾರೆ. ಆಗಸ್ಟ್ 31ರಂದು, ರುಬಿನಾ ಫ್ರಾನ್ಸಿಸ್ ಪಿ2 ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಎಸ್‌ಎಚ್‌-1 ಫೈನಲ್‌ನಲ್ಲಿ ಕಂಚಿನ ಪದಕವನ್ನು ಗೆದ್ದರು.
ಸೆಪ್ಟೆಂಬರ್ 2ರಂದು ನಡೆದ ಪುರುಷರ ಹೈಜಂಪ್ – ಟಿ47 ವಿಭಾಗದ ಫೈನಲ್‌ನಲ್ಲಿ ಟೀಮ್ ಇಂಡಿಯಾ ಅಥ್ಲೀಟ್ ನಿಶಾದ್ ಕುಮಾರ್ ಬೆಳ್ಳಿ ಪದಕ ಗೆದಿದ್ದಾರೆ. ಅದಾದ ಬಳಿಕ ಯೋಗೇಶ್ ಕಥುನಿಯಾ ಬೆಳ್ಳಿ ಗೆದ್ದಿದ್ದು, ಭಾರತಕ್ಕೆ ಒಟ್ಟು 8 ಪದಕ ಲಭಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್ಸ್: ಮಹಿಳೆಯರ 10ಮೀ ಏರ್ ರೈಫಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆಯುತ್ತಿರುವ 16ನೇ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನ ಮಹಿಳೆಯರ 10...

Download Eedina App Android / iOS

X