ಕೋಲಾರ | ಸರ್ಕಾರ ನಿಗದಿತ ಗುರಿಗಿಂತ ಕೆಜಿಎಫ್ ಮುದ್ರಾಂಕ ಇಲಾಖೆ ಹೆಚ್ಚಿನ ಸಾಧನೆ

Date:

Advertisements
  • ಕೆಜಿಎಫ್ ಕಚೇರಿಗೆ ಭೇಟಿ ನೀಡಿದ್ದ ಇನ್ಸ್ಪೆಕ್ಟರ್-ಜನರಲ್ ಮಮತ
  • ಇಲಾಖೆಯ ಸಾಧನೆ ಬಗ್ಗೆ ಹರ್ಷ ವ್ಯಕ್ತಪಡಿಸಿದ ಅಧಿಕಾರಿಗಳು

ರಾಜ್ಯ ಸರ್ಕಾರವು ರಾಜ್ಯಾದ್ಯಂತ ಇರುವ ನೊಂದಣಿ ಮತ್ತು ಮುದ್ರಾಂಕ ಇಲಾಖೆಯ ಉಪನೊಂದಣಾಧಿಕಾರಿಗಳ ಕಚೇರಿಗಳಲ್ಲಿ 2022-23ನೇ ಸಾಲಿನಲ್ಲಿ 15 ಸಾವಿರ ಕೋಟಿ ರೂ. ವಹಿವಾಟು ನಡೆಸುವಂತೆ ನೀಡಿದ್ದ ಗುರಿಗಿಂತ ಹೆಚ್ಚಿನ ಸಾಧನೆಯನ್ನು ಕೆಜಿಎಫ್‌ ಕಚೇರಿಯು ಮಾಡಿದೆ ಎಂದು ಮುದ್ರಾಂಕ ಮತ್ತು ನೋಂದಣಿ ಇಲಾಖೆಯ ಇನ್ಸ್ಪೆಕ್ಟರ್-ಜನರಲ್ ಮಮತ ಹರ್ಷ ವ್ಯಕ್ತಪಡಿಸಿದ್ದಾರೆ.

ಕೆಜಿಎಫ್ ತಾಲೂಕು ಆಡಳಿತ ಸೌಧದಲ್ಲಿ ನೂತನವಾಗಿ ಪ್ರಾರಂಭವಾದ ಉಪ ನೊಂದಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಮಾತನಾಡಿ, “ಈ ಬಾರಿ 2023-24ನೇ ಸಾಲಿಗೆ 19 ಸಾವಿರ ಕೋಟಿ ರೂ. ಗುರಿ ನೀಡಿಲಾಗಿದೆ. ಈಗಾಗಲೇ 900 ಕೋಟಿ ರೂ. ವಹಿವಾಟು ನಡೆಸಿದ್ದು, ಇನ್ನೆರಡು ದಿನಗಳಲ್ಲಿ ಒಂದು ಸಾವಿರ ಕೋಟಿ ರೂ.ಗಳ ಗುರಿಯನ್ನು ಸಾಧಿಸಲಿದ್ದೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ಕಾವೇರಿ 2.0 ತಂತ್ರಾಂಶವು ಜನಸ್ನೇಹಿಯಾಗಿದ್ದು, ಸಾರ್ವಜನಿಕರು ತಮ್ಮ ದಸ್ತಾವೇಜುಗಳನ್ನು ತಾವೇ ಸಿದ್ದಪಡಿಸಿಕೊಂಡು ಸಿಟಿಜನ್ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡುವ ಮೂಲಕ ಮಧ್ಯವರ್ತಿಗಳ ಹಾವಳಿಯಿಲ್ಲದೇ ಸುಲಭವಾಗಿ ನೊಂದಣಿ ಮಾಡಿಕೊಳ್ಳಬಹುದಾಗಿದ್ದು, ಇಲ್ಲಿಯವರೆಗೆ ದಿನಕ್ಕೆ 40 ನೊಂದಣಿಗಳಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇದರ ಪ್ರಮಾಣ 80ಕ್ಕೆ ಏರಲಿದೆ” ಎಂದು ತಿಳಿಸಿದರು.

Advertisements

“ಕಳೆದ ಮಾರ್ಚ್‌ನಿಂದ ರಾಜ್ಯಾದ್ಯಂತ ಎಲ್ಲ ಉಪನೊಂದಣಾಧಿಕಾರಿಗಳ ಕಚೇರಿಗಳಲ್ಲಿ ಹಂತ ಹಂತವಾಗಿ ಕಾವೇರಿ 2.0 ತಂತ್ರಾಂಶವನ್ನು ಅಳವಡಿಸಲಾಗುತ್ತಿದೆ. ಏಕಕಾಲಕ್ಕೆ ಎಲ್ಲ ಕಡೆಗಳಲ್ಲಿ ನೂತನ ತಂತ್ರಾಂಶವನ್ನು ಅಳವಡಿಸಿದಲ್ಲಿ ಏನಾದರೂ ತಾಂತ್ರಿಕ ತೊಂದರೆಗಳು ಕಂಡುಬಂದಲ್ಲಿ ಸರಿಪಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲವಾದ್ದರಿಂದ ಹಂತ ಹಂತವಾಗಿ ಅಳವಡಿಸಲಾಗುತ್ತಿದೆ” ಎಂದರು.

