ಕೊಪ್ಪಳ | ಅಂರ್ತಜಾತಿ ವಿವಾಹವಾಗಿದ್ದ ದಲಿತ ಯುವತಿಗೆ ವಿಷವುಣಿಸಿ ಕೊಲೆ: ಆರೋಪ

Date:

Advertisements

ಬೇರೆ ಜಾತಿಯ ಯುವಕನನ್ನು ಪ್ರೀತಿಸಿ ವಿವಾಹವಾಗಿದ್ದ ದಲಿತ ಯುವತಿಯನ್ನು, ಯುವಕನ ಮನೆಯವರು ಮನಬಂದಂತೆ ಹಲ್ಲೆ ನಡೆಸಿ, ಬಳಿಕ ವಿಷ ಹಾಕಿ ಕೊಲೆಗೈದಿರುವುದಾಗಿ ಯುವತಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿಠಲಾಪುರ ಗ್ರಾಮದಲ್ಲಿ ನಡೆದಿದ್ದು, ಮಾದಿಗ ಸಮುದಾಯಕ್ಕೆ ಸೇರಿದ ಮರಿಯಮ್ಮ(21) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ.

ಮರಿಯಮ್ಮ ಹಾಗೂ ಹನುಮಯ್ಯ ಇಬ್ಬರು ಪರಸ್ಪರ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಮರಿಯಮ್ಮ ಮೂಲತ ಅಗೋಲಿ ಗ್ರಾಮದವರು. ವಿಠಲಾಪುರ ಗ್ರಾಮದಲ್ಲಿ ಅಜ್ಜಿ ಮನೆ ಇರುವುದರಿಂದ ಅವಾಗವಾಗ ಮನೆಗೆ ಬಂದು ಹೋಗುತ್ತಿದ್ದಳು. ಈ ವೇಳೆ ಗ್ರಾಮದ ಯುವಕ ಹನುಮಯ್ಯ ಪರಿಚಯವಾಗಿತ್ತು.‌ಈ ಪರಿಚಯ ಪ್ರೀತಿಗೆ ತಿರುಗಿತ್ತು.

Advertisements
1001541306

ಹನುಮಯ್ಯ ಎಸ್ ಟಿ ಸಮುದಾಯಕ್ಕೆ ಸೇರಿದ ಯುವಕ. ಅಂತರ್ಜಾತಿಯ ಕಾರಣದಿಂದಾಗಿ ಮರಿಯಮ್ಮ ಹಾಗೂ ಹನುಮಯ್ಯ 2023ರ ಏಪ್ರಿಲ್‌ನಲ್ಲಿ ತಮ್ಮ ಕುಟುಂಬದವರನ್ನು ಒಪ್ಪಿಸಿ, ಬಳಿಕ ಗಂಗಾವತಿಯಲ್ಲಿ ರಿಜಿಸ್ಟರ್ ಮದುವೆಯಾಗಿದ್ದರು. ಮದುವೆಯಾದ ನಂತರ ಯುವಕನ ಮನೆಯಲ್ಲಿ ಜಾತಿ ಸಂಬಂಧ ಯುವತಿಗೆ ಹಿಂಸೆ ನೀಡುತ್ತಿದ್ದರು ಎನ್ನಲಾಗಿದೆ.‌ ಅಲ್ಲದೇ, ವರದಕ್ಷಿಣೆ ತರುವಂತೆ ಕೂಡ ಪೀಡಿಸುತ್ತಿದ್ದರು ಎಂಬ ಆರೋಪ ಕೂಡ ಕೇಳಿಬಂದಿದೆ.

ಯುವತಿ ಮಾದಿಗ ಸಮುದಾಯಕ್ಕೆ ಸೇರಿದವಳೆಂಬ ಎಂಬ ಕಾರಣಕ್ಕೆ ಮನೆಯ ಸಮೀಪವೇ ಬೇರೆಯೇ ಶೆಡ್ ಹಾಕಿ ಅಡುಗೆ ಮಾಡುವಂತೆ ಸೂಚಿಸಿದ್ದಲ್ಲದೇ, ನಾವು ಯಾರೂ ನೀನು ಮಾಡಿದ ಅಡುಗೆ ತಿನ್ನಲಾರೆವು ಎಂದು ಅಸ್ಪೃಶ್ಯತೆ ಆಚರಣೆ ಮಾಡಿರುವುದಾಗಿ ತಿಳಿದು ಬಂದಿದೆ. ಅಲ್ಲದೇ, ಎಲ್ಲದಕ್ಕೂ ಜಾತಿಯ ಕಾರಣವೊಡ್ಡಿ ಕುಟುಂಬದಿಂದ ದೂರವಿಟ್ಟು, ಹಿಂಸೆ ನೀಡುತ್ತಿದ್ದರು ಎಂದು ಯುವತಿ ಮರಿಯಮ್ಮ ತಮ್ಮ ಕುಟುಂಬಕ್ಕೆ ಮಾಹಿತಿ ನೀಡಿದ್ದರು ಎಂದು ತಿಳಿದು ಬಂದಿದೆ.

ಈ ನಡುವೆ ಯುವತಿಗೆ ಯುವಕನ ಕುಟುಂಬದ ಮಂದಿ ಬರ್ಬರವಾಗಿ ಹಲ್ಲೆ ನಡೆಸಿದ್ದು, ಈ ವೇಳೆ ಯುವತಿಯ ಸಾವಾಗಿದೆ. ಕೊಲೆ ಮಾಡಿದ ಬಳಿಕ ಯಾವುದೇ ಅನುಮಾನ ಬಾರದಿರಲು ವಿಷವುಣಿಸಿದ್ದಾರೆ ಎಂದು ಯುವತಿಯ ತಂದೆ ಆರೋಪಿಸಿದ್ದಾರೆ.

ಆ ಬಳಿಕ ಯುವಕನ ಕುಟುಂಬದವರು ಯುವತಿಯ ಕುಟುಂಬಕ್ಕೆ ಕರೆ ಮಾಡಿ, ‘ನಿಮ್ಮ ಮಗಳು ಜಮೀನಿನಲ್ಲಿ ವಿಷ ಕುಡಿದಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದೆವು. ಅಲ್ಲಿ ಆಕೆಯ ಸಾವಾಗಿದೆ’ ಎಂದು ತಿಳಿಸಿರುವುದಾಗಿ ಯುವತಿಯ ತಂದೆ ಗಂಗಾವತಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ವಿಷಯ ತಿಳಿದ ನಂತರ ವಿಠಲಾಪುರ ಗ್ರಾಮಕ್ಕೆ ಗಂಗಾವತಿ ಪೊಲೀಸರು ಭೇಟಿ ನೀಡಿದ್ದು, ಯುವತಿಯ ಮರಣೋತ್ತರ ಪರೀಕ್ಷೆ ನಡೆಸಲು ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಅಲ್ಲದೇ, ಈ ಸಂಬಂಧ ಗಂಗಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.‌

ಯುವತಿಯ ತಂದೆ ಗಾಳೆಪ್ಪ, ಯುವಕನ ಕುಟುಂಬದ 13 ಮಂದಿಯ ಮೇಲೆ ಕೊಲೆ ಆರೋಪ ಹೊರಿಸಿದ್ದರಿಂದ ಇಬ್ಬರನ್ನು ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X