ಚಿತ್ರದುರ್ಗ | ಶಿಕ್ಷಣದಿಂದ ಮಾತ್ರ ಸಮುದಾಯದ ಅಭಿವೃದ್ಧಿ ಸಾಧ್ಯ : ಈಶ್ವರಾನಂದಶ್ರೀ

Date:

Advertisements

ಸಮುದಾಯಗಳು ಮುಂದುವರೆಯಬೇಕು ಎಂದರೆ ಶಿಕ್ಷಣದಲ್ಲಿ ಮುಂದೆ ಬರಬೇಕು. ಶಿಕ್ಷಣದಲ್ಲಿ ಜಾಗೃತಿ ಇರಬೇಕು. ಶಿಕ್ಷಣವಿಲ್ಲದೇ ಸಮಾಜಗಳು ಏಳಿಗೆಯಾಗುವುದಿಲ್ಲ. ಇತ್ತೀಚೆಗೆ ಹಿಂದುಳಿದ ಸಮುದಾಯಗಳಲ್ಲಿ ಶಿಕ್ಷಣದ ಬಗ್ಗೆ ಜಾಗೃತಿಯಾಗುತ್ತಿದೆ ಎಂದು ಕನಕ ಗುರುಪೀಠದ ಈಶ್ವರಾನಂದಶ್ರೀ ಅಭಿಪ್ರಾಯಪಟ್ಟರು.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ತಾಲ್ಲೂಕು ಕನಕ ನೌಕರರ ಕ್ಷೇಮಾಭಿವೃದ್ದಿ ಸಂಘ ಹಾಗೂ ಜಿಲ್ಲಾ ಕುರುಬರ ಸಂಘದಿಂದ 2023-2024 ನೇ ಸಾಲಿನಲ್ಲಿ ಕುರುಬ ಸಮಾಜದ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳಿಗೆ ಸರ್ಕಾರಿ ನೌಕರರ ಭವನದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ನಮ್ಮ ಸಮುದಾಯದಲ್ಲಿ ಅನೇಕ ಪ್ರತಿಭಾವಂತರಿದ್ದರೂ ಸಮಾಜ, ಸಂಘಸಂಸ್ಥೆಗಳು ಹಾಗೂ ಸಂಘಟನೆಗಳು ಗುರುತಿಸಿ ಪ್ರೋತ್ಸಾಹಿಸುವಲ್ಲಿ ಹಿಂದೆ ಬಿದ್ದಿವೆ. ತಾತ್ಸಾರ ಮನೋಭಾವನೆ ಬೇಡ. 2002 ರಲ್ಲಿ ಆರಂಭಗೊಂಡ ಪ್ರತಿಭಾ ಪುರಸ್ಕಾರ ಇಲ್ಲಿಯವರೆಗೂ ಪ್ರತಿ ವರ್ಷ ನಿರಂತರವಾಗಿ ನಡೆದುಕೊಂಡು ಬರುತ್ತಿದೆ ಎಂದು ತಿಳಿಸಿದರು.

ನಮ್ಮ ಸಮುದಾಯದಲ್ಲಿ ಬಡವರಿರಬಹುದು. ಆದರೆ ಪ್ರತಿಭಾವಂತರಿಗೆ ಕೊರತೆಯಿಲ್ಲ. ಅಂತಹವರನ್ನು ಗುರುತಿಸಿ ಬೆಳಕಿಗೆ ತರುವ ಕೆಲಸವಾಗಬೇಕು. ಇದಕ್ಕೆ ಹೆಚ್ಚಿನ ನೆರವು ಅಗತ್ಯವಿದೆ. ಪ್ರತಿಯೊಬ್ಬರು ಆರ್ಥಿಕ ನೆರವು ಸೇರಿಸಿದರೆ ಪ್ರತಿ ವರ್ಷವೂ ದೊಡ್ಡ ಮಟ್ಟದಲ್ಲಿ ಪ್ರತಿಭೆಗಳಿಗೆ ಸಹಾಯವಾಗಲಿದೆ ಎಂದು ಮನವಿ ಮಾಡಿದರು.

