ರಾಯಚೂರು | ರಸ್ತೆಗುಂಡಿ ಸರಿಪಡಿಸಲು ಆಗ್ರಹಿಸಿ ಗಿಡ ನೆಟ್ಟು ಆರ್‌ವೈಎಫ್‌ಐ ಸಂಘಟನೆಯಿಂದ ಪ್ರತಿಭಟನೆ

Date:

Advertisements

ರಾಯಚೂರು ನಗರದ ರಸ್ತೆ ಗುಂಡಿಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಅಖಿಲ ಭಾರತ ಕ್ರಾಂತಿಕಾರಿ ಯುವಜನ ಒಕ್ಕೂಟದ ಸದಸ್ಯರು ಗಿಡ ನೆಟ್ಟು ನಗರಸಭೆಯ ವಿರುದ್ಧ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಹಾಗೂ ಡಾ. ಬಿ. ಆರ್ ಅಂಬೇಡ್ಕರ್ ವೃತ್ತದ ಬಸ್ ನಿಲ್ದಾಣ ಹೋಗುವ ರಸ್ತೆ ಗುಂಡಿಯಲ್ಲಿ ಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿ ವರ್ಷ ಮಳೆಗಾಲದಲ್ಲಿ ಪ್ರಮುಖ ರಸ್ತೆಗಳಲ್ಲಿ ಗುಂಡಿಗಳು ಬಿದ್ದು ಅಪಘಾತಗಳಾಗುತ್ತಿವೆ. ಕಳೆದ ವಿಧಾನಸಭೆ ಚುನಾವಣೆಯ ಮುಂಚೆ ನೀತಿ ಸಂಹಿತೆಯ ಜಾರಿಯಾಗುವ ಮುಂಚೆ ನಿರ್ಮಿಸಿದ ರಸ್ತೆಗಳು ಎರಡು ವರ್ಷಗಳ ಒಳಗೆ ಅಧೋಗತಿಗೆ ತಲುಪಿದ್ದು, ಕಳಪೆ ಕಾಮಗಾರಿಗೆ ಸಾಕ್ಷಿಯಾಗಿದೆ. ಇದಕ್ಕೆ ಶಾಸಕರೇ ನೇರ ಹೊಣೆ ಹೊರಬೇಕು. ರಾಜ್ಯಕ್ಕೆ ವಿದ್ಯುತ್, ಚಿನ್ನ ನೀಡುವ ರಾಯಚೂರಿನ ಜಿಲ್ಲಾ ಕೇಂದ್ರದಲ್ಲಿಯೇ ಈ ಸ್ಥಿತಿಯಿದ್ದು ಅಭಿವೃದ್ಧಿಗೆ ಕೊಡಲಿ ಪೆಟ್ಟಾಗಿದೆ ಎಂದು ಆಕ್ರೋಶ ಹೊರ ಹಾಕಿದರು.

Advertisements

ನಗರಸಭೆ ಹಾಗೂ ಲೋಕೋಪಯೋಗಿ ಇಲಾಖೆ ಕನಿಷ್ಠ ಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗದೇ ಸಾರ್ವಜನಿಕರ ತಾಳ್ಮೆ‌ ಪರೀಕ್ಷಿಸುವಂತಿದೆ. ಜಿಲ್ಲೆಯಿಂದ ಇಬ್ಬರು ಮಂತ್ರಿ, ಇಬ್ಬರು ಎಂಎಲ್‌ಸಿ, ಶಾಸಕರಿದ್ದರು ಜಿಲ್ಲಾ ಕೇಂದ್ರದಲ್ಲಿ ಉತ್ತಮವಾದ ರಸ್ತೆಯಿಲ್ಲದಿರುವುದು ದುರದೃಷ್ಟಕರ ಸಂಗತಿಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಗುಂಡಿ ಮುಚ್ಚುವುದರೊಂದಿಗೆ ರಸ್ತೆಗಳ ಗುಣಮಟ್ಟ ಹಾಳಾಗದಿರುವ ಬಗ್ಗೆ ಮುಂಜಾಗ್ರತೆ ಕ್ರಮ ವಹಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ರಾಯಚೂರು | ಹಣಕಾಸು ಕಂಪನಿಗಳಿಂದ ವಂಚನೆ: ನ್ಯಾಯಕ್ಕೆ ಆಗ್ರಹಿಸಿ ಸಂತ್ರಸ್ತರಿಂದ ಪ್ರತಿಭಟನೆ

ಈ ಸಂದರ್ಭದಲ್ಲಿ ಅಖಿಲ ಭಾರತ ಕ್ರಾಂತಿಕಾರಿ ಯುವಜನ ಒಕ್ಕೂಟ(RYFI) ಜಿಲ್ಲಾ ಮುಖಂಡ ಅಜೀಜ್ ಜಾಗೀರ್ದಾರ್, ನಿರಂಜನ್ ಕುಮಾರ್, ಮಾರೆಪ್ಪ ಅರವಿ, ರವಿಚಂದ್ರನ್, ನರಸಪ್ಪ, ಆಂಜನೇಯ, ಎಲ್ಲಪ್ಪ, ಹನೀಫ್ ಅಬಕಾರಿ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

Download Eedina App Android / iOS

X