ಧಾರವಾಡ | ವಕ್ಫ್‌ ಆಸ್ತಿ ಪ್ರಕರಣಗಳನ್ನು ಒಂದು ತಿಂಗಳಲ್ಲಿ ಪರಿಹರಿಸಬೇಕು: ಸಚಿವ ಜಮೀರ್ ಅಹ್ಮದ್ ಸೂಚನೆ

Date:

Advertisements

ಧಾರವಾಡ ಜಿಲ್ಲೆಯಲ್ಲಿ 2‌,453 ವಕ್ಫ್‌ ಆಸ್ತಿಗಳಿದ್ದು, ಇವುಗಳಲ್ಲಿ 481 ಪ್ರಕರಣಗಳು ಮಾತ್ರ ವಿವಿಧ ಹಂತಗಳಲ್ಲಿ ಬಾಕಿಯಿವೆ. ಇವುಗಳನ್ನು ಬೇಗ ಪರಿಹರಿಸಬೇಕು. ಉಳಿದ ಜಿಲ್ಲೆಗಳಿಗೆ ಹೋಲಿಸಿದಾಗ ವಕ್ಫ್‌ ಆಸ್ತಿಗಳ ಸಮೀಕ್ಷೆ, ರಕ್ಷಣೆ ಮಾಡುವಲ್ಲಿ ಜಿಲ್ಲೆಯಲ್ಲಿ ಉತ್ತಮ ಕೆಲಸವಾಗಿದೆ ಎಂದು ವಸತಿ, ವಕ್ಫ್‌ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಬಿ ಝಡ್ ಜಮೀರ್‌ ಅಹ್ಮದ್‌ ಹೇಳಿದರು.

ಧಾರವಾಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಧಾರವಾಡ, ಉತ್ತರ ಕನ್ನಡ ಜಿಲ್ಲೆಯ ಅಧಿಕಾರಿಗಳೊಂದಿಗೆ ವಕ್ಫ್‌ ಮತ್ತು ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ ಮಾತನಾಡಿದರು.

“ಧಾರವಾಡ ಜಿಲ್ಲೆಯಲ್ಲಿ 604 ವಕ್ಫ್‌ ಸಂಸ್ಥೆಗಳಿಗೆ, 2,453 ವಕ್ಫ್‌ ಆಸ್ತಿಗಳಿವೆ. ವಕ್ಫ್‌ಗೆ ಸಂಬಂಧಿಸಿದಂತೆ ಯಾವುದೇ ಆಸ್ತಿಯು ಒತ್ತುವರಿಯಾಗಿರುವ ವರದಿ ಇಲ್ಲ. ವಿವಿಧ ಹಂತಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಅಧಿಕಾರಿಗಳು ಮುಕ್ತಾಯಗೊಳಿಸಬೇಕು. ವಸತಿ ಯೋಜನೆಯಡಿ ಸ್ಲಂಗಳಲ್ಲಿ ವಾಸಿಸುವ ಜನರಿಗೆ ಹಕ್ಕುಪತ್ರ ವಿತರಣೆ ಕಾರ್ಯ ನಡೆದಿದ್ದು, ಅವಳಿನಗರದಲ್ಲಿ ಬಾಕಿಯಿರುವ ಹಕ್ಕುಪತ್ರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಧಾರವಾಡ | ಹಿರೇನೆರ್ತಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮೂಲಸೌಕರ್ಯ ಮರೀಚಿಕೆ; ಅಧಿಕಾರಿ, ಜನಪ್ರತಿನಿಧಿಗಳ ನಿರ್ಲಕ್ಷ್ಯ

“ಉತ್ತರ ಕನ್ನಡ ಜಿಲ್ಲೆಯಲ್ಲಿ ವಕ್ಫ್‌ ಆಸ್ತಿ ಹಾಗೂ ಕಬರಸ್ತಾನಗಳಿಗೆ ಭೂಮಿ ಸಮಸ್ಯೆ ಇದ್ದು, ಈ ಕುರಿತು ಕಂದಾಯ ಹಾಗೂ ಅರಣ್ಯ ಸಚಿವರೊಂದಿಗೆ ಸಭೆ ಜರುಗಿಸಿ, ಸೂಕ್ತ ನಿರ್ದೇಶನ ನೀಡಲಾಗುವುದು” ಎಂದು ತಿಳಿಸಿದರು.

ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ್‌ ಬೆಲ್ಲದ, ಶಾಸಕ ಎನ್ ಎಚ್ ಕೋನರಡ್ಡಿ, ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು, ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಕೆ, ವಕ್ಫ್‌ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಆಯುಕ್ತರು, ರಾಜ್ಯ ಮಟ್ಟದ ಅಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X