ಧಾರವಾಡ | ಹಿರೇನೆರ್ತಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮೂಲಸೌಕರ್ಯ ಮರೀಚಿಕೆ; ಅಧಿಕಾರಿ, ಜನಪ್ರತಿನಿಧಿಗಳ ನಿರ್ಲಕ್ಷ್ಯ

Date:

Advertisements

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನೆರ್ತಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮೂಲಸೌಕರ್ಯಗಳು ಮರೀಚಿಕೆಯಾಗಿದ್ದು, ಶಾಲೆಯ ಸಮಸ್ಯೆಗಳು ವಿದ್ಯಾರ್ಥಿಗಳನ್ನು ಕಾಡುತ್ತಿವೆ.

ಹಿರೇನೆರ್ತಿ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆ ಏಳು ಕೊಠಡಿಗಳನ್ನು ಒಳಗೊಂಡಿರುವ ಈ ಸರ್ಕಾರಿ ಪ್ರೌಢಶಾಲೆಯು ಸಿಎಸ್ಆರ್ ಯೋಜನೆ ಅಡಿಯಲ್ಲಿ, ಸುಮಾರು ₹1.47 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದೆ. ಆದರೂ ಈ ಶಾಲೆ ಸಮಸ್ಯೆಯ ಆಗರವಾಗಿದ್ದು, ವಿದ್ಯಾರ್ಥಿಗಳಿಗೆ ಶಾಪವಾಗಿ ಪರಿಣಮಿಸಿದೆ.

ಊರ ಹೆಬ್ಬಾಗಿಲಿನ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಈ ಸರ್ಕಾರಿ ಪ್ರೌಢಶಾಲೆಯಲ್ಲಿ 55 ಮಂದಿ ವಿದ್ಯಾರ್ಥಿನಿಯರು ಹಾಗೂ 76 ಮಂದಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಸಿಬ್ಬಂದಿಯನ್ನು ಹೊಂದಿದೆ. ಮುಖ್ಯವಾಗಿ ಶೌಚಾಲಯವೇ ನಿರ್ಮಾಣವಾಗಿಲ್ಲವೆಂದು ತಿಳಿದುಬರುತ್ತದೆ.

Advertisements
ಹಿರೇನೆರ್ತಿ ಪ್ರೌಢಶಾಲೆ 1

ವಿದ್ಯಾರ್ಥಿಗಳು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಹಿರೇನೆರ್ತಿ ಗ್ರಾಮ ಪಂಚಾಯಿತಿಯಿಂದ ಶೌಚಾಲಯ ವ್ಯವಸ್ಥೆ ಮಾಡಿಸಿದರೂ ಕೂಡಾ ಕಿಡಿಗೇಡಿಗಳು ಶೌಚಾಲಯದ ಬಾಗಿಲು ಮುರಿದಿರುವ ಪರಿಣಾಮ ಹೆಣ್ಣುಮಕ್ಕಳು ಮೂತ್ರಕ್ಕೆ ಹೋಗಲು ಬಹಳ ಮುಜುಗರ ಉಂಟಾಗುತ್ತಿದೆ” ಎಂದು ವಿದ್ಯಾರ್ಥಿನಿಯರು ಹೇಳುತ್ತಾರೆ.

ಹಿರೇನೆರ್ತಿ ಪ್ರೌಢಶಾಲೆ 2

“ಶಾಲೆಯಲ್ಲಿ‌ ಮಕ್ಕಳಿಗೆ ಆಟವಾಡಲು ಸುಸಜ್ಜಿತವಾದ ಮೈದಾನವೂ ಇಲ್ಲ. ಇದ್ದರೂ ಉಪಯೋಗವಿಲ್ಲದಂತಾಗಿದೆ. ಮಳೆ ಬಂದರೆ ಕಾಲಿಡದಂತಾಗುತ್ತದೆ. ಮಲ-ಮೂತ್ರ ವಿಸರ್ಜನೆಗೆ ವಿದ್ಯಾರ್ಥಿಗಳು ಪಕ್ಕದಲ್ಲಿರುವ ಹಳ್ಳಕ್ಕೆ ಹೋಗುವ ಪರಿಸ್ಥಿತಿ ಬಂದೊದಗಿದ್ದು, ಶಾಲೆಯಲ್ಲಿ ನೀರಿನ ಸಮಸ್ಯೆಯೇ ಹೇರಳವಾಗಿ ಕಾಡುತ್ತಿದೆ. ಅಡುಗೆ ಮಾಡುವವರೇ ಶಾಲೆಯಿಂದ 500 ಮೀಟರ್ ದೂರಲ್ಲಿರುವ ಊರಿಗೆ ಹೋಗಿ ನೀರು ತರುತ್ತಾರೆ. ಕೆಲವೊಂದು ಬಾರಿ ತರಗತಿಗಳನ್ನು ಬಿಟ್ಟು ನೀರು ತರಲು ನಾವೇ ಹೋಗಬೇಕು” ಎಂದು ವಿದ್ಯಾರ್ಥಿಗಳು ಹೇಳುತ್ತಾರೆ.

