ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಮಂಗಳವಾರ ವಿಧಾನಸಭೆಯಲ್ಲಿ ಅತ್ಯಾಚಾರ ತಡೆ ಮಸೂದೆಯನ್ನು ಮಂಡಿಸಿದ್ದು ಮಸೂದೆ ಅಂಗೀಕಾರವಾಗಿದೆ. ಮಸೂದೆಯು ಅತ್ಯಾಚಾರದ ಅಪರಾಧಿಗಳಿಗೆ ಮರಣದಂಡನೆಯನ್ನು ವಿಧಿಸಲು ಅವಕಾಶ ನೀಡುವ ಮಸೂದೆಯಾಗಿದೆ.
ಇದನ್ನು ಓದಿದ್ದೀರಾ? ಪಶ್ಚಿಮ ಬಂಗಾಳ | ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ; ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ
ಮಸೂದೆಯಡಿ ಅತ್ಯಾಚಾರ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಅತ್ಯಾಚಾರ ಸಂತ್ರಸ್ತೆ ಸಾವನ್ನಪ್ಪಿದರೆ, ಅತ್ಯಾಚಾರ ಮಾಡಿವುದು ದೃಢಪಟ್ಟರೆ ಆರೋಪಿಗೆ ಜೀವಾವಧಿ ಶಿಕ್ಷೆಯನ್ನೂ ವಿಧಿಸಬಹುದು.
ಅಪರಾಜಿತಾ ಮಹಿಳೆ ಮತ್ತು ಮಕ್ಕಳ ಮಸೂದೆ (ಪಶ್ಚಿಮ ಬಂಗಾಳ ಕ್ರಿಮಿನಲ್ ಕಾನೂನು ಮತ್ತು ತಿದ್ದುಪಡಿ ಮಸೂದೆ)-2024 ಅನ್ನು ಸರ್ಕಾರ ಮಂಡಿಸಿದ್ದು, ಇದರಲ್ಲಿ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಅಪರಾಧಗಳಿಗೆ ಸಂಬಂಧಿಸಿದ ಹೊಸ ನಿಬಂಧನೆಗಳನ್ನು ಪರಿಚಯಿಸಲಾಗಿದೆ.
ಇನ್ನು ಜಿಲ್ಲಾ ಮಟ್ಟದಲ್ಲಿ ವಿಶೇಷ ಕಾರ್ಯಪಡೆಯನ್ನು ರಚಿಸಲು ಈ ಮಸೂದೆಯಲ್ಲಿ ಪ್ರಸ್ತಾಪಿಸುತ್ತದೆ. ಈ ವಿಶೇಷ ಕಾರ್ಯಪಡೆಗೆ ‘ಅಪರಾಜಿತಾ ಟಾಸ್ಕ್ ಫೋರ್ಸ್’ ಎಂದು ಹೆಸರಿಡಲಾಗಿದೆ.
ಕೋಲ್ಕತ್ತಾದಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಎರಡು ದಿನಗಳ ವಿಧಾನಸಭೆಯ ವಿಶೇಷ ಅಧಿವೇಶನಕ್ಕೆ ಕರೆ ನೀಡಿತ್ತು. ಹಾಗೆಯೇ ಮಸೂದೆ ಮಂಡಿಸುವ ಭರವಸೆಯನ್ನು ನೀಡಿತ್ತು.
STORY | West Bengal govt tables anti-rape Bill at state Assembly special session
— Press Trust of India (@PTI_News) September 3, 2024
READ: https://t.co/06tdF1wUJP pic.twitter.com/NIXC2WOI9J