“ಕಾವೇರಿ 2.0 ತಂತ್ರಾಂಶದಲ್ಲಿ ಸಾರ್ವಜನಿಕರೇ ತಮ್ಮ ದಸ್ತಾವೇಜುಗಳನ್ನು ಸಿದ್ದಪಡಿಸುವುದರಿಂದ ತಮ್ಮ ಆಸ್ತಿಗಳ ಮೌಲ್ಯವನ್ನು ತಿಳಿದುಕೊಳ್ಳಲು ಮತ್ತು ನೊಂದಣಿ ಪ್ರಕ್ರಿಯೆಯ ಬಗ್ಗೆ ತಿಳಿದುಕೊಳ್ಳಲು ಸಾಧ್ಯವಾಗುತ್ತದೆ. ಮುಖ್ಯವಾಗಿ ಚೇಂಜ್ ಮ್ಯಾನೇಜ್‌ಮೆಂಟ್ ತತ್ವದಡಿಯಲ್ಲಿ ಹಳೆಯ ಪದ್ಧತಿಯಿಂದ ಹೊಸ ಪದ್ಧತಿಗೆ ಹೊಂದಿಕೊಳ್ಳುವ ಸಮಯದಲ್ಲಿ ಎದುರಾಗುವಂತೆ ತೊಂದರೆಗಳನ್ನು ಸರಿಪಡಿಸಿಕೊಳ್ಳುವುದಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? : ಯಾದಗಿರಿ | ಮತದಾನದಿಂದ ವಂಚಿತರಾಗದಂತೆ ಕೂಲಿ ಕಾರ್ಮಿಕರಿಗೂ ವ್ಯವಸ್ಥೆ ಮಾಡಿ

“ಈ ಹೊಸ ತಂತ್ರಾಂಶವನ್ನು ಅಳವಡಿಸಿಕೊಳ್ಳುವುದಕ್ಕೆ ಕಳೆದ ಫೆಬ್ರುವರಿ ತಿಂಗಳಿನಿಂದ ಸಾರ್ವಜನಿಕರಿಗೆ ಸಾಕಷ್ಟು ತರಬೇತಿಗಳನ್ನು ಮತ್ತು ಹೊಸ ತಂತ್ರಾಂಶದ ಬಗ್ಗೆ ಪ್ರಾತ್ಯಕ್ಷಿಕೆಗಳನ್ನು ಪ್ರದರ್ಶಿಸಲಾಗುತ್ತಿದ್ದು, ಯಾವ ರೀತಿ ಇದನ್ನು ಉಪಯೋಗಿಸಬೇಕೆಂಬ ಬಗ್ಗೆ ತರಬೇತಿಗಳನ್ನು ನೀಡುತ್ತಾ ಬಂದಿದ್ದು, ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಉಪ ನೊಂದಣಾಧಿಕಾರಿಗಳಿಗೂ ಇದು ಹೊಸದಾಗಿದ್ದು, ಕಾಲ ಕ್ರಮೇಣ ಎಲ್ಲವೂ ಸರಿಯಾಗಲಿದೆ” ಎಂದರು.

“ನೂತನ ತಂತ್ರಾಂಶ ಅಳವಡಿಕೆಯಿಂದ ಯಾವುದೇ ರೀತಿಯ ನಗದು ವ್ಯವಹಾರ ಉಪ ನೊಂದಣಾಧಿಕಾರಿಗಳ ಕಚೇರಿಯಲ್ಲಿ ನಡೆಯುವುದಿಲ್ಲ. ಸಾರ್ವಜನಿಕರು ನೊಂದಣಿ ಪ್ರಕ್ರಿಯೆಯ ಬಗ್ಗೆ ಭಯ ಪಡುವ ಅಗತ್ಯವಿರುವುದಿಲ್ಲ. ಜೊತೆಗೆ ಆಸ್ತಿಗಳ ನೊಂದಣಿ ಶುಲ್ಕವನ್ನು ನೇರವಾಗಿ ಖಜಾನೆ-2 ಖಾತೆಗೆ ಜಮೆ ಮಾಡಬಹುದು” ಎಂದು ತಿಳಿಸಿದರು.

ಈ ವೇಳೆ ಜಿಲ್ಲಾ ನೊಂದಣಾಧಿಕಾರಿ ಶ್ರೀದೇವಿ, ಕೆಜಿಎಫ್ ಪ್ರಭಾರಿ ಉಪ ನೊಂದಣಾಧಿಕಾರಿ ಶಿವರಾಜ್, ಬಂಗಾರಪೇಟೆ ಉಪ ನೊಂದಣಾಧಿಕಾರಿ ಸುಮಲತ, ಶ್ರೀನಿವಾಸಪುರ ಉಪ ನೊಂದಣಾಧಿಕಾರಿ ಕವಿತಾ, ಮುಳಬಾಗಿಲು ಉಪ ನೊಂದಣಾಧಿಕಾರಿ ಬಯ್ಯಾರೆಡ್ಡಿ, ಸಿಬ್ಬಂದಿ ಮಂಜುನಾಥ್, ಮುರಳೀಧರ್, ಎಂಜಿನಿಯರ್‌ಗಳಾದ ದೇವರಾಜ್, ಸಂದೀಪ್, ಕಂಪ್ಯೂಟರ್ ಆಪರೇಟರ್‌ಗಳಾದ ಮಂಜುನಾಥ್, ಸುಶ್ಮಿತ, ರೋಜಾ ಸೇರಿದಂತೆ ಹಲವರು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X