ಬಿಎಸ್​ವೈ ಪೋಕ್ಸೋ ಪ್ರಕರಣ | ದೂರುದಾರ ಮಹಿಳೆ ಸಾವಿನ ವರದಿ ನೀಡಲು ಮಹಿಳಾ ಆಯೋಗ ಸೂಚನೆ

Date:

Advertisements

ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಆರೋಪ ಮಾಡಿದ್ದ ಮಹಿಳೆಯ ಸಾವಿನ ಪ್ರಕರಣದ ಕುರಿತು ಪೊಲೀಸ್ ತನಿಖೆಗೆ ರಾಜ್ಯ ಮಹಿಳಾ ಆಯೋಗ ಒತ್ತಾಯಿಸಿದೆ.

ದೂರುದಾರೆ ಸಂತ್ರಸ್ತೆ ತಾಯಿ ಸಾವಿನ ಬಗ್ಗೆ ಅನುಮಾನಮಾನಗಳು ವ್ಯಕ್ತವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಿ, ವರದಿ ನೀಡುವಂತೆ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಬಿ ಎಸ್ ಯಡಿಯೂರಪ್ಪ ಅವರು ಈ ವರ್ಷದ ಫೆಬ್ರವರಿಯಲ್ಲಿ ತಮ್ಮ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಮಹಿಳೆ ಆರೋಪಿಸಿದ್ದರು. ಆದರೆ ದೂರುದಾರ ಮಹಿಳೆಯು ಮೇ ತಿಂಗಳಲ್ಲಿ ಅಸುನೀಗಿದ್ದರು. ಅವರು ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು ಎಂದು ವೈದ್ಯರು ತಿಳಿಸಿದ್ದರು. ಆದರೆ, ಮಹಿಳೆಯ ಶವ ಪರೀಕ್ಷೆ ನಡೆಸದೆಯೇ ಅಂತ್ಯಸಂಸ್ಕಾರ ನಡೆಸಲಾಗಿದೆ ಎಂದು ಮೇ ತಿಂಗಳಲ್ಲಿ ದೂರು ದಾಖಲಾಗಿತ್ತು.

Advertisements

ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, “ಪ್ರಕರಣದ ತನಿಖೆಯ ಮಾಹಿತಿ ನೀಡುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದೇನೆ. ಪತ್ರ ಬರೆದಿದ್ದೇನೆ. ಪ್ರಕರಣದಲ್ಲಿ ಮಾಜಿ ಸಿಎಂ ಆಗಿರಲಿ ಜನ ಸಾಮಾನ್ಯರೇ ಇರಲಿ. ತಪ್ಪು ಮಾಡಿದ್ದರೆ ಬಿಡುವ ಪ್ರಶ್ನೆಯೇ ಇಲ್ಲ” ಎಂದರು.

“ಸಂತ್ರಸ್ತೆಯ ತಾಯಿಯ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಮಹಿಳೆ ಸಾವಿನ ಬಗ್ಗೆ ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ಹಿಂದಷ್ಟೆ ಮಹಿಳೆಯ ಪುತ್ರಿ ಭೇಟಿಯಾಗಿದ್ದರು. ಕ್ಯಾನ್ಸರ್​​​ನಿಂದ ದಿಢೀರ್​​ ಸಾವು ಹೇಗೆ ಉಂಟಾಗುತ್ತೆ ಎಂಬುವುದೇ ಪ್ರಶ್ನೆ? ಮಹಿಳೆ ಶವ ಹಸ್ತಾಂತರ ವೇಳೆಯೂ ಹಲವು ಲೋಪಗಳು ಉಂಟಾಗಿವೆ. ಇದೆಲ್ಲಾ ವಿಚಾರಗಳು ಸಾಕಷ್ಟು ಅನುಮಾನಕ್ಕೆ ಕಾರಣವಾಗಿವೆ. ಮಹಿಳೆ ಸಾವಿನ ಬಗ್ಗೆ ಸಂತ್ರಸ್ತೆ ಕುಟುಂಬದವರು ಹುಳಿಮಾವು​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ” ಎಂದು ತಿಳಿಸಿದರು.

ಮಾರ್ಚ್ ತಿಂಗಳಲ್ಲಿ ದೂರು

ಬಿ ಎಸ್ ಯಡಿಯೂರಪ್ಪ ಅವರ ವಿರುದ್ಧ 2004ರ ಮಾರ್ಚ್ ತಿಂಗಳಲ್ಲಿ ಪೋಕ್ಸೋ ಕಾಯ್ದೆ ಅಡಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಆದರೆ ಈ ಪ್ರಕರಣದಲ್ಲಿ ಪೊಲೀಸರು ನಿಷ್ಕ್ರಿಯತೆ ತೋರಿಸುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು. ಮಹಿಳೆ ಸಾವಿನ ಬಳಿಕ ಆಕೆಯ ಸಹೋದರ ಹೋರಾಟ ಮುಂದುವರಿಸಲು ಮುಂದಾಗಿದ್ದು, ಯಡಿಯೂರಪ್ಪ ಅವರನ್ನು ಕೂಡಲೇ ಬಂಧಿಸುವಂತೆ ಮತ್ತು ವಿಚಾರಣೆಗೆ ಒಳಪಡಿಸುವಂತೆ ಒತ್ತಾಯಿಸಿ ಜೂನ್ ತಿಂಗಳಲ್ಲಿ ಕೋರ್ಟ್‌ಗೆ ಹೊಸದಾಗಿ ಅರ್ಜಿ ಸಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

Download Eedina App Android / iOS

X