ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮಾಜಿ ಆಯುಕ್ತರಾಗಿದ್ದ ಜಿ ಟಿ ದಿನೇಶ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. ರಾಜ್ಯಪಾಲರ ಆದೇಶದ ಮೇರೆಗೆ ಈ ಅಮಾನತು ಮಾಡಲಾಗಿದೆ.
ಮುಡಾದ ಈ ಹಿಂದಿನ ಆಯುಕ್ತರಾಗಿದ್ದ ದಿನೇಶ್ ಕುಮಾರ್ ಮತ್ತು ಡಿ ಬಿ ನಟೇಶ್ ಇಬ್ಬರು ಮುಡಾದಲ್ಲಿನ ಭ್ರಷ್ಟಾಚಾರದಲ್ಲಿ ಪ್ರಮುಖರಾಗಿದ್ದಾರೆ. ಸರ್ಕಾರದ ಬೊಕ್ಕಸಕ್ಕೆ ಸುಮಾರು 5 ಸಾವಿರ ಕೋಟಿ ರೂಪಾಯಿಯಷ್ಟು ನಷ್ಟ ಉಂಟು ಮಾಡಿದ್ದಾರೆ ಎಂದು ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ವಕೀಲ ಅರುಣ್ ಕುಮಾರ್ ದೂರು ನೀಡಿದ್ದರು.
ಮುಡಾ ಪ್ರಕರಣದ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಮುಡಾ ಆಯುಕ್ತರಾಗಿದ್ದ ದಿನೇಶ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿತ್ತು.
ಇದನ್ನು ಓದಿದ್ದೀರಾ? ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆ. 9ಕ್ಕೆ ಮುಂದೂಡಿಕೆ
ಮೂರು ದಿನಗಳ ಹಿಂದಷ್ಟೆ ದಿನೇಶ್ ಕುಮಾರ್ ಹಾವೇರಿ ವಿವಿ ಕುಲಸಚಿವರಾಗಿ ಅಧಿಕಾರ ಸ್ವೀಕರಿಸಿದ್ದರು. ಆದರೆ ಈಗ ಅವರನ್ನು ಅಮಾನತು ಮಾಡಲಾಗಿದೆ.
ಮುಡಾ ಹಗರಣ ನಡೆದಿದೆ ಎಂದು ಬಿಜೆಪಿ ದೂರಿದ್ದು ಇದರಲ್ಲಿ ಮುಡಾದ ಆಯುಕ್ತರಾಗಿದ್ದ ಜಿ ಟಿ ದಿನೇಶ್ ಕುಮಾರ್ ಅವರ ಹೆಸರು ಕೇಳಿ ಬಂದಿದೆ. ಹೀಗಿರುವಾಗ ಹಾವೇರಿ ವಿವಿ ಕುಲಸಚಿವರನ್ನಾಗಿ ದಿನೇಶ್ ನೇಮಕ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.
