ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಬಿಭವ್ ಕುಮಾರ್ ಅವರಿಗೆ ಸುಪ್ರೀಂಕೋರ್ಟ್ ಇಂದು (ಸೋಮವಾರ) ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ಎಲ್ಲಾ ಪ್ರಮುಖ ಸಾಕ್ಷಿಗಳನ್ನು ವಿಚಾರಣೆ ಮಾಡುವವರೆಗೆ ಕುಮಾರ್ ಅವರು ಸಿಎಂ ಆಪ್ತ ಕಾರ್ಯದರ್ಶಿ ಹುದ್ದೆಯನ್ನು ಪುನರಾರಂಭಿಸದಂತೆ ಅಥವಾ ಸಿಎಂ ನಿವಾಸಕ್ಕೆ ಪ್ರವೇಶಿಸದಂತೆ ಸುಪ್ರೀಂಕೋರ್ಟ್ ನಿರ್ಬಂಧ ವಿಧಿಸಿದೆ.
ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ನೀಡಿದ ದೂರಿನ ಮೇರೆಗೆ ದೆಹಲಿ ಪೊಲೀಸರು ಮೇ 18ರಂದು ಕೇಜ್ರಿವಾಲ್ ಅವರ ನಿವಾಸದಿಂದ ಕುಮಾರ್ ಅವರನ್ನು ಬಂಧಿಸಿದ್ದರು.
ಮೇ 13ರಂದು ತಾನು ಸಿಎಂ ಭೇಟಿ ಮಾಡಲು ಅವರ ನಿವಾಸಕ್ಕೆ ಹೋದಾಗ ಕುಮಾರ್ ಯಾವುದೇ ಪ್ರಚೋದನೆಯಿಲ್ಲದೆ ತನ್ನ ಮೇಲೆ 7-8 ಬಾರಿ ಕಪಾಳಮೋಕ್ಷ ಮಾಡಿದ್ದಾನೆ. ಎದೆ ಮತ್ತು ಸೊಂಟಕ್ಕೆ ಒದ್ದಿದ್ದಾನೆ. ಉದ್ದೇಶಪೂರ್ವಕವಾಗಿ ಕೇಜ್ರಿವಾಲ್ ಅವರ ನಿವಾಸದಲ್ಲಿ ತನ್ನ ಒಟ್ಟೆಯನ್ನು ಎಳೆದಿದ್ದಾನೆ ಎಂದು ಸ್ವಾತಿ ಮಲಿವಾಲ್ ಆರೋಪಿಸಿದದರು.
ಇದನ್ನು ಓದಿದ್ದೀರಾ? ಸ್ವಾತಿ ಮಲಿವಾಲ್ ಪ್ರಕರಣ| ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್ ಬಂಧನ
Swati Maliwal assault: Supreme Court grants bail to Arvind Kejriwal-aide Bibhav Kumar
— Bar and Bench (@barandbench) September 2, 2024
Read story here: https://t.co/8fhMiPbE1l pic.twitter.com/9gcC0UUttk
