ಸೆ.22ಕ್ಕೆ ಪಿಎಸ್‌ಐ, 29ಕ್ಕೆ ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಪರೀಕ್ಷೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ

Date:

Advertisements

402 ಪಿಎಸ್‌ಐ ಹುದ್ದೆಗಳಿಗೆ ಸೆ.22ರಂದು ಲಿಖಿತ ಪರೀಕ್ಷೆ ನಡೆಯಲಿದ್ದು ಇದಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಕಲ ಸಿದ್ಧತೆ ನಡೆಸಿರುವುದಾಗಿ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಪಿಎಸ್‌ಐ ಹುದ್ದೆಗಳಿಗೆ 66, 000 ಮಂದಿ ಅರ್ಜಿ ಸಲ್ಲಿಸಿದ್ದು, ಪರೀಕ್ಷೆಗೆ ಒಂದು ವಾರ ಮೊದಲು ಪ್ರವೇಶ ಪತ್ರ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ ಪರೀಕ್ಷೆ ಸೆ.29ರಂದು ನಡೆಯಲಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮಾತ್ರ ಅಕ್ಟೋಬರ್ 27ಕ್ಕೆ ನಡೆಯುವ ಪ್ರಮುಖ ಪರೀಕ್ಷೆಗೆ ಅರ್ಹತೆ ಪಡೆಯಲಿದ್ದಾರೆ. 1000 ಗ್ರಾಮ ಆಡಳಿತಾಧಿಕಾರಿ(VA) ಹುದ್ದೆಗಳಿಗೆ 5.7 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದು, ಈ ಪರೀಕ್ಷೆಗೂ ತಯಾರಿ‌ ನಡೆಸಲಾಗಿದೆ‌ ಎಂದು ಪ್ರಸನ್ನ ತಿಳಿಸಿದ್ದಾರೆ.

Advertisements

ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆ ಹಾಗೂ ವಿಶೇಷ ಸೂಚನೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದ್ದು, ಈ ಪರೀಕ್ಷೆ ಬರೆಯಲಿರುವವರು ತಪ್ಪದೇ ನಿಯಮಗಳನ್ನು ಪಾಲಿಸಲು ಸೂಚನೆ ನೀಡಲಾಗಿದೆ.

ಪಿಎಸ್‌ಐ ಪರೀಕ್ಷೆಗೆ ಸೆಪ್ಟೆಂಬರ್ 22 ರಂದು ಪತ್ರಿಕೆ-1 ರ ಪರೀಕ್ಷೆಯು ಬೆಳಗ್ಗೆ 10.30 ರಿಂದ 12ರವರೆಗೆ 50 ಅಂಕಗಳಿಗೆ ನಡೆಯಲಿದೆ. ಹಾಗೆಯೇ ಪತ್ರಿಕೆ-2 ಪರೀಕ್ಷೆಯು 12.30ರಿಂದ ಮಧ್ಯಾಹ್ನ 2ರವರೆಗೆ 150 ಅಂಕಗಳಿಗೆ ನಡೆಯಲಿದೆ. ತಪ್ಪು ಉತ್ತರಕ್ಕೆ ಋಣಾತ್ಮಕ ಮೌಲ್ಯಮಾಪನವಿದ್ದು, ಒಂದು ತಪ್ಪು ಉತ್ತರಕ್ಕೆ 25% ಅಂಕಗಳನ್ನು ಕಳೆಯಲಾಗುತ್ತದೆ.

ಸಿವಿಲ್ ಪಿಎಸ್‌ಐ ಹಾಗೂ ಗ್ರಾಮ ಆಡಳಿತ ಅಧಿಕಾರಿ ಎರಡು ಹುದ್ದೆಗಳಿಗೆ ಹಾಜರಾಗುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ವಸ್ತ್ರಸಂಹಿತೆಯನ್ನು ತಪ್ಪದೇ ಪಾಲಿಸಲು ಸೂಚಿಸಲಾಗಿದೆ.

ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ ಹೀಗಿದೆ:

  • ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‌ಗಳನ್ನು ಧರಿಸಬೇಕು.
  • ಸಾಧ್ಯವಾದಷ್ಟು ಶರ್ಟ್‌ ಧರಿಸಲು ಆದ್ಯತೆ ನೀಡುವುದು.
  • ಕಡಿಮೆ ಜೇಬು ಇರುವ ಪ್ಯಾಂಟ್‌ ಧರಿಸುವುದು. ಕುರ್ತಾ, ಪೈಜಾಮ್, ಜೀನ್ಸ್‌ ಪ್ಯಾಂಟ್‌ಗಳಿಗೆ ಅನುಮತಿ ಇಲ್ಲ.
  • ಧರಿಸುವ ಬಟ್ಟೆಗಳು ಹಗುರವಾಗಿರಬೇಕು. ಅಂದರೆ ಜಿಪ್‌ ಪಾಕೆಟ್‌ಗಳು, ಪಾಕೆಟ್‌ಗಳು, ದೊಡ್ಡ ಬಟನ್‌ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟೆಗಳು ಇರಬಾರದು.
  • ಪರೀಕ್ಷಾ ಕೊಠಡಿಗೆ ಶೂಗಳನ್ನು ನಿಷೇಧಿಸಲಾಗಿದೆ. ಚಪ್ಪಲಿ ಧರಿಸಿರಬೇಕು.
  • ಲೋಹದ ಆಭರಣ, ಕಿವಿಯೋಲೆ, ಉಂಗುರ, ಕಡಗಗಳನ್ನು ಪರೀಕ್ಷಾ ಕೊಠಡಿಗೆ ನಿಷೇಧಿಸಲಾಗಿದೆ.

ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ ಹೀಗಿದೆ.

  • ವಿಸ್ತಾರವಾದ ಕಸೂತಿ, ಹೂಗಳು, ಬ್ರೂಜ್‌ಗಳು, ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸಿ ಬರುವುದಕ್ಕೆ ಅವಕಾಶವಿಲ್ಲ.
  • ಅರ್ಧತೋಳಿನ ಬಟ್ಟೆಗಳನ್ನು ಮುಜುಗರವಾಗದಂತೆ ನಿಯಮಗಳ ಪ್ರಕಾರ ಧರಿಸಿ ಬರಬೇಕು. ಪೂರ್ಣ ತೋಳಿನ ಬಟ್ಟೆ, ಜೀನ್ಸ್‌ ಪ್ಯಾಂಟ್ ಧರಿಸಬಾರದು.
  • ಎತ್ತರವಾದ ಹಿಮ್ಮಡಿಯ ಶೂಗಳನ್ನು-ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ, ಚಪ್ಪಲಿಗಳನ್ನಾಗಲಿ ಧರಿಸಬಾರದು. ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳನ್ನು ಧರಿಸುವುದು ಕಡ್ಡಾಯವಾಗಿದೆ.
  • ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. (ಮಂಗಳಸೂತ್ರ, ಕಾಲುಂಗುರ ಹೊರತುಪಡಿಸಿ).

ಪರೀಕ್ಷೆಯ ದಿನಾಂಕದಂದು ಪ್ರವೇಶ ಪತ್ರವನ್ನು ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ತರಬೇಕು, ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿ, ಪರೀಕ್ಷೆಯ ಕೊನೆ ಬೆಲ್‌ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇಲ್ಲ ಎಂದು ಕೆಇಎ ತಿಳಿಸಿದೆ.

ನಿಷೇಧಿತ ವಸ್ತುಗಳ ಪಟ್ಟಿ ಹೀಗಿದೆ.

  • ಯಾವುದೇ ಇಲೆಕ್ಟ್ರಾನಿಕ್ ಗ್ಯಾಜೆಟ್‌ಗಳು
  • ತಿನ್ನಬಹುದಾದ ಪದಾರ್ಥಗಳು, ನೀರಿನ ಬಾಟಲ್‌ಗಳು
  • ತಲೆಯ ಮೇಲೆ ಟೋಪಿ ಧರಿಸುವಂತಿಲ್ಲ
  • ಯಾವುದೇ ರೀತಿಯ ಮಾಸ್ಕ್‌ ಧರಿಸುವಂತಿಲ್ಲ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು, ಇಲ್ಲವಾದಲ್ಲಿ ನಿಯಮಾನುಸಾರ ಅಭ್ಯರ್ಥಿಗಳ ಮೇಲೆ ಕಠಿಣ ಕ್ರಮವನ್ನು ಜರುಗಿಸಲಾಗುವುದು ಎಂದು ಸೂಚನೆಯಲ್ಲಿ ತಿಳಿಸಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X