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವ ತಪ್ಪು ಮಾಡದಿದ್ದರೂ ವಿನಾ ಕಾರಣ ಎದುರಾಳಿಗಳು ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಕುತಂತ್ರ ಮಾಡುತ್ತಿರುವುದರಿಂದ ನೈತಿಕವಾಗಿ ಬೆಂಬಲಕ್ಕೆ ನಿಲ್ಲಬೇಕು. ದ್ವೇಷ ಅಸೂಯೆ ಬಿಟ್ಟು ಮೊದಲು ಸಂಘಟಿತರಾಗಿ ಧರ್ಮ, ದೇಶ ಕಾಯುವ ಸಮರ್ಥ ಮಕ್ಕಳನ್ನು ತಯಾರು ಮಾಡಿ ಎಂದು ಜನಾಂಗದವರಿಗೆ ಸ್ವಾಮೀಜಿ ಕರೆ ನೀಡಿದರು.

ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಮಾತನಾಡಿ ಪ್ರತಿ ಮಗುವಿನಲ್ಲಿರುವ ಪ್ರತಿಭೆ ಗುರುತಿಸುವ ಕೆಲಸ ಮಾಡಬೇಕು. ಅಂಕಗಳು ಮಾನದಂಡವಾಗುವ ಬದಲು ಸಾಮರ್ಥ್ಯವನ್ನು ಗುರುತಿಸಬೇಕು. ಮಕ್ಕಳಿಗೆ ಗುರು ಹಿರಿಯರನ್ನು ಗೌರವಿಸುವ ಮನೋಭಾವ ಬೆಳೆಸಬೇಕು. ಇಂದು ಮಕ್ಕಳು ಮೊಬೈಲ್, ಫೇಸ್ಬುಕ್ , ವಾಟ್ಸಾಪ್ ಗಳ ವ್ಯಾಮೋಹಕ್ಕೆ ಒಳಗಾಗುತ್ತಿದ್ದು, ಪೋಷಕರು ಶಿಕ್ಷಕರು ಅದರಿಂದ ಅವರನ್ನು ಹೊರತರಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಕುರುಬರ ಸಂಘದ ಕಾರ್ಯದರ್ಶಿ ಬಿ ಟಿ ಜಗದೀಶ್ ಮಾತನಾಡಿ, ಡಾ.ಅಂಬೇಡ್ಕರ್ ಅವರ ಘೋಷವಾಕ್ಯದಂತೆ ಶಿಕ್ಷಣ, ಸಂಘಟನೆ, ಹೋರಾಟಕ್ಕೆ ಎಲ್ಲಾ ಸಮಾಜಗಳು ಒತ್ತು ಕೊಡಬೇಕು. ಬಡತನ ದಾರಿದ್ರ್ಯದಿಂದ ಹೊರಬರಲು ಶಿಕ್ಷಣವೊಂದೇ ದಾರಿ. ಅದರಿಂದ ಶಿಕ್ಷಣದ ಬಗ್ಗೆ ಜಾಗೃತಿ ಹೊಂದಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕರ್ನಾಟಕ ಪ್ರದೇಶ ಕುರುಬರ ಸಂಘದ ಉಪಾಧ್ಯಕ್ಷೆ ಶ್ರೀಮತಿ ರಜಿನಿ ಲೇಪಾಕ್ಷಿ, ಕುರುಬರ ಸಂಘದ ಮಹಿಳಾಧ್ಯಕ್ಷೆ ಶ್ರೀಮತಿ ಎನ್‌.ಎಂ.ಪುಷ್ಪವಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೇಣುಪ್ರಸಾದ್, ಡಾ. ರೇಖಾ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್, ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಕಾರ್ಯಾಧ್ಯಕ್ಷ ಆರ್.ಮಂಜುನಾಥ್ ಇನ್ನಿತರರು ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X