ಹಿರೇನೆರ್ತಿ ಪ್ರೌಢಶಾಲೆ 3

“ಶಾಲೆಯ ಕಟ್ಟಡ ನಿರ್ಮಾಣವಾಗಿ ಶಾಲೆಯಲ್ಲಿ 15 ಕಂಪ್ಯೂಟರ್‌ಗಳಿದ್ದರೂ ನಮಗೆ ಯಾವುದೇ ರೀತಿಯ ಉಪಯೋಗವಾಗಿಲ್ಲ. ಶಾಲೆಗೆ ವಿದ್ಯುತ್ ಸಂಪರ್ಕವನ್ನೇ ಅಳವಡಿಸಿಲ್ಲ. ಒಂದೆರೆಡು ಕಡೆ ಶಾಲಾ ಗೋಡೆಗಳು ಬಿರುಕು ಬಿಟ್ಟಿದ್ದು, ಮಳೆ ಬಂದರೆ ಸೋರುತ್ತದೆ. ಶಾಲೆಯ ಸುತ್ತಲೂ ಕಾಂಪೌಂಡ್ ವ್ಯವಸ್ಥೆ ಇಲ್ಲದಿರುವ ಪರಿಣಾಮ ಜಾನುವಾರು ಮತ್ತು ಸ್ಥಳೀಯರು ಶಾಲಾ ಆವರಣದಲ್ಲೇ ಬಯಲು ಶೌಚ ಮಾಡುವಂತಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಹಿರೇನೆರ್ತಿ ಪ್ರೌಢಶಾಲೆ 5

“ಹಿರೇನೆರ್ತಿ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಗೆ ಮೂಲಸೌಕರ್ಯ ಒದಗಿಸುವಂತೆ ಕೋರಿ ಪಿಡಿಒ, ಶಾಸಕರು ಹಾಗೂ ಸಂಸದರ ಗಮನಕ್ಕೂ ತರಲಾಗಿದೆ. ಪರಿಹಾರಕ್ಕಾಗಿ ಕಾಯುತ್ತಿದ್ದೇವೆ” ಎಂದು ಶಾಲಾ ಎಸ್‌ಡಿಎಂಸಿ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು ಈ ದಿನ.ಕಾಮ್‌ಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಪ್ರತಿಭಟನೆಕಾರರ ಮೇಲೆ ಹಲ್ಲೆ; ಪೊಲೀಸ್ ಅಧಿಕಾರಿ ವಿರುದ್ಧ ಕ್ರಮಕ್ಕೆ ಡಿವೈಎಫ್ಐ ಆಗ್ರಹ

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶೈಲಾ ಲಿಂಗದಾಳ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಈಗಾಗಲೇ ಶಾಲೆಗಾಗಿ ₹43 ಲಕ್ಷದ ಕ್ರಿಯಾ ಯೋಜನೆ ತಯಾರಿಸಿ ತಾಲೂಕಿನ ಕಚೇರಿಗೆ ಕಳುಹಿಸಿಲಾಗಿದೆ. ಅನುದಾನ ಬಿಡುಗಡೆಯಾದ ಕೂಡಲೇ ಶಾಲೆಗೆ ಮೂಲಸೌಕರ್ಯಗಳನ್ನು ಒದಗಿಸಲಾಗುವುದು” ಎಂದು ಭರವಸೆ ನೀಡಿದರು.

ಹಿರೇನೆರ್ತಿ ಪ್ರೌಢಶಾಲೆ 6

ಸಂಬಂಧಿಸಿದ ಅಧಿಕಾರಿಗಳು ಪ್ರೌಢಶಾಲೆಯ ಸಮಸ್ಯೆಗಳ ಬಗ್ಗೆ ಆದಷ್ಟು ಬೇಗ ಗಮನಹರಿಸಿ, ನಮ್ಮ ಶಾಲೆಯ ಸಮಸ್ಯೆಗಳನ್ನು ಬಗೆಹರಿಸಬೇಕು. ಸಾಧ್ಯವಾದಷ್ಟು ಬೇಗ ಮೂಲಸೌಕರ್ಯಗಳನ್ನು ಒದಗಿಸಬೇಕು. ಸರ್ಕಾರ ಯಾವತ್ತು ನಮ್ಮ‌ ಶಾಲೆ ಕಡೆಗೆ ಕಣ್ತೆರೆದು ನೋಡುತ್ತದೆಯೋ, ಸರ್ಕಾರಿ ಶಾಲಾ ಸಮಸ್ಯೆಗಳಿಗೆ‌ ಯಾರು ಸ್ಪಂದಿಸುತ್ತಾರೆ ಎಂಬುದನ್ನು ಕಾದು ನೋಡಬೇಕು” ಎಂದು

IMG 20240805 WA0207
ಶರಣಪ್ಪ ಗೊಲ್ಲರ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X